Connect with us

LATEST NEWS

ಸಾವಿರಕ್ಕೂ ಹೆಚ್ಚು ಮಂದಿಯ ಬಲವಂತದ ಮತಾಂತರ : ಇಬ್ಬರನ್ನು ಬಂಧಿಸಿದ ಎಟಿಎಸ್..!

Published

on

ಉತ್ತರ ಪ್ರದೇಶ : ಸಾವಿರಕ್ಕೂ ಅಧಿಕ ಮಂದಿಯನ್ನು ಬಲವಂತವಾಗಿ ಮತಾಂತರ(ಧಾರ್ಮಿಕ) ಮಾಡಿರುವ ಇಬ್ಬರು ಆರೋಪಿಗಳ ಬಂಧನ ಮಾಡುವಲ್ಲಿ ಉತ್ತರ ಪ್ರದೇಶ ಭಯೋತ್ಪಾದಕ ನಿಗ್ರಹ ದಳ ಯಶಸ್ವಿಯಾಗಿದೆ.

ಉತ್ತರ ಪ್ರದೇಶ, ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇವರು ಅಸಹಾಯಕರನ್ನು ಬಲವಂತವಾಗಿ ಮತಾಂತರ ಮಾಡುತ್ತಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳ(ATS) ಇಬ್ಬರ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್​ಐಗೆ ಸೇರಿದವರು ಎಂದು ವರದಿಯಾಗಿದೆ.
ಜತೆಗೆ ಅದರಿಂದ ಧನಸಹಾಯ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಬಂಧಿತ ಇಬ್ಬರು ಪಾಕಿಸ್ತಾನದ ISI ಏಜೆಂಟ್​ರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಸಹ ಬಹಿರಂಗಗೊಂಡಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಉತ್ತರ ಪ್ರದೇಶ ಎಡಿಜಿ ಪ್ರಶಾಂತ್ ಕುಮಾರ್​, ಆರೋಪಿಗಳನ್ನು ಜಹಾಂಗೀರ್​ ಮತ್ತು ಉಮರ್​ ಗೌತಮ್ ಎಂದು ಗುರುತಿಸಲಾಗಿದೆ.

ಇಲ್ಲಿಯವರೆಗೆ ಸಾವಿರಕ್ಕೂ ಅಧಿಕ ಕಿವುಡ ಮತ್ತು ಮೂಕ ಮಕ್ಕಳನ್ನು ಮತಾಂತರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಮುಖವಾಗಿ ಕಿವುಡ ವಿದ್ಯಾರ್ಥಿಗಳು, ಅತಿ ಕಡಿಮೆ ಆದಾಯ ಹೊಂದಿರುವ ಉದ್ಯೋಗಿಗಳು ಹಾಗೂ ಹೆಣ್ಣು ಮಕ್ಕಳಿಗೆ ವಿವಾಹದ ಆಮಿಷ ಒಡ್ಡುವ ಮೂಲಕ ಮತಾಂತರಗೊಳಿಸುತ್ತಿದ್ದರು ಎಂದು ತಿಳಿಸಿದ್ದಾರೆ.

ಅದಕ್ಕಾಗಿ ಐಎಸ್​ಐ ಮತ್ತು ವಿದೇಶಗಳಿಂದಲೂ ಹಣ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನವದೆಹಲಿಯ ಜಾಮಿಯಾ ನಗರದಿಂದ ಇವರ ಬಂಧನ ಮಾಡಲಾಗಿದ್ದು, ವಿಚಾರಣೆ ನಡೆಸಿದಾಗ ಸಾವಿರಕ್ಕೂ ಹೆಚ್ಚು ಜನರ ಮತಾಂತರಗೊಳಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಇವರ ವಿರುದ್ಧ ವಿವಿಧ ಸೆಕ್ಷನ್​ಗಳ ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿರುವ ಎಡಿಜಿ ಪ್ರಶಾಂತ್ ಕುಮಾರ್​, ನೋಯ್ಡಾ, ಕಾನ್ಪುರ, ಮಥುರಾ ಮತ್ತು ವಾರಾಣಸಿ ಸೇರಿದಂತೆ ಇನ್ನೂ ಅನೇಕ ಸ್ಥಳಗಳಲ್ಲಿ ಈ ಜನರು ಮತಾಂತರದ ದಂಧೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

LATEST NEWS

ಉಡುಪಿ: ಫ್ಲ್ಯಾಟ್, ಚಿನ್ನ ನೀಡುವುದಾಗಿ ನಂಬಿಸಿ ಉದ್ಯಮಿಗೆ ಕೋಟಿ ಕೋಟಿ ವಂಚನೆ

Published

on

ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿ ಎಂಬವರಿಗೆ ಉಡುಪಿ ಮೂಲದ ದಂಪತಿ ಸುಹಾಸಿನಿ ಶೆಟ್ಟಿ ಹಾಗೂ ಪತಿ ಪುನೀತ್ ಶೆಟ್ಟಿ ಎಂಬವರು ಸುಮಾರು 4.78 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ ಎಂದು ದಂಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ವರೆಗೆ ಹಂತ ಹಂತವಾಗಿ 4.78 ಕೋಟಿ ರೂಪಾಯಿ ಹಣ ವರ್ಗಾಯಿಸಿಕೊಂಡಿದ್ದಾರೆ. ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಹಾಗೂ ಸ್ಕ್ರಾಪ್ ವ್ಯವಹಾರದಲ್ಲಿ ಲಾಭಕರ ಹೂಡಿಕೆ ಮಾಡಿಕೊಡುವುದಾಗಿ ನೀಡಿದ ಭರವಸೆಯನ್ನು ನಂಬಿದ ಹಿನ್ನೆಲೆಯಲ್ಲಿ ತಾನು ಮೋಸ ಹೋಗಿದ್ದಾಗಿ ದೂರು ನೀಡಲಾಗಿದೆ. ಆಕೆ ಜೊತೆ ಪತಿ ಕೂಡಾ ಕೈಜೋಡಿಸಿದ್ದಾರೆ.

2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ಸ್ಟೇ ಆದೇಶ ಪಡೆದಿದ್ದರು. ಈ ನಡುವೆ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎನ್ನುವವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ. ಇದೀಗ ಸುಹಾಸಿನಿ ಮತ್ತು ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡು ಮಂಗಳೂರಿನಲ್ಲೂ ಇದೇ ರೀತಿ ಮೋಸ ಮಾಡಿದ್ದಾರೆ.

ಇದನ್ನೂ ಓದಿ: ಮದುವೆ ಮನೆ ಬಫೆ ಆ್ಯಪ್‌ ಅಭಿವೃದ್ಧಿಪಡಿಸಿದ ಬೆಂಗಳೂರು ಯುವಕನಿಗೆ ಕೊಲೆ ಬೆದರಿಕೆ!

ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ದೊರಕಿಸಿಕೊಡುವಂತೆ ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿರುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Continue Reading

LATEST NEWS

‘ಸಾರಿ ಮಮ್ಮಿ-ಪಾಪ, ಐ ಲವ್ ಯು’ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Published

on

ಬೀದರ್‌: 10ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ದುರದೃಷ್ಟಕರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ ನಡೆದಿದೆ.


ಶರತ್ ಪರಮೇಶ್ವರ್(16), ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ನಿವಾಸಿ. ವಿದ್ಯಾರ್ಥಿಯು ಸಾಯುವ ಮೊದಲು “Sorry Mummy, Papa… I Love You” ಮತ್ತು “Keep Smile Forever” ಎಂದು ಬರೆದ ಹೃದಯವಿದ್ರಾವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಬಾಲಕ ಪರೀಕ್ಷೆಗೆ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕಂಡ್ಲೂರು ಸೇತುವೆ ಬಳಿ ಅಕ್ರಮ ಮರಳು ಅಡ್ಡೆಗೆ ದಾಳಿ; 11 ಮಂದಿ ಆರೋಪಿಗಳ ಬಂಧನ

ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಸತಿ ಶಾಲೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Continue Reading

bangalore

ಮದುವೆ ಮನೆ ಬಫೆ ಆ್ಯಪ್‌ ಅಭಿವೃದ್ಧಿಪಡಿಸಿದ ಬೆಂಗಳೂರು ಯುವಕನಿಗೆ ಕೊಲೆ ಬೆದರಿಕೆ!

Published

on

ಬೆಂಗಳೂರು: ಬೆಂಗಳೂರಿನ ಟೆಕ್ಕಿಯೊಬ್ಬರು ತಮಾಷೆಗಾಗಿ ರೂಪಿಸಿದ AI ಆಧಾರಿತ ಬಫೆ ಆ್ಯಪ್ ಆನ್‌ಲೈನ್‌ನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಅವರಿಗೆ ಕೊಲೆ ಬೆದರಿಕೆಗಳು ಬಂದಿರುವ ಘಟನೆ ವರದಿಯಾಗಿದೆ.


ಬೆಂಗಳೂರಿನ ಪಂಕಜ್ ಎಂಬ ಟೆಕ್ಕಿ, ತಮಾಷೆಯಾಗಿ ಭಾರತೀಯ ವಿವಾಹಗಳ ಸಂಭ್ರಮಗಳಲ್ಲಿ ಬೃಹತ್ ಬಫೆ ವ್ಯವಸ್ಥೆ ನಿರ್ಹಿಸಿ, ಯಾವ ಆಹಾರವನ್ನು ಸೇವಿಸಬೇಕು ಮತ್ತು ಯಾವುದನ್ನು ಬಿಡಬೇಕು ಎಂದು ನಿರ್ಧರಿಸಲು ಸಹಾಯ ಮಾಡುವ ಬಫೆಟ್‌ ಎಂಬ ಕೃತಕ ಬುದ್ಧಿಮತ್ತೆ ಆಧಾರಿತ ಉಪಕರಣವನ್ನು ಅಭಿವೃದ್ಧಿಪಡಿಸಿದ್ದರು.

ಈ ಎಐ ಮಾದರಿಗಳನ್ನು ತರಬೇತುಗೊಳಿಸಲು ಹಾಗೂ ಬಳಸಲು ಹೆಚ್ಚಿನ ವಿದ್ಯುತ್ ಮತ್ತು ನೀರಿನ ಅಗತ್ಯವಿರುತ್ತದೆ. ಇಂತಹ ಉಪಯೋಗವಿಲ್ಲದ ಕೆಲಸಗಳಿಗೆ ಎಐ ಬಳಸುವ ಮೂಲಕ ಪರಿಸರವನ್ನು ಹಾನಿಮಾಡುತ್ತಿದ್ದೀರಿ ಎಂದು ಕೆಲವರು ಆರೋಪಿದ್ದಾರೆ. ಇನ್ನು ಕೆಲವರು AI ತಂತ್ರಜ್ಞಾನವನ್ನು ಇಂತಹ ಅತಿ ಸಣ್ಣ ಕೆಲಸಕ್ಕೆ ವ್ಯರ್ಥ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಐಟಿಐ ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ-ಇಬ್ಬರಿಗೆ ಗಾಯ

ತನಗೆ ಮತ್ತು ತನ್ನ ಕುಟುಂಬಕ್ಕೆ ಹತ್ತಾರು ಜನರು ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಕಜ್ X ಪೇಜ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. “ಕೇವಲ ವಾರಾಂತ್ಯದ ಒಂದು ಸಣ್ಣ ಪ್ರಾಜೆಕ್ಟ್‌ಗಾಗಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿಯುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page