Connect with us

LATEST NEWS

ʼಧೋನಿ ವಿಚಾರದಲ್ಲೂ ಇದೆ ರೀತಿ ಆಗಿದೆʼ ಅಭಿಮಾನಿಗಳ ವರ್ತನೆಗೆ ಅಸಮಾಧಾನ ಹೊರಹಾಕಿದ ವಿರಾಟ್‌ ಕೊಹ್ಲಿ!

Published

on

ವಡೋದರ: ‘ಮಹೇಂದ್ರ ಸಿಂಗ್‌ ಧೋನಿ ವಿಚಾರದಲ್ಲೂ ಇದೇ ರೀತಿ ಆಗಿರುವುದನ್ನು ನಾನು ನೋಡಿದ್ದೀನಿ. ಈ ರೀತಿಯ ಸಂಭ್ರಮ ಔಟಾಗಿ ಹೋಗುವ ಬ್ಯಾಟರ್‌ಗೆ ಉತ್ತಮ ಭಾವನೆ ಮೂಡಿಸುವುದಿಲ್ಲ’ ಎಂದು ಅಭಿಮಾನಿಗಳ ವರ್ತನೆಗೆ ವಿರಾಟ್‌ ಕೊಹ್ಲಿ ಅಸಮಾಧಾನ ಹೊರಹಾಕಿದ್ದಾರೆ.


ನಿನ್ನೆ (ಜ.12) ನಡೆದ ನ್ಯೂಜಿಲೆಂಡ್‌ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆಲುವು ದಾಖಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟ್‌ ಮಾಡಿದ ನ್ಯೂಝಿಲೆಂಡ್‌ ತಂಡವು 50 ಓವರ್‌ಗಳಲ್ಲಿ 300 ರನ್‌ ಕಲೆಹಾಕಿದ್ದರು. 301 ರನ್‌ಗಳ ಗುರಿ ಬೆನ್ನತ್ತಿದ ಟೀಮ್‌ ಇಂಡಿಯಾ ಪರ ಆರಂಭಿಕರಾಗಿ ರೋಹಿತ್‌ ಶರ್ಮಾ ಹಾಗೂ ಶುಭಮನ್‌ ಗಿಲ್‌ ಕಣಕ್ಕಿಳಿದಿದ್ದರು. ಭಾರತ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾದರೂ ಹಿಟ್‌ ಮ್ಯಾನ್‌ ಕೇವಲ 26 ರನ್‌ ಗಳಿಸಿ ಔಟ್‌ಗಿದ್ದರು.

ಇತ್ತ ರೋಹಿತ್ ಶರ್ಮಾ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕುತ್ತಿದ್ದಂತೆ ವಿರಾಟ್ ಕೊಹ್ಲಿ ಮೈದಾನಕ್ಕೆ ಆಗಮಿಸಿದ್ದರು. ಆದರೆ ಅದಕ್ಕೂ ಮುನ್ನ ಬಿಸಿಎ ಸ್ಟೇಡಿಯಂನಲ್ಲಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಅಂದರೆ ರೋಹಿತ್ ಶರ್ಮಾ ಔಟಾಗುತ್ತಿದ್ದಂತೆ ಅಭಿಮಾನಿಗಳು ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಬರಲಿದ್ದಾರೆಂದು ಸಂಭ್ರಮಿಸಲಾರಂಭಿಸಿದ್ದರು.

ಇದನ್ನೂ ಓದಿ: ಇಂಡಿಯನ್ ಐಡಲ್‌ ವಿನ್ನರ್, ಗಾಯಕ, ನಟ ಪ್ರಶಾಂತ್ ತಮಾಂಗ್ ಇನ್ನಿಲ್ಲ

ಈ ವಿಚಾರದ ಕುರಿತು ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಬಳಿಕ ವಿರಾಟ್‌ ಕೊಹ್ಲಿ ಮಾತನಾಡಿದ್ದಾರೆ. ಅಭಿಮಾನಿಗಳ ಹರ್ಷೋದ್ಗಾರದ ಕುರಿತು ಏನು ಹೇಳುತ್ತೀರಾ? ಎಂದು ಪ್ರಶ್ನಿಸಲಾಯಿತು. ಇದಕ್ಕೆ ಉತ್ತರಿಸಿದ ವಿರಾಟ್‌, ‘ಇಷ್ಟೊಂದು ಪ್ರೀತಿ ಕೊಡುತ್ತಿರುವುದಕ್ಕೆ ಧನ್ಯವಾದಗಳು. ಆದರೆ, ಭಾರತ ತಂಡದ ವಿಕೆಟ್‌ ಬಿದ್ದಾಗ ಸಂಭ್ರಮಿಸುವುದು ನನಗೆ ಇಷ್ಟವಾಗುವುದಿಲ್ಲ’ ಎಂದು ಹೇಳಿದ್ದಾರೆ.

‘ಭಾರತದ ಮೊದಲ ವಿಕೆಟ್ ಬಿದ್ದಾಗ ಎಲ್ಲರೂ ಖಷಿಯಿಂದ ಬೊಬ್ಬೆ ಹೊಡೆಯುತ್ತಾರೆ. ಅದು, ಔಟ್ ಆಗಿ ಹೋಗುವವರಿಗೆ ಬೇಸರ ತರಿಸಬಹುದು. ಎಂ.ಎಸ್. ಧೋನಿ ವಿಚಾರದಲ್ಲೂ ಇದೇ ತರ ಆಗಿರುವುದನ್ನು ನಾನು ನೋಡಿದ್ದೇನೆ. ಈ ವಿಚಾರಕ್ಕೆ ನನಗೆ ಬೇಸರವಿದೆ’ ಎಂದು ಅಭಿಮಾನಿಗಳ ಅತಿರೇಕದ ಪ್ರೀತಿಗೆ ವಿರಾಟ್ ಕೊಹ್ಲಿಯವರು ಬೇಸರ ವ್ಯಕ್ತಪಡಿಸಿದರು.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page