Connect with us

BANTWAL

ಎಐಸಿಸಿ ಸದಸ್ಯರಾಗಿ ರಮಾನಾಥ್‌ ರೈ-ಖಾದರ್‌-ಐವನ್‌ ನೇಮಕ

Published

on

ಮಂಗಳೂರು: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನೂತನ ಸದಸ್ಯರಾಗಿ ದ.ಕ. ಜಿಲ್ಲೆಯಿಂದ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಅವರು ನೇಮಕವಾಗಿದ್ದಾರೆ.


ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ವಿಷಯ ಪರಿಣಿತರಾಗಿ ಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ್ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿರುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BANTWAL

ಅಬ್ದುಲ್ ರಹಿಮಾನ್ ಕೊ*ಲೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

Published

on

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಪಿಕ್‌ಅಪ್ ಚಾಲಕ ಕೊಳತ್ತಮಜಲಿನ ಅಬ್ದುಲ್ ರಹಿಮಾನ್  ಹ*ತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹ*ಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಟ್ವಾಳ ಪುದು ಗ್ರಾಮದ ನಿವಾಸಿ ಪ್ರದೀಪ್ (34) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 9 ಮಂದಿಯನ್ನು ಬಂಧಿಸಲಾಗಿದೆ ಪೊಲೀಸ್ ಪ್ರಕಟಣೆ ತಿಳಿಸಿದೆ.

 

Continue Reading

BANTWAL

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಲಕ್ಷ ಕುಂಕುಮಾರ್ಚನೆ ಸೇವೆ

Published

on

ಬಂಟ್ವಾಳ: ಗಂಜಿಮಠದ ಶ್ರೀ ಮೃತ್ಯುಂಜಯೇಶ್ವರ ಕ್ಷೇತ್ರದ ಪುನರ್ ನಿರ್ಮಾಣದ ಸಲುವಾಗಿ ಸಾವಿರ ಸೀಮೆಯ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಲಕ್ಷ ಕುಂಕುಮಾರ್ಚನೆ ಸೇವೆ ನಡೆಯಿತು.

ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಲಕ್ಷ ಕುಂಕುಮಾರ್ಚನೆ ಮಾಡಲಾಯಿತು.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿ.ಪಂ. ಸಿಇಒ ಡಾ. ಆನಂದ್ ವರ್ಗಾವಣೆ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ನೇತೃತ್ವದಲ್ಲಿ ಜರಗಿದ ಕುಂಕುಮಾರ್ಚನೆಯಲ್ಲಿ ಕ್ಷೇತ್ರದ ಪ್ರದಾನ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಪರಮೇಶ್ವರ ಭಟ್, ಕೆ.ರಾಮ್ ಭಟ್, ಸಹ ಅರ್ಚಕರಾದ ಪದ್ಮನಾಭ ಭಟ್, ಅನಂತಪದ್ಮನಾಭ ಭಟ್ ಮೊದಲಾದವರಿದ್ದರು.

Continue Reading

BANTWAL

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Published

on

ಬಂಟ್ವಾಳ: ಪಿಯುಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ತುಂಬೆ ಬಳಿ ನಡೆದಿದೆ.

ತುಂಬೆಯ ಪರ್ಲಕ್ಕೆ ನಿವಾಸಿಗಳಾದ ಕರುಣಾಕರ ಗಟ್ಟಿ ಮತ್ತು ಶೋಭಾ ಗಟ್ಟಿ ದಂಪತಿಯ ಏಕೈಕ ಪುತ್ರ 17 ವರ್ಷದ ತೇಜಸ್ ಗಟ್ಟಿ ಮೃತ ವಿದ್ಯಾರ್ಥಿ. ತೇಜಸ್ ಗಟ್ಟಿ ಮೊಡಂಕಾಪು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ. ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ತೇಜಸ್ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಹಾವೇರಿಯಲ್ಲಿ ಹೃದಯಾಘಾತಕ್ಕೆ ಲಾರಿ ಚಾಲಕ ಬಲಿ

ತಂದೆ ಕರುಣಾಕರ ಎಂದಿನಂತೆ ಮನೆಗೆ ಬಂದಾಗ ಬಾಗಿಲು ತೆರೆದಿದ್ದು, ಒಳಗೆ ನೋಡಿದಾಗ ತೇಜಸ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಶನಿವಾರ ಕಾಲೇಜಿನಲ್ಲಿ ತೇಜಸ್ ಮೊಬೈಲ್ ಬಳಸಿ ಉಪನ್ಯಾಸಕರಿಗೆ ಸಿಕ್ಕಿಬಿದ್ದಿದ್ದನಂತೆ. ಕಾಲೇಜು ಆಡಳಿತದವರು ಮೊಬೈಲ್ ವಶಪಡಿಸಿ ಪೋಷಕರಿಗೆ ವಿಚಾರ ತಿಳಿಸಿದ್ದರಂತೆ.

ಕಾಲೇಜು ಆಡಳಿತವು ಸೋಮವಾರವೂ ಮೊಬೈಲನ್ನು ತೇಜಸ್ ಗೆ ವಾಪಸ್ ನೀಡಿರಲಿಲ್ಲ ಎನ್ನಲಾಗಿದೆ. ಇದೇ ವಿಚಾರಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Continue Reading
Advertisement

Trending

Copyright © 2025 Namma Kudla News

You cannot copy content of this page