Connect with us

DAKSHINA KANNADA

ಉಪ್ಪಿನಂಗಡಿ: ಅಕ್ರಮ ಮರಳು ಸಾಗಟದ ಮೇಲೆ ದಾಳಿ- 2ದೋಣಿ, ಹಿಟಾಚಿ ವಶಕ್ಕೆ

Published

on

ನೇತ್ರಾವತಿ ನದಿ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉಪ್ಪಿನಂಗಡಿ: ನೇತ್ರಾವತಿ ನದಿ ದಡದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಘಟನೆ ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆ ಬಳಿಯ ಹೊಸಮೊಗ್ರು ಎಂಬಲ್ಲಿ ನಡೆದಿದೆ.

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮರಳುಗಾರಿಕೆಗೆ ಬಳಸಿದ ಎರಡು ದೋಣಿ ಹಾಗೂ ಒಂದು ಹಿಟಾಚಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹೊಸಮೊಗ್ರು ಎಂಬಲ್ಲಿ ನೇತ್ರಾವತಿ ನದಿ ದಡದಲ್ಲಿ ಡ್ರಿಜ್ಜಿಂಗ್ ಯಂತ್ರ ಬಳಸಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಪಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ಸಂದರ್ಭ ಅಲ್ಲಿ ಅಕ್ರಮವಾಗಿ ಮರಳು ತೆಗೆಯಲು ಬಳಸುತ್ತಿದ್ದ ಎರಡು ದೋಣಿ ಹಾಗೂ ಒಂದು ಹಿಟಾಚಿ ಮತ್ತು ಡ್ರಿಜ್ಜಿಂಗ್ ಯಂತ್ರವನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

DAKSHINA KANNADA

ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

Published

on

ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಹಲವು ಕಡೆಗಳಲ್ಲಿ ಅಪಾರ ಹಾನಿಗೂ ಕಾರಣವಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತಕ್ಕೊಳಗಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

ಉಷಾ ಅಶೋಕ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತಕ್ಕೊಳಗಾಗಿದೆ. ಮನೆಯ ಹಲವು ಸಾಮಾಗ್ರಿಗೆ ಹಾನಿ ಉಂಟಾಗಿದೆ.

ಮನೆಯಲ್ಲಿ ಜನರಿದ್ದ ವೇಳೆ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತವಾಗಿದ್ದರೂ ಮನೆ ಮಂದಿ ಪ್ರಾಣಾಪಾಯದಿಂದ ಪಾರು ಆಗಿದ್ದಾರೆ.

Continue Reading

DAKSHINA KANNADA

ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮ*ಹತ್ಯೆ

Published

on

ಪುತ್ತೂರು: 7 ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಚಿಕ್ಕಪುತ್ತೂರಿನಲ್ಲಿ ನಡೆದಿದೆ.

 

ರೇಶ್ಮಾ(28) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಸುರತ್ಕಲ್ ಮೂಲದ ರೇಶ್ಮಾ ನಾಲ್ಕು ವರ್ಷಗಳ ಹಿಂದೆಯಷ್ಟೇ ಚಿಂತನ್ ಅವರೊಂದಿಗೆ ವಿವಾಹವಾಗಿದ್ದರು. ಅಲ್ಲದೇ ಈ ದಂಪತಿಗೆ ಓರ್ವ ಪುತ್ರಿಯೂ ಇದ್ದಾಳೆ. ಏಳು ತಿಂಗಳ ಗರ್ಭಿಣಿ ಆಗಿದ್ದ ಈಕೆ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

READ IN ENGLISH : https://www.nammakudlaenglish.com/puttur-7-month-pregnant-woman-dies-by-suicide/

ಇದನ್ನೂ ಓದಿ: ಬೈಕಂಪಾಡಿಯಲ್ಲಿ ರಸ್ತೆಗೆ ಉರುಳಿದ ಮರ; ತಪ್ಪಿದ ಅನಾಹುತ

ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Continue Reading

DAKSHINA KANNADA

ದೇರಳಕಟ್ಟೆ: ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ; 147 ವಿದ್ಯಾರ್ಥಿಗಳು ಅಪಾಯದಿಂದ ಪಾರು

Published

on

ದೇರಳಕಟ್ಟೆ: ಕೊಣಾಜೆಯ ದೇರಳಕಟ್ಟೆ ಜಂಕ್ಷನ್‌ ನಲ್ಲಿರುವ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿ, ಕಟ್ಟಡದೊಳಕ್ಕಿದ್ದ 147 ವಿದ್ಯಾರ್ಥಿಗಳು ಯಾವುದೇ ಅಪಾಯವಿಲ್ಲದೆ‌ ಪಾರಾಗಿದ್ದು, ಅವರನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.

ರವಿವಾರ ರಾತ್ರಿ 8 ಗಂಟೆಯ ಹೊತ್ತಿಗೆ ಕಟ್ಟಡದ ನೆಲಮಹಡಿಯಲ್ಲಿರುವ ಸ್ವಿಚ್ ಬೋರ್ಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ಹರಡಲು ಆರಂಭವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸ್ಥಳೀಯರು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸಲು ಉಪಯೋಗಿಸುವ ಸಾಮಗ್ರಿಗಳ ಸಹಾಯದಿಂದ ಬೆಂಕಿ ನಂದಿಸಲು ಆರಂಭಿಸಿದ್ದಾರೆ. ತಕ್ಷಣ ಕಟ್ಟಡದ ಮೇಲಿದ್ದ 147 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರ ತರುವಲ್ಲಿ ಯಶಸ್ವಿಯಾಗಿದ್ದಾರೆ.

READ IN ENGLISH : https://www.nammakudlaenglish.com/derlakatte-fire-breaks-out-in-building-147-students-escape-unharmed/

ಇದನ್ನೂ ಓದಿ: ಮಂಗಳೂರು: ಭಾರೀ ಮಳೆಗೆ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ತಡವಾಗಿ ಆಗಮಿಸಿದ್ದು, ಅದಾಗಲೇ ಭಾಗಶ: ಬೆಂಕಿಯನ್ನು ನಂದಿಸುವಲ್ಲಿ ಸ್ಥಳೀಯರು ಸಫಲರಾಗಿದ್ದು, ವಿದ್ಯಾರ್ಥಿನಿಯರೆಲ್ಲರನ್ನೂ ಶಿಕ್ಷಣ ಸಂಸ್ಥೆ ಬೇರೆ ವಿದ್ಯಾರ್ಥಿನಿ ನಿಲಯಗಳಿಗೆ ಸ್ಥಳಾಂತರಿಸಿದೆ. ವೆಂಕಟ್ ರೆಸಿಡೆನ್ಸಿ ಐದು ಮಹಡಿಯ ಕಟ್ಟಡದ ಕೆಳಗಿನ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಕೆಳಗಿನ ವಿದ್ಯುತ್ ಬೋರ್ಡ್ಗಳೆಲ್ಲವೂ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳೀಯರು ಕಾರ್ಯಾಚರಿಸಿ ಬೆಂಕಿ ನಂದಿಸಿದ್ದಾರೆ.

147ವಿದ್ಯಾರ್ಥಿಗಳನ್ನು ಖಾಸಗಿ ಸಂಸ್ಥೆಯವರೇ ಸ್ಥಳಾಂತರ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಹಶೀಲ್ದಾರ್ ಪುಟ್ಟರಾಜು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಸಹಕರಿಸಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page