Connect with us

LATEST NEWS

ಬೆಂಗಳೂರು : ಹೆಂಡ್ತಿಯ ಶೀಲದ ಶಂಕೆ – ಡಂಬಲ್ಸ್​ನಿಂದ ಹೊಡೆದು ಬಡಿದು ಪತ್ನಿಯ ಹತ್ಯೆ..!

Published

on

ಬೆಂಗಳೂರು: ಪತ್ನಿಯ ಶೀಲದ ಮೇಲೆ ಶಂಕೆ ಮಾಡಿದ ಗಂಡ ತನ್ನ ಪತ್ನಿಯನ್ನು ಡಂಬಲ್ಸ್‌ನಿಂದ ಹೊಡೆದು ಬಡಿದು ಬೀಕರವಾಗಿ ಹತ್ಯೆಗೈದ ಘಟನೆ ನಗರದ ರಾಮಮೂರ್ತಿನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆ ಬಳಿಕ ಪತಿಯೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಆರೋಪಿಯು ರಾಮಮೂರ್ತಿನಗರ ಪೊಲೀಸರೆದುರು ಶರಣಾಗಿದ್ದಾನೆ. ಮೊರೀಸ್​ ಕೊಲೆಗೈದ ಆರೋಪಿಯಾಗಿದ್ದು ಪೊಲೀಸ್ ವಶದಲ್ಲಿದ್ದಾನೆ.

ಲಿಡಿಯಾ (44) ಕೊಲೆಯಾದ ಮಹಿಳೆಯಾಗಿದ್ದಾರೆ.ರಾಮಮೂರ್ತಿನಗರದ ಹೊಯ್ಸಳ ಸ್ಟ್ರೀಟ್​ನಲ್ಲಿನ ಎರಡು ಅಂತ್ತಸಿನ ಮನೆಯೊಂದರಲ್ಲಿ ವಾಸವಾಗಿರುವ ಮೋರಿಸ್, 18 ವರ್ಷಗಳ ಹಿಂದೆ ಲಿಡಿಯಾಳನ್ನು ಮದುವೆ ಮಾಡಿಕೊಂಡಿದ್ದ.

ದಂಪತಿಗೆ ಶಾಲೆಗೆ ಹೋಗುವ ಮೂವರು ಗಂಡು ಮಕ್ಕಳಿದ್ದಾರೆ. ಪತ್ನಿ ಗೃಹಿಣಿಯಾದರೆ ಪತಿ ಮೊಬೈಲ್‌ ನೆಟ್​​ವರ್ಕ್ ಕಂಪೆನಿಯೊಂದರಲ್ಲಿ ಕೆಲಸ‌ ಮಾಡುತ್ತಿದ್ದ.‌

ದಂಪತಿಯ ಸಂಸಾರದಲ್ಲಿ ಎಲ್ಲವೂ ಅನ್ಯೋನ್ಯವಾಗಿಯೇ ಇತ್ತು.‌ ಈ‌ ಮಧ್ಯೆ‌ ಪತಿ ಮೋರಿಸ್​ಗೆ ಪತ್ನಿಯ ಮೇಲೆ ಅನುಮಾನ ಹುಟ್ಟಿಕೊಂಡಿರುವುದು ಅನಾಹುತಕ್ಕೆ ಕಾರಣವಾಗಿದೆ.

ಪರಪುರುಷನೊಂದಿಗೆ ಸಂಬಂಧವಿದೆ ಎಂದು‌ ಶಂಕಿಸಿ ಹೆಂಡತಿಯೊಂದಿಗೆ ಆಗಾಗ ಗಲಾಟೆ ಮಾಡುತ್ತಿದ್ದ. ಅದೇ ರೀತಿ ಇಂದು ಬೆಳಗ್ಗೆ ಮಕ್ಕಳು‌ ಶಾಲೆಗೆ ಹೋದ‌‌‌ ಮೇಲೆ ಪತ್ನಿ ಜೊತೆ ಕ್ಯಾತೆ ತೆಗೆದಿದ್ದಾನೆ.

ನೋಡ ನೋಡುತ್ತಿದ್ದಂತೆ ಗಲಾಟೆ ತಾರಕ್ಕಕ್ಕೇರಿದೆ. ಮನೆಯಲ್ಲಿದ್ದ ಸುಮಾರು ಎರಡೂವರೆ‌ ಕೆ.ಜಿ ತೂಕದ ಡಂಬಲ್ಸ್​ನಿಂದ ಐದಾರು ಬಾರಿ ಪತ್ನಿಯ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಬಳಿಕ ತಾನೇ ಪೊಲೀಸ್ ಕಂಟ್ರೋಲ್ ರೂಂ ಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರಿಗೆ ಮನೆಯಲ್ಲಿ ರಕ್ತ ಸಿಕ್ತವಾದ ಮಹಿಳೆ ಶವ ಸಿಕ್ಕಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

DAKSHINA KANNADA

ನಾಳೆ(ಜ.21) ಕದ್ರಿ ಮ್ಯೂಸಿಕಲ್ ನೈಟ್ಸ್ 2026 : ರಿಷಬ್ ಶೆಟ್ಟಿ ಭಾಗಿ

Published

on

ಮಂಗಳೂರು : ಕದ್ರಿ ಶ್ರೀಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ  ಪ್ರಯುಕ್ತ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಕದ್ರಿ ಈವೆಂಟ್ಸ್ ಅರ್ಪಿಸುವ  ‘ಕದ್ರಿ ಮ್ಯೂಸಿಕಲ್ ನೈಟ್ಸ್ 2026’ ನಾಳೆ(ಜ.21) ಸಂಜೆ 7 ಗಂಟೆಯಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದೆ.

ಎಂದಿನಂತೆ ಈ ಬಾರಿಯೂ ತಾರಾ ಮೆರುಗು ಇರಲಿದ್ದು, ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಆಗಮಿಸಲಿದ್ದಾರೆ.

ಆಯೋಜಕ ಜಗದೀಶ್ ಕದ್ರಿ ಈ ಬಗ್ಗೆ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಕದ್ರಿ ಮ್ಯೂಸಿಕಲ್ ನೈಟ್ ಆಯೋಜನೆ ಮಾಡಿದ್ದೇವೆ. ಸಿನಿಮಾ ಸೆಲೆಬ್ರಿಟಿಗಳು, ಗಣ್ಯರು ಸೇರಿದಂತೆ ಹೆಸರಾಂತ ಗಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ : BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

ಕನ್ನಡ, ತುಳು ಚಿತ್ರರಂಗದ ಕಲಾವಿದರಾದ ರೂಪೇಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರ್ಜುನ್ ಕಾಪಿಕಾಡ್, ಶನಿಲ್ ಗುರು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ದೀಪಕ್ ರೈ ಪಾಣಾಜೆ, ವಿಜೆ ವಿನೀತ್, ಸಮತಾ ಅಮೀನ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Continue Reading

DAKSHINA KANNADA

ಮಂಗಳೂರು: ಡ್ರಗ್ಸ್‌ ನಿರ್ಮೂಲನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಬಸ್ಸು ಮಾಲಕರ ಸಂಘ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಾಗಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ ಬಸ್ಸು ಮಾಲಕರ ಸಂಘವೂ ಕೈಜೋಡಿಸಿ ಡ್ರಗ್ ನಿರ್ಮೂಲನೆ ಮಾಡಲು ಬೀದಿ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದು ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡ್ರಗ್ ಜಾಲಕ್ಕೆ ಕಡಿವಾಣ, ನಶೆಗೆ ಒಳಗಾಗುವ ವಿದ್ಯಾರ್ಥಿಗಳನ್ನು ಅದರಿಂದ ಹೊರತರುವ ಕೆಲಸ ಮಾಡುತ್ತಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ನುಡಿದರು. ಅಲ್ಲದೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆಗೆ ನಾವು ಕೈಜೋಡಿಸಿದ್ದೇವೆ. ಜನವರಿ 27ರ ಮಂಗಳವಾರ ರೋಶನಿ ನಿಲಯ ಕಾಲೇಜಿನ ಸಹಭಾಗಿತ್ವದೊಂದಿಗೆ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಹಲವು ಕಡೆ ಡ್ರಗ್‌ ವಿರೋಧಿ ಬೀದಿನಾಟಕ ಆಯೋಜನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮಂಗಳೂರು: ಹಂಚಿನ ಫ್ಯಾಕ್ಟರಿಯಲ್ಲಿ ಅ*ಗ್ನಿ ಅ*ವಘ*ಡ

ನಗರದ ಸೆಂಟ್ರಲ್‌ ಬಸ್ಸು ನಿಲ್ದಾಣ, ತೊಕ್ಕೊಟ್ಟು ಬಸ್ಸು ನಿಲ್ದಾಣ, ತಲಪಾಡಿ, ಉಳ್ಳಾಲ, ಲಾಲ್‌ಭಾಗ್‌ ಸೇರಿದಂತೆ ಹಲವು ಕಡೆಗಳ ಬಸ್ಸು ನಿಲ್ದಾಣಗಳಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ಬಸ್ಸುಗಳಲ್ಲಿ ಸ್ಟಿಕ್ಕರ್‌ ಹಚ್ಚಿ ಜಾಗೃತಿ ಮೂಡಿಸಲಿದ್ದೇವೆ. ಇದಕ್ಕೆ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ ರಾಮಚಂದ್ರ ನಾಯ್ಕ , ರಾಮಚಂದ್ರ ಪಿಲಾರ್ ಹಾಗೂ ಜೊತೆ ಕಾರ್ಯದರ್ಶಿ ರಾಜೇಶ್ ಟಿ ಯವರು ಉಪಸ್ಥಿತರಿದ್ದರು.

Continue Reading

BIG BOSS

BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

Published

on

BBK12: ಟಾಪ್‌-06ನಲ್ಲಿ ಕಾವ್ಯಾ ಅವರು ಇರೋದಕ್ಕೆ ಅರ್ಹರಲ್ಲ ಎಂದು ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ ಹೇಳಿದ್ದಾರೆ.


ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ರನ್ನರ್‌ ಅಪ್‌ ಆಗಿ ರಕ್ಷಿತಾ ಶೆಟ್ಟಿ ಹೊರ ಹೊಮ್ಮಿದ್ದಾರೆ. ಬಿಗ್‌ ಬಾಸ್‌ ಮನೆಯಲ್ಲಿ ಇದ್ದಾಗ ಕಾವ್ಯಾ ಶೈವ ಅವರ ಜೊತೆ ರಕ್ಷಿತಾ ಶೆಟ್ಟಿ ಅವರಿಗೆ ಅಷ್ಟೊಂದು ಒಡನಾಟವಿರಲಿಲ್ಲ.

ನಾಮಿನೇಶನ್‌ ವಿಚಾರದಲ್ಲೂ ಕಾವ್ಯಾ ಮತ್ತು ರಕ್ಷಿತಾ ಅವರಿಗೆ ಆಗ್ಗಾಗೇ ಜಗಳವಾಗುತ್ತಿತ್ತು. ಅಲ್ಲದೆ ಗಿಲ್ಲಿ ಕಾವ್ಯಾ ಫ್ರೆಂಡ್‌ಶಿಪ್ ಕುರಿತು ರಕ್ಷಿತಾ ಅವರಿಗೆ ಅಸಮಾಧಾನವಿದೆ ಎಂದು ವೀಕ್ಷಕರು ಅಭಿಪ್ರಾಯ ಪಟ್ಟಿದ್ದರು. ಕಾವ್ಯಾ ಅವರ ಜೊತೆ ಇರುವ ಮುನಿಸು ರಕ್ಷಿತಾ ಅವರಿಗೆ ಕಡಿಮೆಯಾಗಿಲ್ಲ ಎನ್ನಬಹುದು.

ಇದನ್ನೂ ಓದಿ: ರಕ್ಷಿತಾ ಕ್ಷಮಾಪಣೆ ಪತ್ರದ ಬಗ್ಗೆ ಧ್ರುವಂತ್ ಪೋಸ್ಟ್: ನಮ್ಮಿಬ್ಬರದ್ದು ಒಂದೇ ರಾಶಿ-ನಕ್ಷತ್ರ!

ಇದೀಗ ಸಂದರ್ಶನವೊಂದರಲ್ಲಿ ಕಾವ್ಯಾ ಅವರು ಟಾಪ್‌ 6ನಲ್ಲಿ ಸ್ಥಾನ ಪಡೆಯಲು ಅರ್ಹರಲ್ಲ, ಅವರ ಬದಲಿಗೆ ಜಾನ್ವಿ ಅವರು ಇರಬೇಕಿತ್ತು. ಮಾಲು ಅಣ್ಣ ಇರಬಹುದಿತ್ತು. ಮಾಲು ಅವರು ಮಾತನಾಡುವುದು ಕಡಿಮೆ. ಆದರೆ ಅವರದ್ದು ಒಳ್ಳೆಯ ವ್ಯಕ್ತಿತ್ವ ಎಂದು ರಕ್ಷಿತಾ ಶೆಟ್ಟಿ ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page