Connect with us

LATEST NEWS

ಯಾವಾಗ ಜಮೆಯಾಗಲಿದೆ ಗೃಹಲಕ್ಷ್ಮೀ ಹಣ..? ಡಿಕೆಶಿ ಹೇಳಿದ್ದೇನು?

Published

on

ಬೆಂಗಳೂರು: ಸಿದ್ಧರಾಮಯ್ಯ ಸರಕಾರದ ಪಂಚ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಕೂಡಾ ಒಂದು. ಚನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಜನರಿಗೆ ಪಂಚ ಯೋಜನೆಗಳ ಭರವಸೆಯನ್ನು ನೀಡಿತ್ತು. ಅದರಂತೆಯೇ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ. ಇದರಲ್ಲಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆಯ ಒಡತಿಗೆ ತಿಂಗಳಿಗೆ 2000 ರೂ.  ಜಮೆ ಮಾಡಲಾಗುತ್ತಿತ್ತು. ಕಳೆದ 10 ತಿಂಗಳಿನಿಂದ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಜಮಾವಣೆ ಆಗುತ್ತಿದ್ದು, ಜೂನ್ ಮತ್ತು ಜುಲೈ ತಿಂಗಳಿನಿಂದ ಹಣ ಜಮಾವಣೆಗೊಂಡಿಲ್ಲ. ಇದೀಗ ಎರಡು ತಿಂಗಳ ಹಣ ಜಮಾವಣೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಡಿಕೆಶಿ ಹೇಳಿದ್ದೇನು..?

ಮದ್ದೂರಿನಲ್ಲಿ ನಡೆಯುತ್ತಿದ್ದ ಜನಾಂದೋಲನದಲ್ಲಿ ಡಿಕೆಶಿ ಭಾಷಣ ಮಾಡುತ್ತಿದ್ದ ವೇಳೆ ‘ಗೃಹಲಕ್ಷ್ಮೀ ಹಣ ಬರುತ್ತಿದೆಯಾ? ಇಲ್ವಾ?’ ಎಂದು ಕೇಳಿದ್ದಾರೆ. ಈ ವೇಳೆ ಅಲ್ಲಿ ನೆರೆದಿದ್ದ ಮಹಿಳೆಯರು ‘ಇಲ್ಲಾ.. ಇಲ್ಲಾ’ ಎಂದು ಕೂಗಿ ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಡಿ.ಕೆ ಶಿವಕುಮಾರ್ ‘ಬರುತ್ತೆ ಬರುತ್ತೆ ಕಾಯುತ್ತಿರಿ. ಕಳೆದೆರೆಡು ತಿಂಗಳಿನ ಹಣ ಮಾತ್ರ ಬಾಕಿ ಇದ್ದು, ಅದು ಕೂಡಾ ಆದಷ್ಟು ಬೇಗ ನಿಮ್ಮ ಖಾತೆಗೆ ಜಮೆ ಆಗಲಿದೆ. ಅನುದಾನ ಬಿಡುಗಡೆ ಆಗಿದೆ. ಆದಷ್ಟು ಬೇಗೆ ನಿಮ್ಮ ಖಾತೆಗೆ ಹಣ ಜಮಾವಣೆಯಾಗಲಿದೆ’ ಎಂದು ಹೇಳಿದ್ದಾರೆ.

ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಕೊಂಡ ಬಡ ಮಹಿಳೆ

ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?

ಇನ್ನು ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್ ಗೃಹಲಕ್ಷ್ಮೀ  ಯೋಜನೆ ಕುರಿತು ಉಪಮುಖ್ಯಂತ್ರಿಗಳು ಹೇಳಿರುವುದನ್ನು ಉಲ್ಲೇಖ ಮಾಡಿದ್ದಾರೆ. ಇವತ್ತಿನಿಂದ ನಿಮ್ಮೆಲ್ಲರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುತ್ತದೆ. ಕೆಲವು ತಾಂತ್ರಿಕ ದೋಷಗಳಿಂದ ಹಣ ಜಮಾವಣೆ ಮಾಡಲು ಸಾಧ್ಯವಾಗಲಿಲ್ಲ. ಇವತ್ತಿನಿಂದ ಜೂನ್, ಜುಲೈ ಎರಡು ತಿಂಗಳ ಹಣ ಖಾತೆಗೆ ಜಮಾವಣೆ ಆಗಲಿದೆ ಎಂದು ಹೇಳಿದ್ದಾರೆ.

ಸರಕಾರದ ಗೃಹಲಕ್ಷ್ಮೀ ಯೋಜನೆಯಿದ ಈಗಾಗಲೇ 10 ತಿಂಗಳ ಕಾಲ ಹಣ ನೀಡಲಾಗಿದೆ. ಒಟ್ಟು 20,000 ರೂ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಜೂನ್, ಜುಲೈ ಎರಡು ತಿಂಗಳ ಹಣ ಅಂದರೆ ಒಟ್ಟು 4000 ರೂಪಾಯಿ ಫಲಾನುಭವಿಗಳ ಕೈ ಸೇರಲಿದೆ ಎಂದು ಹೇಳಲಾಗಿದೆ.  ಎರಡು ತಿಂಗಳ ಹಣ ಜಮಾವಣೆ ಆಗದೇ ಇರುವುದಕ್ಕೆ ಈಗಾಗಲೇ ಸರಕಾರದ ವಿರುದ್ದ ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ.

DAKSHINA KANNADA

ಜಪ್ಪಿನಮೊಗರು ನಾರಾಯಣಗುರು ಮಂದಿರದಲ್ಲಿ ಆರೋಗ್ಯ ತಪಾಸಣಾ ಶಿಬಿರ

Published

on

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಎನ್.ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಮತ್ತು ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಭಾನುವಾರ(ಫೆ.08) ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಆಯೋಜಿಸಲಾಗಿತ್ತು.

ಕಂಕನಾಡಿ ಗರೋಡಿಯ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದ ಮೊಕ್ತೇಸರ ಚಂದ್ರನಾಥ್ ಅತ್ತಾವರ  ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯವನ್ನು ದೇವರು ಕರುಣಿಸುತ್ತಾರೆ ಎಂಬುದು  ನಮ್ಮ ನಂಬಿಕೆ. ಆದರೆ ಆರೋಗ್ಯವನ್ನು ಕಾಪಾಡಿಕೊಂಡು ಬರುವಲ್ಲಿ ನಮ್ಮ ಪಾತ್ರವೂ ಇದೆ. ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಂಡು ಬರುವುದು ನಮ್ಮ ಜವಾಬ್ದಾರಿ. ಹಾಗಿರುವಾಗ ಇಂತಹ ಶಿಬಿರಗಳು ಸಹಕಾರಿಯಾಗುತ್ತವೆ ಎಂದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ, ಜನರ ಆರೋಗ್ಯವನ್ನು ಕಾಪಾಡಿಕೊಂಡು ಬರಬೇಕೆಂಬ ಉದ್ದೇಶದಿಂದ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತಿದೆ. ಸಹಕಾರಿ ಸಂಘಗಳ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ಪ್ರಯೋಜನ ಲಭಿಸುತ್ತಿದ್ದು, ಅದರ ಪ್ರಯೋಜನ ಪಡೆಯಬೇಕೆಂದರು.  ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಮನೋಜ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ :WATCH VIDEO : ಉಡುಪಿ : ಕಬ್ಯಾಡಿಯಲ್ಲಿ ಕಾಂಪೌಂಡ್‌ನಲ್ಲಿ ಅಡ್ಡಾಡಿದ ಚಿರತೆ; ವೀಡಿಯೋ ವೈರಲ್!

ಕದ್ರಿಯ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಹಾಗೂ ಮುಕ್ಕ ಶ್ರೀನಿವಾಸ್ ಇನಿಸ್ಟಿಟ್ಯೂಟ್‌ ಆಫ್‌ ಡೆಂಟಲ್ ಸಾಯನ್ಸ್ ಇದರ ತಜ್ಞ ವೈದ್ಯರು ವೈದ್ಯಕೀಯ ತಪಾಸಣೆಯನ್ನು ನಡೆಡಿಕೊಟ್ಟರು.

Continue Reading

LATEST NEWS

ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ ನಲ್ಲಿ ಆಕಸ್ಮಿಕ ಬೆಂಕಿ ದುರಂತ

Published

on

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರ ಘಡಕ್ಕೆ ಸಂಚರಿಸುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.


ಬಸ್ ಚಲಿಸುತ್ತಿದ್ದ ವೇಳೆ ಇಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಚಾಲಕ ಸಮಯಪ್ರಜ್ಞೆ ಪ್ರದರ್ಶಿಸಿ ಬಸ್ಸನ್ನು ರಸ್ತೆಯ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಸುರಕ್ಷಿತವಾಗಿ ಇಳಿಯಲು ಅವಕಾಶ ಮಾಡಿಕೊಟ್ಟರು. ಚಾಲಕನ ಬಾಗಿಲು ಮೂಲಕ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮದ್ಯವೆಂದು ಸ್ಪಿರಿಟ್ ಸೇವಿಸಿ ಯುವಕ ಸಾವು; ಇಬ್ಬರ ಬಂಧನ

ಚಾಲಕನ ತಕ್ಷಣದ ಕ್ರಮದಿಂದಾಗಿ ಸಂಭವಿಸಬಹುದಾದ ಭಾರಿ ಅವಘಡ ತಪ್ಪಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲವೆಂದು ವರದಿಯಾಗಿದೆ. ಘಟನೆಯ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ದೇಶದ ಆರ್ಥಿಕ ಪ್ರಗತಿಗೆ ಪೂರಕವಾಗಿದೆ ಕೇಂದ್ರ ಬಜೆಟ್ : ಎಸ್.ಎಸ್.ನಾಯಕ್

Published

on

ಮಂಗಳೂರು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಈ ವರ್ಷದ ಬಜೆಟ್‌ ದೇಶದ ಆರ್ಥಿಕ ಪ್ರಗತಿಗೆ ಪೂರಕವಾದ ಬಜೆಟ್‌ ಆಗಿದೆ ಎಂದು ಹಿರಿಯ ಲೆಕ್ಕಪರಿಶೋಧಕ, ಆರ್ಥಿಕ ತಜ್ಞ ಎಸ್‌. ಎಸ್‌. ನಾಯಕ್‌  ಅಭಿಪ್ರಾಯ ಪಟ್ಟಿದ್ದಾರೆ. ಮಂಗಳೂರು ಪ್ರಾಡಕ್ಟಿವಿಟಿ ಕೌನ್ಸಿಲ್‌ ವತಿಯಿಂದ ಲೇಡಿಹಿಲ್‌ ನ ಸೀ ವ್ಯೂ ಹೊಟೇಲ್‌ ಸಭಾಂಗಣದಲ್ಲಿ ಶನಿವಾರ(ಫೆ.07)ಏರ್ಪಡಿಸಿದ್ದ ಡಿ ಕೋಡಿಂಗ್ ಯೂನಿಯನ್ ಬಜೆಟ್ 2026 ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

ಈ ಬಾರಿಯ ಬಜೆಟ್‌ನಲ್ಲಿ ವಿಶೇಷವಾಗಿ ಯಾವ ಕೊಡುಗೆಯನ್ನೂ ನೀಡಿಲ್ಲ ಎಂದು ಕೆಲವರು ಟೀಕೆ ಮಾಡುತ್ತಾರೆ. ಆದರೆ ಇಂತಹ ಆರೋಪದಲ್ಲಿ ಹುರುಳಿಲ್ಲ. ಏಕೆಂದರೆ ಬಜೆಟ್‌ನ್ನು ಪೂರ್ತಿಯಾಗಿ ಓದಿ ಆರ್ಥೈಸಿಕೊಳ್ಳದವರು ಮಾತ್ರ ಈ ರೀತಿಯಾಗಿ ಹೇಳಿಕೆ ನೀಡುತ್ತಾರೆ ಎಂದರು.

ಈ ಬಜೆಟ್‌ನಲ್ಲಿ ಅನೇಕ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಯಾವುದೇ ಹೆಚ್ಚುವರಿ ತೆರಿಗೆಯನ್ನು ಹಾಕದೆ ಜನರಿಗೆ ಅನೇಕ ಪ್ರಯೋಜನಗಳನ್ನು ನೀಡಿದೆ. ಭಾರತವು ಜಗತ್ತಿನ ಅತಿ ವೇಗದ ಆರ್ಥಿಕ ಶಕ್ತಿಯಾಗಿ ಮೂಡಿಬರುತ್ತಿದ್ದು, ಅದಕ್ಕೆ ಪೂರಕವಾಗಿ ಈ ಬಜೆಟ್‌ ಬಂದಿದೆ.  ಬಂಡವಾಳ ವೆಚ್ಚದಲ್ಲಿ ಏರಿಕೆಯಾಗಿದ್ದು, 12.20 ಲಕ್ಷ ಕೋಟಿ ರೂಪಾಯಿ  ಮೀಸಲಿಡಲಾಗಿದೆ. ಇದು ಬಜೆಟ್‌ ಗಾತ್ರದ ಶೇಕಡಾ 22.80 ಆಗಿದ್ದು, ಆರ್ಥಿಕ ಪ್ರಗತಿಗೆ ಪೂರಕವಾಗಿದೆ. ಮುಂಬರುವ ದಿನಗಳಲ್ಲಿ ದೇಶದ ನಂ.1 ಆರ್ಥಿಕ ಶಕ್ತಿಯಾಗಿ ಮೂಡಿಬರಲು ಸಹಾಯಕವಾಗಿದೆ ಎಂದರು.

ಇದನ್ನೂ ಓದಿ : ಮಂಗಳೂರು : ಕೆಎಂಸಿ ಆಸ್ಪತ್ರೆಯಲ್ಲಿ ‘ಕ್ಯಾನ್ಸರ್ ತಪ್ಪಿಸೋಣ’ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಕೆನರಾ ಬ್ಯಾಂಕ್‌ ಮಂಗಳೂರು ವೃತ್ತ ಕಚೇರಿಯ ಜನರಲ್‌ ಮ್ಯಾನೇಜರ್‌ ಮತ್ತು ಮುಖ್ಯಸ್ಥ  ಮಂಜುನಾಥ್‌ ಬಿ. ಸಿಂಘೈ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಒಮಾನ್ ದೇಶದ ಸಿಬಿಎಫ್‌ಎಸ್‌- ಸೆಂಟರ್‌ ಫಾರ್‌ ಟ್ರೈನಿಂಗ್‌ ಇದರ ನಿರ್ದೇಶಕ ಡಾ.ಕೆ. ರಾಜೇಶ್‌ ನಾಯಕ್‌, ಮಂಗಳೂರು ಪ್ರಾಡಕ್ಟಿವಿಟಿ ಕೌನ್ಸಿಲ್‌ನ ಅಧ್ಯಕ್ಷ ಯು.ರಾಮರಾವ್‌ ಮತ್ತಿತರರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page