Connect with us

ಮದ್ಯದ ದೊರೆ ವಿಜಯ್ ಮಲ್ಯನನ್ನು ಭಾರತಕ್ಕೆ ಹಸ್ತಾಂತರಿಸುತ್ತಾ ಬ್ರಿಟನ್ ಸರ್ಕಾರ..??

Published

on

ಮದ್ಯದ ದೊರೆ ವಿಜಯ್ ಮಲ್ಯನನ್ನು ಭಾರತಕ್ಕೆ ಹಸ್ತಾಂತರಿಸುತ್ತಾ ಬ್ರಿಟನ್ ಸರ್ಕಾರ..??

ಮುಂಬೈ: ಆರ್ಥಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಅವರನ್ನು ಬ್ರಿಟನ್ ಸರ್ಕಾರ ಭಾರತಕ್ಕೆ ಇಂದು (ಜೂನ್ 04) ರಾತ್ರಿ ಹಸ್ತಾಂತರಿಸಲಿದೆ ಎಂದು ತಿಳಿದು ಬಂದಿದೆ.

ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿರುವ ವಿಜಯ ಮಲ್ಯ ಅವರನ್ನು ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ತನಿಖಾದಳದ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದು,

ಮುಂಬೈ ವಿಮಾನ ನಿಲ್ದಾಣದಲ್ಲೇ ವೈದ್ಯಕೀಯ ತಂಡವೊಂದು ಅವರ ಆರೋಗ್ಯ ತಪಾಸಣೆ ನಡೆಸಲಿದೆ.

ವಿಜಯ ಮಲ್ಯ ಇಂದು ರಾತ್ರಿಯೇ ವಿಮಾನ ನಿಲ್ದಾಣಕ್ಕೆ ಆಗಮಿಸಿದರೆ,

ಅವರನ್ನು ಕೆಲಕಾಲ ನಗರದ ಸಿಬಿಐ ಕಚೇರಿಯಲ್ಲಿ ಇರಿಸಿ ನಂತರ ಅವರನ್ನು ಅಧಿಕಾರಿಗಳು ನಾಳೆ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

2018 ರ ಆಗಸ್ಟ್ ನಲ್ಲಿ ಮಲ್ಯ ಅವರ ಮನವಿಯನ್ನು ಆಲಿಸಿದ್ದ ಯುಕೆ ನ್ಯಾಯಾಲಯ ಜೈಲಿನ ವಿವರಗಳನ್ನು ಹಂಚಿಕೊಳ್ಳಲು ಭಾರತೀಯ ತನಿಖಾ ಸಂಸ್ಥೆಗಳಿಗೆ ಸೂಚಿಸಿತ್ತು.

ಹೀಗಾಗಿ ಮಲ್ಯ ಅವರನ್ನು ಬಂಧಿಸುವ ಮುಂಬೈನ ಆರ್ಥರ್ ರಸ್ತೆಯ ಜೈಲಿನ ಕೋಣೆಯನ್ನು ಸಿಬಿಐ ಅಧಿಕಾರಿಗಳು ವಿಡಿಯೋ ಮಾಡಿ ಕಳುಹಿಸಿದ್ದರು.

ಅಲ್ಲದೆ, ಮಲ್ಯ ಹಸ್ತಾಂತರದ ನಂತರ ಅವರನ್ನು ಇರಿಸಿಕೊಳ್ಳಲು ಎಲ್ಲಾ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದರು.

ಆರ್ಥರ್ ರಸ್ತೆಯ ಎರಡು ಅಂತಸ್ತಿನ ಜೈಲು ಕಟ್ಟಡದಲ್ಲಿ ಮಲ್ಯ ಅವರನ್ನು ಉನ್ನತ ಭದ್ರತಾ ಬ್ಯಾರಕ್ ಗಳಲ್ಲಿ ಇರಿಸಲಾಗುವುದು ಎಂದು ಏಜೆನ್ಸಿಗಳು ಯುಕೆ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದವು.

ಭಾರತದ 17 ಬ್ಯಾಂಕುಗಳಲ್ಲಿ ಸುಮಾರು 9,000 ಕೋಟಿ ರೂ.ಗಳ ಸಾಲ ಡೀಫಾಲ್ಟ್ ಪ್ರಕರಣದಲ್ಲಿ ವಿಜಯ ಮಲ್ಯ ಭಾರತಕ್ಕೆ ಬೇಕಾಗಿದ್ದಾರೆ.

ಭಾರತಕ್ಕೆ ಹಸ್ತಾಂತರಿಸುವುದನ್ನು ವಿರೋಧಿಸಿದ್ದ ವಿಜಯ ಮಲ್ಯ ಕಳೆದ ಮೇ 14 ರಂದು ಯುಕೆ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿ ತಿರಸ್ಕೃತಗೊಂಡಿತ್ತು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಬೆಂಗಳೂರು ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ !

Published

on

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ದಿನನಿತ್ಯ ಬಾಡೂಟ ಒದಗಿಸಲು ಮುಂದಾಗಿದ್ದು, ಈ ಬಗ್ಗೆ ಸ್ಪಷ್ಟ ಯೋಜನೆಯೊಂದಿಗೆ ಟೆಂಡರ್‌ಕೂಡ ಕರೆದಿದೆ.

ಜನತೆಗೆ ಸಮರ್ಪಕ ಮೂಲಸೌಕರ್ಯಗಳಾದ ರಸ್ತೆ, ಆಹಾರ, ನೀರು, ವಸತಿ ವ್ಯವಸ್ಥೆ ಕಲ್ಪಿಸದಿದ್ದರೂ, ಬೀದಿ ನಾಯಿಗಳಿಗೆ ಪ್ರತಿದಿನ ಹೊಟ್ಟೆತುಂಬಾ ಚಿಕನ್ ಬಿರಿಯಾನಿ ನೀಡಲು ಬಿಬಿಎಂಪಿ 2.80 ಕೋಟಿ ರೂ. ವೆಚ್ಚದ ಯೋಜನೆ ಜಾರಿಗೆ ತರುವತ್ತ ಹೆಜ್ಜೆ ಹಾಕಿದೆ.

ಇವೆಲ್ಲದರ ನಡುವೆ ಬೆಂಗಳೂರು ನಗರದಲ್ಲಿ ಒಟ್ಟು 2.80 ಲಕ್ಷ ಬೀದಿ ನಾಯಿಗಳಿದ್ದು, ಆದರೆ ಈ ಯೋಜನೆ ಕೇವಲ 5,000 ನಾಯಿಗಳಿಗೆ ಮಾತ್ರ ಲಭ್ಯವಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ, ಯೋಜನೆಯ ವ್ಯಾಪ್ತಿ ಮತ್ತು ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಎದ್ದಿದೆ. ಬಿಬಿಎಂಪಿಯ ಈ ಬಾಡೂಟ ಯೋಜನೆ ಮಾನವೀಯತೆಯ ವಿಶಿಷ್ಟ ಪ್ರಯೋಗವೋ ಅಥವಾ ತೆರಿಗೆದಾರರ ಹಣದ ದುರುಪಯೋಗವೋ ಎಂಬ ಚರ್ಚೆಗೆ ದಾರಿ ಹಾಕಿದೆ.

ಇದನ್ನೂ ಓದಿ: ಯೆಮನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಬಿಬಿಎಂಪಿಯ ಈ ನಿರ್ಧಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಹಲವು ಸಂಘಟನೆಗಳು ಹಾಗೂ ನಾಗರಿಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ‘ಜನರ ಹೊಟ್ಟೆಗೆ ಹಿಟ್ಟಿಲ್ಲ, ನಾಯಿಗಳಿಗೆ ಚಿಕನ್ ಬಿರಿಯಾನಿ ಭಾಗ್ಯ’ ಎಂದು ಜನತೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುತ್ತಿದ್ದಾರೆ.

Continue Reading

FILM

ತುಳು ಚಿತ್ರ “ಧರ್ಮ ಚಾವಡಿ” ಜುಲೈ 11 ಕ್ಕೆ ಬಿಡುಗಡೆ

Published

on

ಮಂಗಳೂರು: ಕೃಷ್ಣವಾಣಿ ಪಿಚ್ಚರ್ಸ್‌ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ರಮೇಶ್ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.


ಚಿತ್ರದ ಬಗ್ಗೆ ಸುದ್ದಿಗಾರರಿಗೆ ಮಾಹಿತಿನೀಡಿದ ಅವರು, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿದ್ದಾರೆ.

ಶ್ರೀನಾಥ್ ಪವಾರ್ ಸಂಕಲನ ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರವಿ ಸ್ನೇಹಿತ್, ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ, ರಂಜನ್ ಬೋಲೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ ಎಂದರು.

ಇದನ್ನೂ ಓದಿ: ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡ್ಲ್‌ ಈಸ್ಟ್- 2025; ತುಳುನಾಡಿನ ಮಹಿಳೆಯರಿಗಾಗಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ

ಪತ್ರಿಕಾಗೋಷ್ಠಿಯಲ್ಲಿ ಜಗದೀಶ್ ಅಮೀನ್, ನಿತೀನ್ ರೈ ಕುಕ್ಕುವಳ್ಳಿ, ಪ್ರಸಾದ್ ಕೆ.ಶೆಟ್ಟಿ, ಅರುಣ್ ರೈ ಪುತ್ತೂರು, ಧನ್ಯಾ ಪೂಜಾರಿ, ನೇಹ ಕೋಟ್ಯಾನ್ ಉಪಸ್ಥಿತರಿದ್ದರು.

Continue Reading

LATEST NEWS

ಯೆಮನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

Published

on

ಮಂಗಳೂರು/ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾಗೆ ಸಹಾಯ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.


ನಿಮಿಷಾ ಪ್ರಿಯಾ ಮರಣದಂಡನೆಗೂ ಕೇವಲ 2 ದಿನಗಳ ಮೊದಲು ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ವಿಚಾರಣೆ ನಡೆಸಲಿದೆ. ಜುಲೈ 16ರಂದು ಯೆಮೆನ್​ನಲ್ಲಿ ನಿಮಿಷಾ ಗಲ್ಲಿಗೇರಲಿದ್ದಾರೆ. ಹೀಗಾಗಿ, ರಾಜತಾಂತ್ರಿಕ ಮಾರ್ಗಗಳನ್ನು ಆದಷ್ಟು ಬೇಗ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠವು ಜುಲೈ 14ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಈ ಪ್ರಕರಣವನ್ನು ಜುಲೈ 14ರಂದು ವಿಚಾರಣೆಗೆ ನಿಗದಿಪಡಿಸಿದೆ. ನಿಮಿಷಾ ಅವರಿಗೆ 2017ರಲ್ಲಿ ತಮ್ಮ ಬ್ಯುಸಿನೆಸ್ ಪಾರ್ಟನರ್ ಅನ್ನು ಕೊಂದ ಆರೋಪದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಕೇರಳದ ಪಾಲಕ್ಕಾಡ್ ಜಿಲ್ಲೆಯ ನರ್ಸ್ ಆಗಿರುವ ನಿಮಿಷಾ ಪ್ರಿಯಾ (38) ಅವರು 2017ರಲ್ಲಿ ಯೆಮೆನ್​ಗೆ ಉದ್ಯೋಗಕ್ಕೆ ತೆರಳಿದ್ದರು. ಅವರಿಗೆ 2020ರಲ್ಲಿ ಮರಣದಂಡನೆ ವಿಧಿಸಲಾಯಿತು. ಅವರ ಅಂತಿಮ ಮೇಲ್ಮನವಿಯನ್ನು 2023ರಲ್ಲಿ ತಿರಸ್ಕರಿಸಲಾಗಿತ್ತು.

ಇದನ್ನೂ ಓದಿ: ಕೇರಳದ ನರ್ಸ್ ಗೆ ಯೆಮೆನ್ ನಲ್ಲಿ ಮರಣದಂಡನೆ; ಏನಿದು ಪ್ರಕರಣ ?

ನಿಮಿಷಾ ಪ್ರಿಯಾ ಪ್ರಸ್ತುತ ಯೆಮೆನ್‌ನ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ. ರಾಜತಾಂತ್ರಿಕ ಮಾರ್ಗಗಳ ಮೂಲಕ ನಿಮಿಷಾ ಪ್ರಿಯಾ ಅವರಿಗೆ ಸಹಾಯ ಮಾಡಲು ಕಾನೂನು ಬೆಂಬಲ ನೀಡುವ “ಸೇವ್ ನಿಮಿಷಾ ಪ್ರಿಯಾ – ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್” ಎಂಬ ಸಂಸ್ಥೆ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿಯನ್ನು ಸಲ್ಲಿಸಿತ್ತು. ನಿಮಿಷಾ ಪ್ರಿಯಾಳ ಮರಣದಂಡನೆಗೆ ತಾತ್ಕಾಲಿಕ ದಿನಾಂಕವನ್ನು ಯೆಮೆನ್ ಆಡಳಿತವು ಜುಲೈ 16 ರಂದು ನಿಗದಿಪಡಿಸಿದೆ ಎಂದು ಹೇಳುವ ಮಾಧ್ಯಮ ವರದಿಯನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page