Connect with us

LATEST NEWS

ವಿಶಾಲ ಗಾಣಿಗ ಕೊಲೆ ಪ್ರಕರಣ : ಆರೋಪಿ ರಾಮಕೃಷ್ಣನಿಗೆ ಪೊಲೀಸ್ ಕಸ್ಟಡಿ..!

Published

on

ಉಡುಪಿ : ರಾಜ್ಯದಲ್ಲಿ ಸೆನ್ಸೇಶನ್ ಕ್ರೀಯೆಟ್ ಮಾಡಿದ್ದ ಉಡುಪಿ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಉಡುಪಿ ಪೊಲೀಸರು ಕೊನೆಗೂ ಬೇಧಿಸಿದ್ದು ಆರೋಪಿ ವಿಶಾಲ ಗಾಣಿಗರ ಪತಿ ರಾಮಕೃಷ್ಣನನ್ನು ಬಂಧಿಸಿದ್ದಾರೆ.

ಇದೀಗ ಪೊಲೀಸ್ ಬಂಧನದಲ್ಲಿದ್ದ ರಾಮಕೃಷ್ಣನನ್ನು ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡಬೆಕೆಂದು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರಿಂದ ಆರೋಪಿ ರಾಮಕೃಷ್ಣ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಮಾನ್ಯ ನ್ಯಾಯಾಲಯ ಆದೇಶ ನೀಡಿತು.

ವಿದೇಶದಲ್ಲಿರುವ ಆರೋಪಿ ರಾಮಕೃಷ್ಣ ಬಾಡಿಗೆ ಹಂತಕರ ಮೂಲಕ ವಿಶಾಲ ಗಾಣಿಗಳ ಕೊಲೆಯನ್ನು ಮಾಡಿದ್ದು ಪೊಲೀಸ್ ತನಿಖೆಯಿಂದ ಸಾಬೀತಾಗಿತ್ತು.

ಕೊಲೆಗೆ ಸುಪಾರಿ ಪಡೆದ ಆರೋಪಿಗಳಲ್ಲಿ ಓರ್ವನನ್ನು ಪೊಲೀಸ್ ತಂಡ ಉತ್ತರ ಪ್ರದೇಶದಲ್ಲಿ ಬಂಧಿಸಿದ್ದು ಉಡುಪಿಗೆ ಕರೆದುಕೊಂಡು ಬರಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದು ಇನ್ನೋರ್ವ ಹಂತಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

LATEST NEWS

ಬಿ. ಸಿ. ರೋಡ್ ಟೂರಿಸ್ಟ್ ವ್ಯಾನ್ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Published

on

ಬಂಟ್ವಾಳ: ಟೂರಿಸ್ಟ್ ವ್ಯಾನ್ ಚಾಲಕ ಮಾಲಕರ ಸಂಘ ( ರಿ ) ಬಿ. ಸಿ. ರೋಡ್, ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯು ಬಿಸಿರೋಡಿನ ರಿಕ್ಷಾ ಭವನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, 2025ನೇ ಸಾಲಿನ‌ ಅಧ್ಯಕ್ಷರಾಗಿ ಸದಾನಂದ ಗೌಡ ಹಳೆಗೇಟು ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಇಕ್ಬಾಲ್ ಬಿಸಿ ರೋಡ್ ,ಕಾರ್ಯದರ್ಶಿಯಾಗಿ ಸುನಿಲ್ ಲೋಬೊ ,ಕೋಶಾಧಿಕಾರಿಯಾಗಿ ನಮೇಶ್ ಶೆಟ್ಟಿ ಕುರಿಯಾಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರವೀಣ್ ಕಾರ್ಲೋ, ರಿಯಾಜ್ ಜವಾನ್, ಗಣೇಶ್ ಕಲ್ಲಡ್ಕ, ರಿಯಾಜ್ ಬದ್ರಿಯಾ, ಚಂದ್ರಹಾಸ ಸಾಲೆತ್ತೂರು,ಸುಧಾಕರ್ ತುಂಬೆ, ಜಬ್ಬರ್ ಅಜಿಲಮೊಗರು, ನಿತಿನ್ ಅಜಿಬೆಟ್ಟು ಆಯ್ಕೆಯಾದರು.

ಇದನ್ನೂ ಓದಿ: ರಜೆ ಮಾಡದ ರಾಜ ಹಾಸ್ಯಗಾರ ವಳಕುಂಜರಿಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ

ಈ ಸಂದರ್ಭದಲ್ಲಿ ಸಂಘದ 70 ಸದಸ್ಯರು ಉಪಸ್ಥಿತರಿದ್ದರು. ಇಕ್ಬಾಲ್ ರವರು ಸ್ವಾಗತಿಸಿ ಸುನಿಲ್ ಲೋಬೊ ರವರು ಧನ್ಯವಾದ ನೀಡಿದರು.

Continue Reading

LATEST NEWS

ಕುಖ್ಯಾತ ಹೊರ ರಾಜ್ಯ, ಅಂತರ್ ಜಿಲ್ಲಾ ಕಳವು ಪ್ರಕರಣಗಳ ಆರೋಪಿ ಇತ್ತೆ ಬರ್ಪೆ ಅಬುಬಕ್ಕರ್ ಬಂಧನ

Published

on

ಬೆಳ್ತಂಗಡಿ: ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ನಡೆದ 40 ಕ್ಕೂ ಅಧಿಕ ಕಳವು ಪ್ರಕರಣಗಳ ಕುಖ್ಯಾತ ಆರೋಪಿ ‘ಇತ್ತೆ ಬರ್ಪೆ ಅಬುಬಕ್ಕರ್’ ಎಂಬಾತನನ್ನು ಪೊಲೀಸರು ಬಂಧಿಸಿ ಆತನಿಂದ 5 ಲಕ್ಷದ 65 ಸಾವಿರ ರೂಪಾಯಿ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ.

ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ಕಳೆದ ಅಕ್ಟೋಬರ್ 2 ರಿಂದ ಅಕ್ಟೋಬರ್ 6 ರ ಮಧ್ಯದ ಅವಧಿಯಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ನಡೆದ 149 ಗ್ರಾಂ ತೂಕದ ಒಟ್ಟು 9 ಲಕ್ಷದ 50 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು ಹೊರ ರಾಜ್ಯಗಳಲ್ಲಿ ಹಾಗೂ ಹಲವು ಜಿಲ್ಲೆಗಳಲ್ಲಿ 40 ಕ್ಕೂ ಅಧಿಕ ಕಳವು ಪ್ರಕರಣಗಳ ಕುಖ್ಯಾತ ಆರೋಪಿ ಮಂಗಳೂರಿನ ಜೋಕಟ್ಟೆ ನಿವಾಸಿ 70 ವರ್ಷ ಪ್ರಾಯದ ಅಬುಬಕ್ಕರ್ ಯಾನೆ ಅಬ್ದುಲ್ ಖಾದರ್ ಯಾನೆ ಇತ್ತೆ ಬರ್ಪೆ ಅಬುಬಕ್ಕರ್ (70) ಎಂಬಾತನನ್ನು ಬಂಧಿಸಿ ಆತನಿಂದ 5 ಲಕ್ಷದ 65 ಸಾವಿರ ರೂಪಾಯಿ ಬೆಲೆಬಾಳುವ ಒಟ್ಟು 56.850 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ ಮಂಗಳೂರು ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳವು ಮಾಡಿದ 60 ಸಾವಿರ ರೂಪಅಯಿ ಮೌಲ್ಯದ ದ್ವಿಚಕ್ರ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: ಉಡುಪಿ: ಹಿಂದೂ ಜಾಗರಣ ವೇದಿಕೆ ಮುಖಂಡನ ಬಂಧನ

ಬೆಳ್ತಂಗಡಿ ಡಿ.ವೈ.ಎಸ್. ಪಿ. ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ, ವೇಣೂರು, ಧರ್ಮಸ್ಥಳ, ಪೂಂಜಾಲಕಟ್ಟೆ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಮಂಗಳೂರು ಜಿಲ್ಲಾ ಕಂಪ್ಯೂಟರ್ ವಿಭಾಗದ ಸಿಬ್ಬಂದಿಯನ್ನು ಒಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

Continue Reading

LATEST NEWS

ಉಡುಪಿ: ಹಿಂದೂ ಜಾಗರಣ ವೇದಿಕೆ ಮುಖಂಡನ ಬಂಧನ

Published

on

ಉಡುಪಿ: ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಅಜೆಕಾರು ಮರ್ಣೆ ನಡಿಬೆಟ್ಟು ನಿವಾಸಿ ರತ್ನಾಕರ್ ಅಮೀನ್(49)ನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 15ರಂದು ಉಡುಪಿ ನಗರದ ಜಟ್ಕಾ ನಿಲ್ದಾಣದ ಬಳಿ ಹಿಂದೂ ಜಾಗರಣಾ ವೇದಿಕೆ ಉಡುಪಿ ವತಿಯಿಂದ ದೆಹಲಿ ಬಾಂಬ್ ಸ್ಪೋಟ ಕೃತ್ಯವನ್ನು ಖಂಡಿಸಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿತ್ತು.

ಪ್ರತಿಭಟನೆಯಲ್ಲಿ ರತ್ನಾಕರ ಅಮೀನ್, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಭಾಷಣ ಮಾಡಿದ್ದು, ಈ ಬಗ್ಗೆ ರತ್ನಾಕರ ಅಮೀನ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಚಳಿ ಓಡಿಸಲು ಇದ್ದಿಲುಬೆಂಕಿ ಹಾಕಿಕೊಂಡು ಮಲಗಿದ್ದ ಯುವಕರು; ಮೂವರು ಸಾವು

ಈ ಬಗ್ಗೆ ತನಿಖೆ ನಡೆಸಿದ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ.ಬಡಿಗೇರ ನೇತೃತ್ವದ ವಿಶೇಷ ತಂಡವು ಖಚಿತ ಮಾಹಿತಿಯ ಆಧಾರದ ಮೇರೆಗೆ ನ.18ರಂದು ಬೆಳಗ್ಗೆ ಆರೋಪಿ ರತ್ನಾಕರ್ ಅಮೀನ್‌ನನ್ನು ಮಂಗಳೂರು ಸೆಂಟ್ರಲ್ ರೈಲ್ವೆ ಸ್ಟೇಷನ್ ನಲ್ಲಿ ವಶಕ್ಕೆ ಪಡೆದು ಬಂಧಿಸಿ, ನ್ಯಾಯಲಯಕ್ಕೆ ಹಾಜರುಪಡಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page