Connect with us

LATEST NEWS

Watch video: ಪಾಕ್ ಸೇನಾ ಮುಖ್ಯಸ್ಥನಿಗೆ ಅಮೆರಿಕದಲ್ಲಿ ಪ್ರತಿಭಟನೆ ಬಿಸಿ

Published

on

ಮಂಗಳೂರು/ವಾಷಿಂಗ್ಟನ್: ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅಮೆರಿಕದ ಮಿಲಿಟರಿ ಪರೇಡ್‌ನಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿತ್ತು. ಆದರೆ ಪೆರೇಡ್‌ಗೆ ಬಗ್ಗೆ ಪಾಕಿಸ್ತಾನದ ಸುಳ್ಳುಗಳು ಈಗ ಬಹಿರಂಗಗೊಂಡಿದೆ.


ಹೌದು, ಜೂನ್‌ 14 ರಂದು ಅಮೆರಿಕದ ಮಿಲಿಟರಿ ಪರೇಡ್‌ನಲ್ಲಿ ಮುನೀರ್ ಎಲ್ಲಿಯೂ ಕಾಣಿಸಲಿಲ್ಲ. ಇದರ ಬೆನ್ನಲ್ಲೇ ಶ್ವೇತಭವನ ಸ್ಪಷ್ಟನೆ ಕೊಟ್ಟಿದ್ದು ಮಿಲಿಟರಿ ಪರೇಡ್​​ಗೆ ಮುನೀರ್ ಸೇರಿದಂತೆ ಯಾವುದೇ ನಾಯಕರನ್ನು ಆಹ್ವಾನಿಸಿಲ್ಲ ಎಂದು ಹೇಳಿದೆ.

ಆದರೆ ಐದು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಅಸಿಮ್ ಮುನೀರ್‌ಗೆ ವಾಷಿಂಗ್ಟನ್​​ನ ಹೋಟೆಲ್​ಗೆ ಆಗಮಿಸಿದಾಗ ಪ್ರತಿಭಟನಾಕಾರರು ಮುನೀರ್ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಪಾಕಿಸ್ತಾನವನ್ನು ನಿಂದಿಸಿದ್ದಾರೆ. ಕೆಲವು ಪಾಕಿಸ್ತಾನಿ ಜನರು ರೆಕಾರ್ಡ್ ಮಾಡಿದ ವೀಡಿಯೊದಲ್ಲಿ ಮುನೀರ್ ಅವರ ಬೆಂಗಾವಲು ಪಡೆಯು ವಾಷಿಂಗ್ಟನ್‌ನ ಫೋರ್ ಸೀಸನ್ಸ್ ಹೋಟೆಲ್‌ಗೆ ಆಗಮಿಸುತ್ತಿರುವುದನ್ನು ತೋರಿಸುತ್ತದೆ.

ವೀಡಿಯೊದಲ್ಲಿ, ಪ್ರತಿಭಟನಾಕಾರರ ಗುಂಪು ಅಸಿಮ್ ಮುನೀರ್ ಅವರನ್ನು ಸುತ್ತುವರಿಯಲು ಪ್ರಯತ್ನಿಸುತ್ತಿದ್ದರು. ಮುನೀರ್ ಹೋಟೆಲ್ ಹೊರಗೆ ತಲುಪಿದ ತಕ್ಷಣ ಪ್ರತಿಭಟನಾಕಾರರು ಅವರನ್ನು ನೋಡಿ ನರಿ, ನರಿ ಎಂದು ಕೂಗಲು ಪ್ರಾರಂಭಿಸಿದರು.

ಇದನ್ನೂ ಓದಿ: ಪಾಕಿಸ್ತಾನಿಯರು ಹಿಂದೂ-ಮುಸ್ಲಿಮರ ನಡುವಿನ ವ್ಯತ್ಯಾಸಗಳನ್ನು ತಮ್ಮ ಮಕ್ಕಳಿಗೆ ಹೇಳಿಕೊಡಬೇಕು: ಪಾಕ್ ಸೇನಾ ಮುಖ್ಯಸ್ಥ

ಜನರಲ್ ಮುನೀರ್ ಇತ್ತೀಚೆಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ. 2022 ರಿಂದ ದೇಶದ 11 ನೇ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಮುನೀರ್, ಪಾಕಿಸ್ತಾನದ ಇತಿಹಾಸದಲ್ಲಿ ಮಾಜಿ ಅಧ್ಯಕ್ಷ ಅಯೂಬ್ ಖಾನ್ ನಂತರ ಫೀಲ್ಡ್ ಮಾರ್ಷಲ್ ಹುದ್ದೆಯನ್ನು ಹೊಂದಿರುವ ಎರಡನೇ ವ್ಯಕ್ತಿಯಾಗಿದ್ದಾರೆ.

Watch video

DAKSHINA KANNADA

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ನವ ವಿವಾಹಿತ ಸಾ*ವು

Published

on

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಮೃ*ತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ 32 ವರ್ಷದ ಭರತ್ ಎಂದು ತಿಳಿದುಬಂದಿದೆ.

ನಗರದ ಮಾಲ್ ಒಂದರಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾ*ವನ್ನಪ್ಪಿದ್ದಾರೆ.

ಇದನ್ನೂ ಓದಿ: ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

ಕಳೆದ ಏಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃ*ತ ಯುವಕ ಭರತ್ ತಾಯಿ, ಪತ್ನಿ ಹಾಗೂ ಮೂವರು ಸೋದರಿಯರು ಅಗಲಿದ್ದಾರೆ.

Continue Reading

LATEST NEWS

ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆಯ ಪ್ರಬಲ ಭೂಕಂಪನ

Published

on

ನವದೆಹಲಿ: ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆ ಪ್ರಬಲ ಭೂಕಂಪನ ಸಂಭವಿಸಿದ ಘಟನೆ ಇಂದು (ಜು. 10) ಮುಂಜಾನೆ ನಡೆದಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ತಿಳಿಸಿದ್ದು, ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಹೇಳಿದೆ.1 ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ.

ಇದನ್ನೂ ಓದಿ: ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ್ದಾರೆ. ಯಾವುದೇ ಹಾನಿ ಹಾಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ.

Continue Reading

DAKSHINA KANNADA

ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

Published

on

ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ಬಳಿಕ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.

ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತಪಟ್ಟವರು ಎಂದು ತಿಳಿದುಬಂದಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಅನ್ನು ತುಳಿದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

Continue Reading
Advertisement

Trending

Copyright © 2025 Namma Kudla News

You cannot copy content of this page