Connect with us

ಹಿರಿಯ ಸಾಹಿತಿ, ಪತ್ರಕರ್ತ ಶತಾಯುಷಿ ಡಾ.ಪಾಟೀಲ್ ಪುಟ್ಟಪ್ಪ ನಿಧನ

Published

on

ಹಿರಿಯ ಸಾಹಿತಿ, ಪತ್ರಕರ್ತ ಶತಾಯುಷಿ ಡಾ.ಪಾಟೀಲ್ ಪುಟ್ಟಪ್ಪ ನಿಧನ

ಬೆಂಗಳೂರು: ಹಿರಿಯ ಸಾಹಿತಿ, ಹೋರಾಟಗಾರ, ಪತ್ರಕರ್ತ ಶತಾಯುಷಿ ಡಾ.ಪಾಟೀಲ ಪುಟ್ಟಪ್ಪ ನಿನ್ನೆ (ಮಾರ್ಚ್ 16) ರಾತ್ರಿ ಇಹಲೋಕ ತ್ಯಜಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಕಿಮ್ಸ್‌ಗೆ ದಾಖಲಾಗಿದ್ದ ಹಿರಿಯ ಸಾಹಿತಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಪಾಪು ಎಂದೇ ಖ್ಯಾತಿ ಗಳಿಸಿದ್ದ ಪಾಟೀಲ್ ಪುಟ್ಟಪ್ಪರಿಗೆ ಭರ್ತಿ 101 ವರ್ಷ ವಯಸ್ಸಾಗಿತ್ತು.

ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಪುಟ್ಟಪ್ಪನವರನ್ನು ಪರೀಕ್ಷಿಸಿದ ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ, ಕಿಡ್ನಿ ಸೋಂಕಿಗೆ ಒಳಗಾಗಿದೆ ರಕ್ತದ ಕೊರತೆ ಇದೆ, ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದರು.

ಇದೀಗ ಅಪಾರ ಸಾಹಿತ್ಯಾಭಿಮಾನಿಗಳನ್ನು ಪುಟ್ಟಪ್ಪ ಅಗಲಿದ್ದಾರೆ.

ಇಂದು ಮಧ್ಯಾಹ್ನದವರೆಗೆ ಹುಬ್ಬಳ್ಳಿಯಲ್ಲಿರುವ ಪುಟ್ಟಪ್ಪ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶವಿದೆ.

ಸಂಜೆ ಅವರ ಹುಟ್ಟೂರಾದ ಹಲಗೇರಿಯಲ್ಲಿ ಅಂತಿಮ ಸಂಸ್ಕಾರದ ವಿಧಿ-ವಿಧಾನಗಳು ಜರುಗಲಿವೆ.

ಪುಟ್ಟಪ್ಪನವರು ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇತ್ತೀಚಿಗಷ್ಟೇ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

“ಕನ್ನಡ ನಾಡಿನ ಸಾಕ್ಷಿಪ್ರಜ್ಞೆಯಾಗಿ, ಸಂಸ್ಕೃತಿ ರಕ್ಷಕರಾಗಿ, “ಪ್ರಪಂಚ” ಪತ್ರಿಕೆಯ ಸ್ಥಾಪಕ ಸಂಪಾದಕರಾದ ನಾಡೋಜ ಪಾಟೀಲ ಪುಟ್ಟಪ್ಪ 1921 ಜನವರಿ 14ರಂದು, ಹಾವೇರಿ ತಾಲೂಕಿನ ಕುರುಬಗೊಂಡದಲ್ಲಿ ಜನಿಸಿದರು.

ಕುರುಬಗೊಂಡ, ಬ್ಯಾಡಗಿ, ಹಾವೇರಿ, ಧಾರವಾಡದಲ್ಲಿ ಪುಟ್ಟಪ್ಪನವರು ಪ್ರಾಥಮಿಕ ಶಿಕ್ಷಣ ಪಡೆದರು.

ಕರ್ನಾಟಕ ಕಾಲೇಜಿನಲ್ಲಿ ಪದವಿ ಹಾಗೂ ಬೆಳಗಾವಿಯಲ್ಲಿ ಕಾನೂನು ಅಧ್ಯಯನ ಮಾಡಿ ಮುಂಬಯಿ ಮತ್ತು ಹುಬ್ಬಳ್ಳಿಯಲ್ಲಿ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕೆಲಸ ನಿರ್ವಹಿಸಿದ್ದರು.

1945ರಲ್ಲಿ ವಕೀಲಿ ವೃತ್ತಿಗಾಗಿ ಮುಂಬಯಿಗೆ ತೆರಳಿದ್ದ ಪುಟ್ಟಪ್ಪನವರು, 1949ರಲ್ಲಿ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಅಮೆರಿಕದಿಂದ ಮರಳಿದ ನಂತರ ನವಯುಗ ಮಾಸಪತ್ರಿಕೆಯ ಸಂಪಾದಕರಾಗಿ, 1954ರಲ್ಲಿ ಪ್ರಪಂಚ ಪತ್ರಿಕೆಯನ್ನು ಆರಂಭಿಸಿದ್ದರು.

1962ರಿಂದ 1974ರ ವರೆಗೆ ಎರಡು ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದ ಇವರು, 1942ರ ಆಗಸ್ಟ್ 9ರಂದು ಕಾಲೇಜಿನ ಬ್ರಿಟಿಷ್ ಅಧ್ಯಾಪಕರಿಗೆ ಬಲವಂತವಾಗಿ ಗಾಂಧಿ ಟೋಪಿ ಹಾಕಿ ಸುದ್ದಿಯಾಗಿದ್ದರು.

ಡಾ. ಪಾಟೀಲ ಪುಟ್ಟಪ್ಪನವರು ಅಪ್ರತಿಮ ಹೋರಾಟಗಾರರು, ನಿರ್ಭೀತ ಪತ್ರಕರ್ತರು ಹಾಗೂ ಸೃಜನಶೀಲ ಸಾಹಿತಿಯಾಗಿದ್ದರು.

ನಮ್ಮ ದೇಶ ನಮ್ಮ ಜನ, ನನ್ನದು ಈ ಕನ್ನಡ ನಾಡು, ಕರ್ನಾಟಕದ ಕಥೆ, ಪಾಪು ಪ್ರಪಂಚ, ಶಿಲಾಬಾಲಿಕೆ ನುಡಿದಳು, ಗವಾಕ್ಷ ತೆರೆಯಿತು, ಸಾವಿನ ಮೇಜವಾನಿಗಳಂತಹ ಅಪೂರ್ವ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆಯಾಗಿ ನೀಡಿದ್ದರು.

ಪ್ರಪಂಚದಷ್ಟೆ ಓದುಗರ ಜ್ಞಾನವೂ ವಿಸ್ತಾರವಾಗಬೇಕೆಂಬ ಹಂಬಲದಿಂದ ತಮ್ಮ ಸಂಪಾದಕತ್ವದಲ್ಲಿ ಪ್ರಪಂಚ ವಾರಪತ್ರಿಕೆಯನ್ನು ನಡೆಸಿದವರು.

ಕರ್ನಾಟಕ ಏಕೀಕರಣಕ್ಕಾಗಿ ಅವರು ನಡೆಸಿದ ಹೋರಾಟ ಅನನ್ಯವಾದುದು.

ವರ್ತಮಾನದ ಎಲ್ಲ ವಿಚಾರಗಳ ಬಗ್ಗೆ ನಾಡಿನ ವಿವಿಧ ಪತ್ರಿಕೆಗಳಲ್ಲಿನ ಅವರ ಅಂಕಣ ಬರಹಗಳು ಓದುಗರಿಗೆ ಮನ ಗೆದ್ದಿದ್ದವು.

ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಪುಟ್ಟಪ್ಪನವರು ನಾಡಿನಾದ್ಯಂತ ಕೈಗೊಂಡ ಕನ್ನಡ ಭಾಷಾ ಜಾಗೃತಿ ಅಭಿಯಾನ ಹಾಗೂ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಸದೃಢವಾಗಿ ಬೆಳೆಸುವಲ್ಲಿ ಪುಟ್ಟಪ್ಪನವರ ಪಾತ್ರ ಶ್ಲಾಘನೀಯವಾಗಿದೆ.

ಇಂತಹ ಮಹಾನ್ ಮೇಧಾವಿ ಬೆಳಗಾವಿಯಲ್ಲಿ 2003ರಲ್ಲಿ ಜರುಗಿದ 70ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಸಾಹಿತ್ಯ ಹಾಗೂ ಮಾದ್ಯಮ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗೆ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸರಕಾರದ ಟಿಎಸ್‌ಆರ್ ಪತ್ರಿಕಾ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿಲಿಟ್ ಪದವಿ.

ಹಂಪಿ ವಿಶ್ವವಿದ್ಯಾಲಯದ ನಾಡೋಜ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ನೃಪತುಂಗ ಸಾಹಿತ್ಯ ಹೀಗೆ ಹತ್ತು ಹಲವು ಪ್ರಶಸ್ತಿಗಳು ಮುಡಿಗೇರಿವೆ.

Advertisement
Click to comment

Leave a Reply

Your email address will not be published. Required fields are marked *

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading

bangalore

ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

Published

on

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಹರಿಯಾಣ ಮೂಲದ ಸುಧೀರ್ ಕುಮಾರ್ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೆಂಗಳೂರಲ್ಲಿ ಲೇಡಿ ಫಿಟ್ನೆಸ್, ನ್ಯೂಟ್ರೀಷಿಯನ್ ಇನ್‌ಫ್ಲೂಯೆನ್ಸರ್ ಆಗಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾ ಮೂಲಕ ಆತ ಲೈಂಗಿಕವಾಗಿ ಪ್ರಚೋದಿಸುವಂತೆ ಮೆಸೇಜ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಪೀಡಿಸಲು ಶುರುಮಾಡಿದ್ದ. ಜೊತೆಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸೆ ನೀಡುತ್ತಿದ್ದ. ಅದಾದ ಬಳಿಕ ವಾಟ್ಸಪ್ ನಂಬರ್ ಪಡೆದುಕೊಂಡು, ಪುನಃ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ. ದಿನ ಕಳೆದಂತೆ ಬೆಂಬಿಡದೇ ಯುವತಿಯನ್ನು ಕಾಡಲು ಶುರುಮಾಡಿದ್ದ. ಕೊನೆಗೆ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ. ಬೆಂಗಳೂರಿಗೆ ಬಂದು ಜಿಮ್ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ.

ಇದನ್ನೂ ಓದಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಚಾರ ತಿಳಿಯುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ವಿಭಾಗ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

Continue Reading

LATEST NEWS

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Published

on

ಬೆಳ್ತಂಗಡಿ: ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ.


ಹಾಸನ ಚನ್ನರಾಯಪಟ್ಟಣ ನಿವಾಸಿ, ಎಸ್‌.ಎನ್‌.ಚಂದ್ರೆಗೌಡ ಆರೋಪಿ. ಈ ವಿಷಯದ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2009ರಲ್ಲಿ ದಾಖಲಾದ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: “ಸುಳ್ಳು ಆರೋಪಗಳಿಂದ ರಕ್ಷಿಸಿ”: ಕೇರಳದಲ್ಲಿ ಕಾರ್ಡ್‌ಬೋರ್ಡ್ ಧರಿಸಿ ಪುರುಷರ ವಿಭಿನ್ನ ಪ್ರತಿಭಟನೆ

ಇದೀಗ ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಜನವರಿ 20 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟನೆ ತಿಳಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page