Connect with us

LATEST NEWS

ಮಂಗಳೂರು: ಗೋಕಳ್ಳತನದ ತುರ್ತು ಕರೆಗೆ ಸ್ಪಂದಿಸದ 112 ಕಾರ್ಯವೈಖರಿ ಪ್ರಶ್ನಿಸಿದ ವಿಹೆಚ್‌ಪಿ..

Published

on

ಮಂಗಳೂರು: ನಿಮಗೆ ಸಮಸ್ಯೆಯಾದರೆ 112 ಸಂಖ್ಯೆಗೆ ಕರೆ ಮಾಡಿ ಎಂದು ಪೊಲೀಸರು ಹೇಳುತ್ತಾರೆ ಆದರೆ ಕಳ್ಳರು ದನ ಹೊತ್ತಯ್ದ ಅರ್ಧ ಘಂಟೆಯ ನಂತರ ಪೊಲೀಸ್‌ ವಾಹನ ಸ್ಥಳಕ್ಕೆ ಬಂದಿದ್ದಾರೆ.

ಪೊಲೀಸರು ಆರೋಪಿಗಳನ್ನು ಬಂಧಿಸಿದ ಒಳ್ಳೆಯ ಕೆಲಸಕ್ಕೆ ಅಭಿನಂದನೆ ತಿಳಿಸುತ್ತೇವೆ. ಆದರೆ ನಮಗೆ ಹೊತ್ತೊಯ್ದ 3 ದನಗಳು ಬೇಕು ಎಂದು ವಿಹೆಚ್‌ಪಿಯ ಜಿಲ್ಲಾ ಕಾರ್ಯದರ್ಶಿ ಶಿವಾನಂದ್‌ ಮೆಂಡನ್‌ ಆಗ್ರಹಿಸಿದ್ದಾರೆ.


ನಗರದ ಬಂಗ್ರಕೂಳೂರಿನಲ್ಲಿ ಹಟ್ಟಿಗೆ ನುಗ್ಗಿ ತಲವಾರು ತೋರಿಸಿ ದನ ಹೊತ್ತೊಯ್ದ ಘಟನೆ ಖಂಡಿಸಿ ನಿನ್ನೆ ನಗರದ ಕಾವೂರು ಪೊಲೀಸ್‌ ಠಾಣೆಯ ಎದುರು ವಿಎಚ್‌ಪಿ ಹಾಗೂ ಬಜರಂಗದಳದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.


ಎಲ್ಲರೂ ಹೇಳುತ್ತಾರೆ ನಿಮಗೆ ಸಮಸ್ಯೆಯಾದಾಗ ಮಂಗಳೂರು ಕಮೀಷನರೇಟ್‌ನ ಪೊಲೀಸರಿದ್ದಾರೆಂದು,

ಆದರೆ ಈ ವಿಷಯದಲ್ಲಿ ನಮಗೆ ತುಂಬಾ ನೋವಿದೆ. ಇವತ್ತು ಇಡೀ ರಾಜ್ಯದಲ್ಲಿ ಹೇಳುತ್ತಾರೆ, ಪೊಲೀಸ್‌ ಇಲಾಖೆಗೆ ಸಮಸ್ಯೆ ತಿಳಿಸಬೇಕು.

ನಮ್ಮ ಸಮಸ್ಯೆಗೆ ಶೀಘ್ರ ಸ್ಪಂದನೆ ಸಿಗಬೇಕಿದ್ದರೆ 112ಗೆ ಕಾಲ್‌ ಮಾಡಿ ಎಂದು, ಆದರೆ ನಗರದ ಹೃದಯಭಾಗದಲ್ಲಿರುವ ಈ ಘಟನೆಗೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ.

ಕೆಲ ದಿನಗಳ ಹಿಂದೆ ಇದೇ ಕುಟುಂಬದ ನಾಗಬನಕ್ಕೆ ಅಪವಿತ್ರ ಮಾಡಿದರು.

ಆರೋಪಿಗಳನ್ನು ಬಂಧಿಸಿದ್ದು, ಅದಕ್ಕೆ ಬಳಸಿದ ಸ್ಕಾರ್ಪಿಯೋ ಜಪ್ತಿ ಮಾಡಿದ್ದಾರೆ. ಅದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ ಕಳವಾದ 3 ದನ ನಮಗೆ ಸಿಗಬೇಕು. ಇದೀಗ ಆ ಗೋವು ಇದೆಯೋ ಇಲ್ಲವೂ ಗೊತ್ತಿಲ್ಲ.

ಒಂದು ವೇಳೆ ಗೋವು ವಧೆಯಾದರೆ ಈಗಿನ ಗೋಹತ್ಯೆ ನಿಷೇಧ ಕಾಯಿದೆ ಪ್ರಕಾರ ಗೋಸಾಗಾಟಕ್ಕೆ ಬಳಸಿದ ಕಾರು, ವಸ್ತುಗಳು, ಮನೆಯನ್ನು ಜಪ್ತಿ ಮಾಡಬೇಕು ಎಂದು ಹೇಳಿದರು.

ಬಜರಂಗದಳ ವಿಭಾಗ ಸಂಯೋಜಕ ಬುಜಂಗ ಕುಲಾಲ್‌, ವಿಹೆಚ್‌ಪಿಯ ಜಿಲ್ಲಾಧ್ಯಕ್ಷ ಗೋಪಾಲ್‌ ಕುತ್ತಾರ್‌, ಪುನೀತ್‌ ಅತ್ತಾವರ ಮತ್ತಿತರರು ಇದ್ದರು.

BIG BOSS

BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

Published

on

BBK12: ಟಾಪ್‌-06ನಲ್ಲಿ ಕಾವ್ಯಾ ಅವರು ಇರೋದಕ್ಕೆ ಅರ್ಹರಲ್ಲ ಎಂದು ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ ಹೇಳಿದ್ದಾರೆ.


ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ರನ್ನರ್‌ ಅಪ್‌ ಆಗಿ ರಕ್ಷಿತಾ ಶೆಟ್ಟಿ ಹೊರ ಹೊಮ್ಮಿದ್ದಾರೆ. ಬಿಗ್‌ ಬಾಸ್‌ ಮನೆಯಲ್ಲಿ ಇದ್ದಾಗ ಕಾವ್ಯಾ ಶೈವ ಅವರ ಜೊತೆ ರಕ್ಷಿತಾ ಶೆಟ್ಟಿ ಅವರಿಗೆ ಅಷ್ಟೊಂದು ಒಡನಾಟವಿರಲಿಲ್ಲ.

ನಾಮಿನೇಶನ್‌ ವಿಚಾರದಲ್ಲೂ ಕಾವ್ಯಾ ಮತ್ತು ರಕ್ಷಿತಾ ಅವರಿಗೆ ಆಗ್ಗಾಗೇ ಜಗಳವಾಗುತ್ತಿತ್ತು. ಅಲ್ಲದೆ ಗಿಲ್ಲಿ ಕಾವ್ಯಾ ಫ್ರೆಂಡ್‌ಶಿಪ್ ಕುರಿತು ರಕ್ಷಿತಾ ಅವರಿಗೆ ಅಸಮಾಧಾನವಿದೆ ಎಂದು ವೀಕ್ಷಕರು ಅಭಿಪ್ರಾಯ ಪಟ್ಟಿದ್ದರು. ಕಾವ್ಯಾ ಅವರ ಜೊತೆ ಇರುವ ಮುನಿಸು ರಕ್ಷಿತಾ ಅವರಿಗೆ ಕಡಿಮೆಯಾಗಿಲ್ಲ ಎನ್ನಬಹುದು.

ಇದನ್ನೂ ಓದಿ: ರಕ್ಷಿತಾ ಕ್ಷಮಾಪಣೆ ಪತ್ರದ ಬಗ್ಗೆ ಧ್ರುವಂತ್ ಪೋಸ್ಟ್: ನಮ್ಮಿಬ್ಬರದ್ದು ಒಂದೇ ರಾಶಿ-ನಕ್ಷತ್ರ!

ಇದೀಗ ಸಂದರ್ಶನವೊಂದರಲ್ಲಿ ಕಾವ್ಯಾ ಅವರು ಟಾಪ್‌ 6ನಲ್ಲಿ ಸ್ಥಾನ ಪಡೆಯಲು ಅರ್ಹರಲ್ಲ, ಅವರ ಬದಲಿಗೆ ಜಾನ್ವಿ ಅವರು ಇರಬೇಕಿತ್ತು. ಮಾಲು ಅಣ್ಣ ಇರಬಹುದಿತ್ತು. ಮಾಲು ಅವರು ಮಾತನಾಡುವುದು ಕಡಿಮೆ. ಆದರೆ ಅವರದ್ದು ಒಳ್ಳೆಯ ವ್ಯಕ್ತಿತ್ವ ಎಂದು ರಕ್ಷಿತಾ ಶೆಟ್ಟಿ ಹೇಳಿದ್ದಾರೆ.

Continue Reading

DAKSHINA KANNADA

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ರಿಗೆ ‘ಕನ್ನಡ ಪಯಸ್ವಿನಿ ಅವಾರ್ಡ್- 2026’ ಪ್ರದಾನ 

Published

on

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026’ ಅಂತಾರಾಜ್ಯ ಪ್ರಶಸ್ತಿಯನ್ನು  ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆರಿಗೆ ಪ್ರದಾನ ಮಾಡಲಾಯಿತು.

ಕಾಸರಗೋಡು ನುಳ್ಳಿಪಾಡಿಯಲ್ಲಿ ನಡೆದ ಕನ್ನಡ ಭವನ ರಜತ ಸಂಭ್ರಮ – ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನುಅವರು  ಸ್ವೀಕರಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ  ಅಂಕಣಕಾರರಾಗಿ ಹಾಗೂ ಕ್ರೀಡಾ  ವಿಮರ್ಶಾತ್ಮಕ ಲೇಖನಗಳ  ಮೂಲಕ ಎಸ್. ಜಗದೀಶ್ಚಂದ್ರ ಅಂಚನ್ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

ಕಾರ್ಯಕ್ರಮದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಡಾ.ಕೆ.ವಾಮನ್ ರಾವ್, ನಿರ್ದೇಶಕ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ‌ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟ್ಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು  ಮೊದಲಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

Published

on

 

ಸಾಂದರ್ಭಿಕ ಚಿತ್ರ

ಮಂಗಳೂರು : ವಿವಿಧ ಡಾಕ್ಯುಮೆಂಟ್ಸ್‌ ಗಳಿದ್ದ ಪರ್ಸೊಂದು ಕಳೆದುಹೋಗಿದೆ. ಚೇತನ್ ಎಂಬವರು ಬಂಟ್ವಾಳದಿಂದ ಕುಂಟಲ್ ಪಲ್ಕೆಯವರೆಗೆ ಆಟೋದಲ್ಲಿ ಪ್ರಯಾಣಿಸಿದ್ದು, ಈ ವೇಳೆ ಅವರ ಪರ್ಸ್  ಜೇಬಿನಿಂದ ಕೆಳಗೆ ಬಿದ್ದಿದೆ. ಅದರಲ್ಲಿ ಆಧಾರ್ ಕಾರ್ಡ್, ಹಣ ಹಾಗೂ ಇತರೆ ಡಾಕ್ಯುಮೆಂಟ್ಸ್‌ ಗಳಿದ್ದವು. ಯಾರಿಗಾದರೂ ಪರ್ಸ್ ಸಿಕ್ಕಿದ್ದಲ್ಲಿ 9036015784 ನಂಬರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page