Connect with us

MANGALORE

ಕೃಷಿ ಹೊಂಡದಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Published

on

ಮಂಗಳೂರು/ಗದಗ: ಕೈಕಾಲು ಕಟ್ಟಿ ಬಿಸಾಕಿದಂತೆ ವ್ಯಕ್ತಿಯ ಬೆತ್ತಲೆ ಮೃತದೇಹವು ಕಣಗಿನಹಾಳ ಗ್ರಾಮದ ಜಮೀನೊಂದರ ಕೃಷಿ ಹೊಂಡದಲ್ಲಿ ಬುಧವಾರ(ನ.12) ಪತ್ತೆಯಾಗಿದೆ.


ತಲೆ, ಮುಖ ಮತ್ತು ಕುತ್ತಿಗೆಯಲ್ಲಿ ಗಾಯದ ಗುರುತ್ತಿದ್ದು, ಜೊತೆಗೆ ಕೈ ಕಾಲು ಕಟ್ಟಿರುವುದರಿಂದ ಇದು ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.


ಕಣಗಿಹಾಳ ಗ್ರಾಮದ ಈಶ್ವಪ್ಪ ಕುರಿ ಅವರ ಜಮೀನಿನಲ್ಲಿದ್ದ ನೀರಿನ ಹೊಂಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಒಳ ಉಡುಪಿನಿಂದ ಕೈ ಹಾಗೂ ಪ್ಯಾಂಟ್‌ನಿಂದ ಕಾಲು ಕಟ್ಟಿ ನೀರಲ್ಲಿ ಬಿಸಾಕಿದ್ದಾರೆ. ಮೃತರು ಯಾರೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಸಿಸಿಐ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಗ್ರೆನೇಡ್‌ ದಾ*ಳಿಗೆ ಸಂಚು; ಪಾಕ್ ಜತೆ ಸಂಪರ್ಕದಲ್ಲಿದ್ದ10 ಹ್ಯಾಂಡ್ಲರ್‌ಗಳು ಅರೆಸ್ಟ್

ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

DAKSHINA KANNADA

ತಲಪಾಡಿ: ಟ್ಯಾಂಕರ್ ಗೆ ಗುದ್ದಿದ ಕಾರು, ತಪಾಸಣೆ ವೇಳೆ ಕಾರಿನಲ್ಲಿ ಸಿಕ್ತು ಲಕ್ಷಾಂತರ ಮೌಲ್ಯದ ಡ್ರಗ್ಸ್..!

Published

on

ಉಳ್ಳಾಲ: ಕಾರೊಂದು ಟ್ಯಾಂಕರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿದ್ದು ಕಾರಿನೊಳಗೆ ಲಕ್ಷಾಂತರ ರೂ. ಮೌಲ್ಯದ ನಿಷೇಧಿತ ಎಂಡಿಎಂಎ ಪತ್ತೆಯಾದ ಘಟನೆ ಮಂಗಳೂರು ಹೊರ ವಲಯದ ತಲಪಾಡಿಯಲ್ಲಿ ಇಂದು ನಡೆದಿದೆ.

ಮಂಗಳೂರಿನಿಂದ‌ ಉಪ್ಪಳದ ಕಡೆಗೆ ಬರುತ್ತಿದ್ದ ಕಾರು ತಲಪಾಡಿಯ ಆರ್ ಟಿಓ ಚೆಕ್ ಪೋಸ್ಟ್ ಬಳಿ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ  ಆದಮ್‌ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಅಪಘಾತದ ಬಳಿಕ ಪೊಲೀಸರು ತನಿಖೆಗೆ ಕಾರನ್ನು ಪರಿಶೀಲನೆ ನಡೆಸಿದ ವೇಳೆ ಕಾರಿನಲ್ಲಿ ಸುಮಾರು 78 ಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ. ಕಾರು ಚಾಲಕ ಸಿದ್ಧೀಕ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಸಿದ್ಧೀಕ್ ಮತ್ತು ಆದಮ್ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಗಳೆಂದು ತಿಳಿದುಬಂದಿದೆ. ಅಪಘಾತದ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

 

Continue Reading

DAKSHINA KANNADA

ಬೆಂಗಳೂರಿನಿಂದ ಮಾದಕ ವಸ್ತು ತಂದು ಮಂಗಳೂರಿನಲ್ಲಿ ಪೂರೈಕೆ; ಮಹಿಳೆ ಸಹಿತ ಮೂವರ ಬಂಧನ

Published

on

ಮಂಗಳೂರು: ಮಂಗಳೂರಿನ ಸಿಸಿಬಿ ಘಟಕದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರಿನಿಂದ ಮಾದಕ ವಸ್ತು (ಎಂಡಿಎಂಎ) ತಂದು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಪೂರೈಕೆ ಮಾಡುತ್ತಿದ್ದ ಮಂಗಳೂರು ಮಲ್ಲೂರಿನ ಅಹಮ್ಮದ್ ಶಾಬೀತ್ ( 35 ), ಬಂಟ್ವಾಳ ಪರ್ಲಿಯಾದ ಮಹಮ್ಮದ್ ಶಂಶೀರ್ ( 36) ಮತ್ತು ಸರಪಾಡಿಯ ನೌಶೀನ (27) ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


ಡಿ.13ರಂದು ಕಾರಿನಲ್ಲಿ ಬರುತ್ತಿದ್ದ ಅಹಮ್ಮದ್ ಶಾಬೀತ್, ಮತ್ತು ಆತನ ತಂಡವನ್ನು ಅರ್ಕುಳ ಬಳಿ ವಶಕ್ಕೆ ಪಡೆದು ದಸ್ತಗಿರಿ ಮಾಡಿ ಅವರ ಬಳಿ ಇದ್ದ ಮಾದಕ ವಸ್ತು ಮತ್ತು ಸೊತ್ತುಗಳನ್ನು ವಶಪಡಿಸಿದ್ದಾರೆ.

ಮಾದಕ ವಸ್ತು ಎಂಡಿಎಂಎ 90 ಗ್ರಾಂ, ಕಾರು ಮತ್ತು ಮೊಬೈಲ್ ಪೋನ್‌ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಹಮ್ಮದ್ ಶಾಬೀತ್ ಎಂಬವನು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಬೆಂಗಳೂರಿನಿಂದ ಮಾದಕ ವಸ್ತು ಎಂಡಿಎಂಎನ್ನು ತಂದು ನಿರಂತರವಾಗಿ ಪೂರೈಕೆ ಮಾಡುತ್ತಿದ್ದು, ಅಲ್ಲದೇ ಈ ತಂಡದಲ್ಲಿ ಯಾರಿಗೂ ಅನುಮಾನ ಬಾರದಂತೆ ಮಹಿಳೆಯಾದ ನೌಶಿನ ಎಂಬಾಕೆಯ ನೆರವಿನಲ್ಲಿ ಎಂಡಿಎಂಎಯನ್ನು ಸಾಗಾಟ ಮಾಡುತ್ತಿರುವ ಮಾಹಿತಿಯನ್ನು ಕಲೆ ಹಾಕಿದ ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ತಂಡವನ್ನು ದಸ್ತಗಿರಿ ಮಾಡಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಅಕ್ರಮ ಗೋ ಸಾಗಾಟ ಪ್ರಕರಣ; ಜಾನುವಾರು ನೀಡಿದ ವ್ಯಕ್ತಿ ಮನೆ, ಕೊಟ್ಟಿಗೆ ಜಪ್ತಿ

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿಎಚ್ ತಿಳಿಸಿದ್ದಾರೆ.

Continue Reading

DAKSHINA KANNADA

ಮಂಗಳೂರು: ವಿಚ್ಛೇದನಕ್ಕೆ ಬಂದ ಎರಡು ಜೋಡಿಗಳು-ಸಂಧಾನ ಮಾಡಿ ಒಂದಾಗಿಸಿದ ಲೋಕ್ ಅದಾಲತ್

Published

on

ಮಂಗಳೂರು: ವಿಚ್ಛೇದನಕ್ಕೆ ಮುಂದಾಗಿದ್ದ ಎರಡು ಜೋಡಿಗಳು ಮತ್ತೆ ಒಂದಾದ ವಿಶೇಷ ಹಾಗೂ ಹೃದಯಸ್ಪರ್ಶಿ ವಿದ್ಯಮಾನಕ್ಕೆ ಶನಿವಾರ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ಬೈಠಕ್‌ ಸಾಕ್ಷಿಯಾಯಿತು.

ಈ ಎರಡು ಜೋಡಿಗಳ ದಾಂಪತ್ಯ ಜೀವನದಲ್ಲಿ ಯಾವುದೋ ಕಾರಣಕ್ಕೆ ಮನಸ್ತಾಪ ಉಂಟಾಗಿದ್ದ ಕಾರಣ ದಂಪತಿಗಳು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಬಳಿಕ ವಿಚಾರಣೆ ವೇಳೆ ಈ ಪ್ರಕರಣವನ್ನು ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದ ಮೂಲಕ ಸರಿಪಡಿಸಲು ಪ್ರಯತ್ನ ನಡೆಯಿತು. ಪತಿ ಮತ್ತು ಪತ್ನಿಯ ಮಧ್ಯೆ ಸಂಧಾನ ಏರ್ಪಡಿಸಿ ಮತ್ತೆ ಒಂದುಗೂಡಿ ದಾಂಪತ್ಯ ಜೀವನ ಮುಂದುವರಿಸುವ ಬಗ್ಗೆ ಉಭಯೇತರರಿಗೂ ಮನವರಿಕೆ ಮಾಡಲಾಗಿತ್ತು.

ಸಂಧಾನದ ವೇಳೆ ದಂಪತಿಗಳು ಮತ್ತೆ ಒಂದುಗೂಡಿ ಜೀವನ ಮುಂದುವರಿಸಲು ಒಪ್ಪಿದ್ದರು. ಅದರಂತೆ ಶನಿವಾರ ಲೋಕ ಅದಾಲತ್ ಗೆ ಆಗಮಿಸಿದ್ದ ಎರಡೂ ಜೋಡಿಗಳು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಲಕ್ಷ್ಮೀ ನಾರಾಯಣ ಭಟ್‌ ಕೆ.  ಅವರ ಸಮಕ್ಷಮದಲ್ಲಿ ಪರಸ್ಪರ ಹಾರ ಬದಲಾಯಿಸುವ ಮುಖೇನ  ಒಂದಾಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿತು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ವಕೀಲರು ಉಪಸ್ಥಿತರಿದ್ದು, ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.  ಲೋಕ ಅದಾಲತ್ ಅಧಿವೇಶನದಲ್ಲಿ ಭಾಗವಹಿಸಿದ್ದ ಎರಡೂ ಜೋಡಿಗಳು ಮತ್ತೆ ಒಂದಾಗುವ ಮೂಲಕ ತಮ್ಮ ವಿಚ್ಛೇದನದ ಹೋರಾಟವನ್ನು ಕೊನೆಗೊಳಿಸಿದ ಈ ವಿದ್ಯಮಾನ ಮಾದರಿಯಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಅವರು ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page