Connect with us

BELTHANGADY

ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ 3.30 ಲಕ್ಷ ರೂ. ವಂಚನೆ..!

Published

on

ಇತ್ತೀಚಿನ ದಿನಗಳಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಹಣ ವಂಚನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅದೇ ರೀತಿ ಬೆಳ್ತಂಗಡಿ ತಾಲೂಕಿನ ಒಬ್ಬ ಯುವಕನಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಸುಮಾರು 3.30 ಲಕ್ಷ ರೂ. ವಂಚನೆ ಮಾಡಿದ್ದಾರೆ. ಈ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೇಣೂರು: ಇತ್ತೀಚಿನ ದಿನಗಳಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಹಣ ವಂಚನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅದೇ ರೀತಿ ಬೆಳ್ತಂಗಡಿ ತಾಲೂಕಿನ ಒಬ್ಬ ಯುವಕನಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಸುಮಾರು 3.30 ಲಕ್ಷ ರೂ. ವಂಚನೆ ಮಾಡಿದ್ದಾರೆ. ಈ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್‌ ವಂಚನೆಗೊಳಗಾದವರು.

ಲಿಯೋ ಪಾಯಸ್‌ರವರ ಮನೆಗೆ ಆರೋಪಿಗಳಿಬ್ಬರು ಜ. 18ರಂದು ಬಂದು ಅವರ ಪುತ್ರ ಸುರೇಶ್ ಪಾಯಸ್ ಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಾತುಕತೆ ನಡೆಸಿದ್ದರು.

ಉದ್ಯೋಗ ಕೊಡಿಸುವುದಾಗಿ ಆರೋಪಿಗಳು 1.25 ಲಕ್ಷ ರೂ. ನಗದು ಪಡೆದು ಬಳಿಕ ವಿವಿಧ ಹಂತಗಳಲ್ಲಿ 1.37 ಲಕ್ಷ ರೂ., 40 ಸಾವಿರ, 28 ಸಾವಿರ ರೂ. ನಗದನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.

ಬಲಿಕ ಆರೋಪಿಗಳು ಸುರೇಶ್ ಪಾಯಸ್ ಗೆ ಮೊಬೈಲ್ ಮೂಲಕ ಬಲ್ಗೇರಿಯಾಕ್ಕೆ ವಿಮಾನ ಟಿಕೆಟ್ ಬುಕ್ ಮಾಡಿದ
ನಕಲಿಪ್ರತಿಯನ್ನು ವಾಟ್ಸ್ ಆ್ಯಪ್ ನಲ್ಲಿ ಕಳುಹಿಸಿ ಮುಂಬೈಗೆ ಬರುವಂತೆ ತಿಳಿಸಿದ್ದಾರೆ.

ಹಾಗಗಿ ಸುರೇಶ್ ಪಾಯಸ್ ಮುಂಬೈಗೆ ತೆರಳಿದ್ದಾನೆ.

ಮುಂಬೈನಲ್ಲಿ ಆತನಿಗೆ ಆರೋಪಿಗಳು ವೀಸಾ ಹಾಗೂ ವಿದೇಶಿ ಕರೆನ್ಸಿ ತರುವುದಾಗಿ ಹೇಳಿ ಹೋದವರು ಹಿಂದಿರುಗದೆ ವಂಚಿಸಿದ್ದಾರೆ.

ಈ ಬಗ್ಗೆ ಕಳೆದ ಮಾರ್ಚ್‌ ತಿಂಗಳಲ್ಲಿ ಲಿಯೋ ಪಾಯಸ್‌ರವರ ಮೊಬೈಲ್‌ಗೆ ಮೆಸೇಜ್‌ ಮಾಡಿ ನಿಮ್ಮ ಪುತ್ರನ ಟಿಕೆಟ್‌ ಕ್ಯಾನ್ಸಲ್‌ ಆಗಿದೆ.

ಹಣ ಮತ್ತು ಪಾಸ್‌ಪೋರ್ಟನ್ನು ಕೊರಿಯರ್‌ ಮೂಲಕ ಕಳುಹಿಸುವುದಾಗಿ ತಿಳಿಸಿ ಪಾಸ್‌ಪೋರ್ಟ್‌ ಮಾತ್ರ ಕಳುಹಿಸಿ ವಂಚಿಸಿದ್ದರು.

ಪ್ರಕರಣದ ಓರ್ವ ಆರೋಪಿ ತಲೆಮರೆಸಿಕೊಂಡಿದ್ದು, ಮತ್ತೋರ್ವ ಆರೋಪಿಯನ್ನು ಮಂಗಳೂರಿನ ಸುಧೀರ್‌ ಎಂದು ಗುರುತಿಸಲಾಗಿದ್ದು, ಈತನ ಮೇಲೇ ಈಗಾಗಲೇ ಬಂಟ್ವಾಳ ನಗರ, ಗ್ರಾಮಾಂತರ, ಮೂಡುಬಿದಿರೆ, ಮಂಗಳೂರು ಸೇರಿದಂತೆ ಹಲವು ಠಾಣೆಗಳಲ್ಲಿ ಕೇಸುಗಳಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.

ಪ್ರಕರಣದ ಓರ್ವ ಆರೋಪಿ ಈಗಾಗಲೇ ಬಂಧನ ದಲ್ಲಿದ್ದು, ಮತ್ತೋರ್ವ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

BELTHANGADY

ಮೂರು ತಿಂಗಳ ಹಿಂದೆ ಮದುವೆಯಾದ ನವ ವಿವಾಹಿತ ಆತ್ಮಹ*ತ್ಯೆ

Published

on

ಮಂಗಳೂರು/ಮೈಸೂರು: ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ನವ ವಿವಾಹಿತ ಕಿರಣ್ (35) ಅವರು ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ. ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ ಪೂಜಾರಿಯವರ ಪುತ್ರ ಕಿರಣ್ ಅವರು ಕಳೆದ 12 ವರ್ಷಗಳಿಂದ ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಕೆಲಸ ನಿರ್ವಹಿಸುತ್ತಿದ್ದರು. ಉತ್ತಮ ಸಂಬಳವು ಇತ್ತು, ಕಳೆದ ಮೂರೂವರೆ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಇದನ್ನೂ ಓದಿ: ಸಿಐಎಸ್ಎಫ್ ಕಾನ್ಸ್ಟೇಬಲ್ ಚಾಣಕ್ಷತನ; ಅಷ್ಟಕ್ಕೂ ಆ ವ್ಯಕ್ತಿಯ ಲ್ಯಾಪ್‌ಟಾಪ್‌ನಲ್ಲಿ ಏನಿತ್ತು..!

ಮೃತರು ತಂದೆ, ತಾಯಿ, ಪತ್ನಿ, ಓರ್ವ ಸಹೋದರ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.ಈ ಸಂಬಂಧ ಮೈಸೂರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Continue Reading

BELTHANGADY

ಸೌದಿ ಅರೇಬಿಯಾದ ಜಿದ್ದಾದಲ್ಲಿ ಬೆಳ್ತಂಗಡಿಯ ವ್ಯಕ್ತಿ ಹೃದಯಾಘಾತಕ್ಕೆ ಬಲಿ

Published

on

ಮಂಗಳೂರು/ಜಿದ್ದಾ : ಸೌದಿ ಅರೇಬಿಯಾದಿಂದ ಊರಿಗೆ ಮರಳಲು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ.

ಬೆಳ್ತಂಗಡಿ ಮೂಲದ ಹಿದಾಯತ್ ಮೃತ ದುರ್ಧೈವಿಯಾಗಿದ್ದು ನಿನ್ನೆ ರಾತ್ರಿ ಸೌದಿ ಅರೇಬಿಯಾದ ಜಿದ್ದಾ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ. ನಿನ್ನೆ ತನ್ನ ಸ್ನೇಹಿತರಿಗೆ ಕರೆ ಮಾಡಿ ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವಂತೆ ಹೇಳಿದ್ದರು ಎನ್ನಲಾಗಿದೆ.

ರಾತ್ರಿ 10:30ರ ವಿಮಾನ ಹಿಡಿಯಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವಾಗ ಹಿದಾಯತ್ ಅವರಿಗೆ ತೀವ್ರ ಎದೆ ನೋವು ಕಾಣಿಸಿದೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಅವರು ಅಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಸರಕಾರಿ ಸಂಸ್ಥೆಗಳಲ್ಲಿ ಕೆಲಸ ಕೊಡಿಸುವುದಾಗಿ 2.66 ಲಕ್ಷ ರೂ. ವಂಚನೆ

ಉತ್ತಮ ಗಾಯಕರೂ ಆಗಿದ್ದ ಹಿದಾಯತ್ ಅವರು ಮೂಲತಹ ಬೆಳ್ತಂಗಡಿಯ ಸಂಜಯ ನಗರ ನಿವಾಸಿಯಾಗಿದ್ದಾರೆ. ಕೆಲ ಸಮಯದ ಹಿಂದೆ ಉದ್ಯೋಗ ನಿಮಿತ್ತ ಅವರು ವಿದೇಶಕ್ಕೆ ತೆರಳಿದ್ದು, ಇಂದು ಮುಂಜಾನೆ ಮಂಗಳೂರಿಗೆ ವಾಪಾಸಗಲಿದ್ದರು.

ಆದ್ರೆ ವಿಧಿಯಾಟ ಬೇರೆಯೇ ಆಗಿದ್ದು, ಮನೆಗೆ ಮರಳುವ ಸಂತೋಷದಲ್ಲಿದ್ದಾಗಲೇ ಜವರಾಯ ಅವರನ್ನು ಎಳೆದೊಯ್ದಿದ್ದಾನೆ. ಮೃತರು ತಂದೆ ತಾಯಿ ಹಾಗೂ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

 

 

Continue Reading

BELTHANGADY

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಢಿಕ್ಕಿ, ಯುವಕ ಸ್ಥಳದಲ್ಲೇ ಜೀವಾಂತ್ಯ

Published

on

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಬೈಕ್ ಚಲಾಯಿಸುತ್ತಿದ್ದ ಯುವಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಿನ್ನೆ ರಾತ್ರಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ-ವೇಣೂರು ರಸ್ತೆಯಲ್ಲಿ ಸಂಭವಿಸಿದೆ.

ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್‌ ಪೂಜಾರಿ ಮೃತ ಪಟ್ಟ ಯುವಕನಾಗಿದ್ದಾನೆ. ಪ್ರಶಾಂತ್‌ ಪೂಜಾರಿ ಗುರುವಾಯನಕೆರೆಯಿಂದ ವೇಣೂರು ಕಡೆಗೆ ಬೈಕ್‌ ಚಲಾಯಿಸಿಕೊಂಡು ಹೋಗುತ್ತಾ ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ತಲುಪುತ್ತಿದ್ದಂತೆ ನಿಯಂತ್ರಣ ತಪ್ಪಿ ಬೈಕ್‌ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆ ವಿದ್ಯುತ್‌ ಕಂಬಕ್ಕೆ ಬಡಿದು ತೀವ್ರ ಸ್ವರೂಪದ ಗಾಯಗೊಂಡು ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಬೆಳ್ತಂಗಡಿ ಟ್ರಾಫಿಕ್‌ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಸ್ಥಳೀಯ ಜನರ ಸಹಕಾರದಿಂದ ಪ್ರಶಾಂತ್‌ ಪೂಜಾರಿಯ ಮೃತ ದೇಹವನ್ನು ಬೆಳ್ತಂಗಡಿ ಆಸ್ಪತ್ರೆಗೆ ರವಾನಿಸಿದರು. ಮಿತಿ ಮೀರಿದ ವೇಗದ ಚಾಲನೆ ಹಾಗೂ ಅಜಾಗ್ರತೆ ಮತ್ತು ನಿರ್ಲಕ್ಷ್ಯ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page