Connect with us

ಬಸರೂರು ಕಾಶಿ ಮಠದ ವೆಬ್ ಸೈಟ್ ಅನಾವರಣಗೊಳಿಸಿದ ಶ್ರೀಗಳು

Published

on

ಬಸರೂರು ಕಾಶಿ ಮಠದ ವೆಬ್ ಸೈಟ್ ಅನಾವರಣಗೊಳಿಸಿದ ಶ್ರೀಗಳು 

ಮಂಗಳೂರು : ಶ್ರೀ ಕಾಶಿ ಮಠ ಸಂಸ್ಥಾನದ ದ್ವಿತೀಯ ಯತಿವರ್ಯರಾದ ಪರಮ ಪೂಜ್ಯ ಶ್ರೀಮದ್ ಕೇಶವೇಂದ್ರ ತೀರ್ಥ ಸ್ವಾಮೀಜಿಯವರ ೩೫೦ ನೇ ಪುಣ್ಯ ತಿಥಿ ಆರಾಧನಾ ಮಹೋತ್ಸವ ಉಡುಪಿ ಜಿಲ್ಲೆಯ ಬಸರೂರಿನ ಶಾಖಾ ಮಠದಲ್ಲಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನ ದಲ್ಲಿ ನಡೆಯಲಿರುವುದು.

ಇದೆ ಸಂದರ್ಭದಲ್ಲಿ ಶ್ರೀಗಳವರ ವಸಂತ ಮಾಸಾಚರಣೆ ಹಾಗೂ ಬಸರೂರಿನ ಶಾಖಾ ಮಠದಲ್ಲಿರುವ ಉಭಯ ಯತಿವರ್ಯರಾದ ಶ್ರೀಮದ್ ಕೇಶವೇಂದ್ರ ತೀರ್ಥ ಸ್ವಾಮೀಜಿ ಮತ್ತು ಶ್ರೀಮದ್ ಭುವನೇಂದ್ರ ತೀರ್ಥ ಸ್ವಾಮೀಜಿಯವರ ವೃನ್ದಾವನ ಹಾಗೂ ಶ್ರೀ ವೆಂಕಟರಮಣ ದೇವರ ಸಹಸ್ರ ಕುಂಭಾಭಿಷೇಕ ಮಾರ್ಚ್ ೧೨ ರಂದು ನಡೆಯಲಿರುವುದು.
ದೇಶ ವಿದೇಶದಲ್ಲಿರುವ ಭಜಕರಿಗೆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಹಾಗೂ ಪ್ರಚಾರಕ್ಕಾಗಿ ಈಗಿನ ತಂತ್ರ ಜ್ಞಾನ ಬಳಸಿ ನೂತನ ವೆಬ್ಸೈಟ್ www.shreekashimathbasrur.in ತಯಾರಿಸಿದ್ದು ಸಮಾಜ ಭಾಂದವರು ಇದರ ಸದುಪಯೋಗ ಪಡಕೊಳ್ಳಬೇಕಾಗಿ ಈ ಮೂಲಕ ವಿನಂತಿಸಿ ಕೊಳ್ಳಲಾಗಿದೆ.
ನೂತನವಾಗಿ ತಯಾರಿಸಿದ ವೆಬ್ ಸೈಟನ್ನು ಶ್ರೀ ಗಳವರ ದಿವ್ಯ ಹಸ್ತಗಳಿಂದ ಶುಕ್ರವಾರ ಕೊಂಚಾಡಿ ಕಾಶಿ ಮಠದಲ್ಲಿ ಬಿಡುಗಡೆ ಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಹೋತ್ಸವ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಕೋಟೇಶ್ವರ ಶ್ರೀಧರ್ ಕಾಮತ್, ವಸಂತ ಮಾಸ ಮಹೋತ್ಸವ ಸಮಿತಿಯ ಕಾರ್ಯದರ್ಶಿ ಕೋಟೇಶ್ವರ ದಿನೇಶ್ ಕಾಮತ್ , ಮಂಗಳೂರು ಶ್ರೀ ವೆಂಕಟರಮಣ ದೇವಳದ ಮೊಕ್ತೇಸರರಾದ ಪ್ರಶಾಂತ್ ರಾವ್ , ಲೆಕ್ಕ ಪರಿಶೋಧಕ ಎಂ . ಜಗನ್ನಾಥ್ ಕಾಮತ್ , ವೆಬ್ಸೈಟ್ ತಯಾರಿಸಿದ ಕೋಟೇಶ್ವರ ರಮೇಶ್ ಭಟ್ ಹಾಗೂ ವ್ಯವಸ್ಥಾಪಕ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಕಲಾಯಿ ಅಶ್ರಫ್ ಹತ್ಯೆಗೆ ರಿವೇಂಜ್ ಪೋಸ್ಟ್..! 16 ಇನ್ಸ್ಟಾಗ್ರಾಂ ಖಾತೆ ವಿರುದ್ಧ FIR

Published

on

ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶವಾದ ಕರಾವಳಿಯಲ್ಲಿ ಧರ್ಮ ದಂಗಲ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದೆ ಎನ್ನುವಷ್ಟರಲ್ಲಿ ಮತ್ತೆ ಹತ್ಯೆಗೆ ಪ್ರಚೋದನೆ ನೀಡುವ ಉದ್ದೇಶದಲ್ಲಿ ಹಾಕಿರುವಂತಹ ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಭಯ ಹುಟ್ಟಿಸಿದೆ.

2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲ್​​​ಗೆ ಎಚ್ಚರಿಕೆ ನೀಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ರವಾನೆಯಾಗುತ್ತಿದೆ.

Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್​​ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್​​ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ‌ ಎಚ್ಚರಿಕೆ ನೀಡಲಾಗಿದೆ. ಭರತ್ ಕುಮ್ಡೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ಸ್ಟಾಗ್ರಾಮ್​​ ಪೋಸ್ಟ್​ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್​​ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್​​ ಖಾತೆಗಳ ವಿರುದ್ಧ ಎಫ್​ಐಆರ್​ ಮಾಡಿದೆ. ಜೊತೆಗೆ ಆಯಕಟ್ಡಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್​​ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ.

ಈ ಹಿಂದೆಯೂ ಭರತ್ ಕುಮ್ಡೇಲ್​​ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಬ್ಯಾರಿ ರಾಯಲ್ ನವಾಬ್ ,  ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್‌ ಕುಮ್ಡೇಲ್​​​ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ ಎಂದು ಪೋಸ್ಟ್​​ ಮಾಡಲಾಗಿತ್ತು. ಇದೀಗ ಇಂತಹ ಪ್ರಚೋದನಾಕಾರಿ ಪೋಸ್ಟ್ ಹಾಕುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Continue Reading

STATE

ಬೆಳಗಾವಿ ಅಧಿವೇಶನದಲ್ಲಿ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ 50 ಲಕ್ಷ ರೂ. ನೀಡಲು ಶಾಸಕರ ಮನವಿ

Published

on

ಬೆಳಗಾವಿ: ಢಾಕಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಗೆದ್ದ ಕಾರ್ಕಳ್ ಮಿಯ್ಯಾರಿನ ಧನಲಕ್ಷ್ಮಿ ಪೂಜಾರಿ ಅವರು ಇಂದು ತನ್ನ ಕೋಚ್‌ ತೇಜಸ್ವಿನಿ ಪೈ ಅವರ ಜತೆಗೆ ಬೆಳವಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದಅಧಿವೇಶನದ ಕಲಾಪ ವೀಕ್ಷಿಸಿದರು.

 

ಈ ಸಂದರ್ಭದಲ್ಲಿ ಧನ ಲಕ್ಷ್ಮಿ ಅವರನ್ನು ಸರಕಾರದ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಧನಲಕ್ಷ್ಮಿ ಅದರ ಸಾಧನೆಯನ್ನು ಗುರುತಿಸಿ ಸರಕಾರದ ವತಿಯಿಂದ ಈಗಾಗಲೇ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿದೆ ಎಂದು ತಿಳಿಸಿದರು.

ಧನಲಕ್ಷ್ಮಿ ಮತ್ತು ಆಕೆಯ ತರಬೇತುದಾರರಾದ ತೇಜಸ್ವಿನಿ ಪೈ ಅವರನ್ನು ಅಭಿನಂದಿಸುತ್ತೇನೆ ಎಂದರು. ಧನಲಕ್ಞ್ಮಿ ಅವರಿಗೆ  ಕನಿಷ್ಟ 50 ಲಕ್ಷ ರೂಪಾಯಿ ಬಹುಮಾನ ನೀಡ ಬೇಕೆಂದು ಶಾಸಕ ವೇದವ್ಯಾಸ ಕಾಮತ್ ಒತ್ತಾಯಿಸಿದರು.ಆಕೆಗೆ ಸರಕಾರಿ ಉದ್ಯೋಗ ಕೊಡಿಸಬೇಕೆಂದು ವಿ ಸುನಿಲ್ ಕುಮಾರ್ ಮನವಿ ಮಾಡಿದರು.

Continue Reading

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page