Connect with us

LATEST NEWS

ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Published

on

ಮಂಗಳೂರು/ಕನಕಪುರ: ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದವರು ಪ್ರಯಾಣಿಸುತ್ತಿದ್ದ ಬಸ್ಸೊಂದು ಉರುಳಿ ಬಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಡಿವಾಳದ ಬಳಿ ರವಿವಾರ (ಅ.20) ನಡೆದಿದೆ.

ಗಾಯಾಳುಗಳನ್ನು ಕನಕಪುರ ಐಪಿಪಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

ತಗಡೆಗೌಡನದೊಡ್ಡಿ ಗ್ರಾಮದ ಜೋಡಿಯ ವಿವಾಹ ಕಾರ್ಯಕ್ರಮವು ಸಂಗಮದ ಬಳಿ ಇರುವ ಮಡಿವಾಳದಲ್ಲಿ ಆಯೋಜಿಸಲಾಗಿತ್ತು. ಎರಡು ಖಾಸಗಿ ಬಸ್ಸಿನಲ್ಲಿ ಜನರು ಹೋಗುತ್ತಿದ್ದರು. ಒಂದು ಬಸ್ಸು ಸಂಗಮದ ಎರಡನೇ ತಿರುವು ಕಾರಚ್ಚಲು ದಿಬ್ಬದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿದೆ.

ಈ ಕುರಿತ ಪ್ರಕರಣ ಸ್ಥಳೀಯ ಪೊಳೀಸ್ ಠಾಣೆಯಲ್ಲಿ ದಾಖಲಾಗಿದೆ.

DAKSHINA KANNADA

ಅಂತರ ಜಿಲ್ಲಾ ಶಾಲಾ ಕಾಲೇಜು ಕಳ್ಳತನದ ಆರೋಪಿ ಸೆರೆ; 1 ಕಾರು, 1 ಮೊಬೈಲ್ ಮತ್ತು 84,500 ರೂಪಾಯಿ ನಗದು ವಶ

Published

on

ಹಲವು ಶಾಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಶಾಲಾ ಕಾಲೇಜು ಆರೋಪಿ ಇಂದು ಸೆರೆಯಾಗಿದ್ದಾನೆ. ಆತನಿಂದ 1 ಕಾರು, 1 ಮೊಬೈಲ್ ಹಾಗೂ 84,500 ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಫೆ.21 ರಿಂದ ಫೆ.22 ರ ಮದ್ಯಾವಧಿಯಲ್ಲಿ ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲೆಯ ಕಛೇರಿಯ ಬಾಗಿಲಿಗೆ ಹಾಕಿದ ಬೀಗವನ್ನು ಯಾರೋ ಕಳ್ಳರು ಒಡೆದು ಒಳ ಪ್ರವೇಶಿಸಿ ಕಛೇರಿಯ ಕಪಾಟು ಮತ್ತು ಮೇಜಿನ ಡ್ರಾವರನ್ನು ಒಡೆದು ನಗದು ಹಣ ಅಂದಾಜು 1,50,000/- ಮತ್ತು 3 ಡಿವಿಆರ್‌ಗಳನ್ನು ಕಳವು ಮಾಡಿಕೊಂಡು ಹೋಗಿದ್ದಲ್ಲದೆ, ಶಾಲೆಯ ಸಿಸಿಟಿವಿಯನ್ನು ಹಾಳು ಮಾಡಿರುತ್ತಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ 26/2025 ಕಲಂ 331(3) 331(4), 305 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಮಾರ್ಚ್‌ 6 ರಿಂದ ಮಾಚ್‌ 7 ರ ಮದ್ಯಾವಧಿಯಲ್ಲಿ ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರ ಕೊಠಡಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಮುರಿದು, ಒಳಪ್ರವೇಶಿಸಿ ಕಪಾಟಿನ ಬಾಗಿಲು ತೆಗೆದು, ರಿಜಿಸ್ಟರ್ ಗಳನ್ನು ಚಲ್ಲಾಪಿಲ್ಲಿ ಮಾಡಿರುವುದಾಗಿ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 35/2025 ಕಲಂ 331(3), 331(4), 62 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಾಗಿರುತ್ತದೆ.

ಮಾರ್ಚ್‌ 4 ರಿಂದ ಮಾಚ್‌ 5ರ ಮದ್ಯಾವಧಿಯಲ್ಲಿ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಸಂತ ಮರಿಯಾ ಗೊರಟ್ಟಿ ಆಂಗ್ಲ ಮಾದ್ಯಮ ಶಾಲೆಯ ಕಛೇರಿಯ ಬೀಗವನ್ನು ಯಾರೋ ಕಳ್ಳರು ಒಡೆದು ಒಳಪ್ರವೇಶಿಸಿ, ಕಪಾಟಿನ ಬೀಗವನ್ನು ಮುರಿದು ಅದರಲ್ಲಿದ್ದ ನಗದು 60000/- ಮತ್ತು 5000/- ಮೌಲ್ಯದ ಸಿಸಿ ಕ್ಯಾಮರಾ ಡಿವಿಆರ್ ಕಳವು ಮಾಡಿರುವ ಬಗ್ಗೆ ಶಾಲಾ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 40/2025 ಕಲಂ 305, 331(3), 331(4) ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿ ಮತ್ತು ಸ್ವತ್ತು ಪತ್ತೆಯ ಬಗ್ಗೆ ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಡಿ.ಆರ್‌ರವರ ನೇತೃತ್ವದ ಕಾರ್ಕಳ ನಗರ ಪೊಲೀಸ್ ಠಾಣಾ ಪಿ.ಎಸ್.ಐ ಶಿವಕುಮಾರ್, ಸಿಬ್ಬಂದಿಯವರಾದ ರಂಜಿತ್‌, ಶಿವಾನಂದ, ಕಾರ್ಕಳ ಗ್ರಾಮಾಂತರ ಠಾಣಾ ಚಂದ್ರಶೇಖರ, ಅಜೆಕಾರು ಠಾಣಾ ಸತೀಶ, ಪ್ರದೀಪ್‌ರವರನ್ನೊಳಗೊಂಡ ತಂಡ, ಮಾರ್ಚ್‌ 20ರಂದು ನಿಟ್ಟೆ ಗ್ರಾಮದ ಸಂತ ಲಾರೆನ್ಸ್ ಫ್ರೌಡ ಶಾಲೆಯ ಸಮೀಪ ಅನುಮಾನಾಸ್ಪದವಾಗಿ ಬಿಳಿ ಬಣ್ಣದ ಕಾರಿನಲ್ಲಿ ಕಂಡು ಬಂದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಲಾಗಿ ಅರ್ಷಿತ್ ಅವಿನಾಶ್ ದೋಡ್ರೆ(24), ಯೋಜನಾ ನಗರ, ಬೈಂದೂರು ಎಂಬುದಾಗಿ ತಿಳಿಸಿದ್ದು, ಮೇಲ್ಕಾಣಿಸಿದ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಪ್ರಕರಣಗಳಿಗೆ ಸಂಬಂದಿಸಿದಂತೆ ಆಪಾದಿತನನ್ನು ವಶಕ್ಕೆ ಪಡೆಯಲಾಯಿತು.

ಆಪಾದಿತನು ಕೃತ್ಯಕ್ಕೆ ಬಳಸಿದ್ದ ಸುಮಾರು 2,00,000/- ಮೌಲ್ಯದ KA21N3929 Ritz ಕಾರು, 20,000/- ಮೌಲ್ಯದ ಮೊಬೈಲ್ ಫೋನ್, ನಗದು ರೂ 84,500/- ಮತ್ತು ಇತರೇ ಸ್ವತ್ತುಗಳನ್ನು ಮುಂದಿನ ಕ್ರಮದ ಬಗ್ಗೆ ಸ್ವಾದೀನಪಡಿಸಿಕೊಂಡು, ಆಪಾದಿತನನ್ನು ವಿಚಾರಣೆ ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಾನ್ಯ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂದನಕ್ಕೆ ನೀಡಿರುತ್ತಾರೆ.

Continue Reading

LATEST NEWS

2024ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

Published

on

ಮೈಸೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ 2024 ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಕಾರ್ಯಕ್ರಮ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕೊಂಕಣ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಉದ್ಘಾಟಿಸಿದ್ದಾರೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಶ್ರೀ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆದಿದೆ.

ಈ ವೇಳೆ ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವಾರು ಸಾಹಿತಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು. ಗೌರವ ಅತಿಥಿಗಳಾಗಿ ಭಾಗವಹಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ಶ್ರೀ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ ಪರಿಚಯ ಪುಸ್ತಕವನ್ನು ವಿಮೋಚನೆಗೊಳಿಸಿ, ತಮ್ಮ ಮಾತೃಭಾಷೆಯೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಭಾಷೆಯನ್ನು ಉಳಿಸಿಕೊಂಡು ಬಂದ ಎಲ್ಲಾ ಸಾಹಿತಿ, ಕಲಾವಿದರಿಗೆ ಕೃತಜ್ಞತೆ ಕೋರಿದರು. ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದ ಎಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

Continue Reading

LATEST NEWS

ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ 2 ತಿಂಗಳ ಗೃಹಲಕ್ಷ್ಮೀ ಹಣ

Published

on

ಬೆಂಗಳೂರು: ಯುಗಾದಿ ಹಬ್ಬದಂದು ಮನೆಯ ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್ ಒಂದು ಕಾದಿದೆ. ರಾಜ್ಯದ ಮಹಿಳಾ ಮಣಿಗಳಿಗೆ ಯುಗಾದಿ ಹಬ್ಬದಂದೇ 2 ತಿಂಗಳ ಗೃಹಲಕ್ಷ್ಮೀ ಹಣ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ 17ನೇ ಕಂತಿನ 2 ತಿಂಗಳ ಒಟ್ಟು ಹಣ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ತಡವಾದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಹಾಗೂ ರಾಜ್ಯದ ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.

ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 31ರ ನಂತರ ಎರಡು ತಿಂಗಳ ಹಣವನ್ನು ಒಂದೇ ಸಲಕ್ಕೆ ಹಾಕುವುದಾಗಿ ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page