Connect with us

LATEST NEWS

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆಗೆ ಶರಣು..!

Published

on

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆಗೆ ಶರಣು..!

ಚಿಕ್ಕಮಗಳೂರು : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಹೆಂಡತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಫಿನಾಡು ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ಬಡವಾಣೆಯಲ್ಲಿ ನಡೆದಿದೆ.

ಇದಕ್ಕೂ ಮೊದಲು ನಾನು ವಿಷ ಕುಡಿಯುತ್ತೇನೆ, ನೀನು ಸಾಯಿ ಎಂದು ಗಂಡನೇ ಪ್ರಚೋದನೆ ನೀಡಿದ್ದ.

ಇದನ್ನ ನಂಬಿದ ಹೆಂಡತಿ ನೇಣಿಗೆ ಶರಣಾಗಿದ್ದಾಳೆ. ಆಕೆಯ ಹೆಸರು ರಂಜಿತಾ. ವಯಸ್ಸು 23. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಸಮೀಪದ ಹೊಗರೇಹಳ್ಳಿ ನಿವಾಸಿ.

ಮೂರು ವರ್ಷದ ಹಿಂದೆ ಚಿಕ್ಕಮಗಳೂರಿನ ಕೆಇಬಿಯಲ್ಲಿ ಕ್ಯಾಶಿಯರ್ ಆಗಿದ್ದ ಅರುಣ್ ಎಂಬುವವನೊಂದಿಗೆ ವಿವಾಹವಾಗಿತ್ತು. ಮದುವೆಯಾದ ಮೂರು ವರ್ಷಕ್ಕೆ ಕೇವಲ ಒಂದು ದಿನ ಮಾತ್ರ ರಂಜಿತಾಳನ್ನು ತವರಿಗೆ ಕಳಿಸಿದ್ದನಂತೆ ಅರುಣ್.

ಆಮೇಲೆ ಅದೇನಾಯ್ತೋ ಏನೋ… ಹಳ್ಳಿಯಲ್ಲಿ ಕಟ್ಟಿಸುತ್ತಿದ್ದ ಮನೆಯಲ್ಲಿದ್ದ ಅರುಣ್, ನಿನ್ನೆ ಸಂಜೆ 4 ಗಂಟೆಗೆ ಪತ್ನಿಗೆ ಫೋನ್ ಮಾಡಿ ನೀನೂ ಸಾಯಿ, ನಾನು ಸಾಯುತ್ತೇನೆ ಎಂದಿದ್ದನಂತೆ.

ಗಂಡನ ಮಾತು ನಂಬಿದ ಹೆಂಡತಿ ಹಾಲು ಕುಡಿಯೋ ಎರಡು ವರ್ಷದ ಮಗು ಬಿಟ್ಟು ನೇಣಿಗೆ ಕೊರಳೊಡ್ಡಿ, ಅಣ್ಣನಿಗೆ ಫೋನ್ ಮಾಡಿದ್ದಳು. ಅಣ್ಣ ಮನೆಗೆ ಬರುವಷ್ಟರಲ್ಲಿ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು. ಗಾಬರಿಯಿಂದ ಹಳ್ಳಿಗೆ ಹೋಗಿ ಭಾವನನ್ನು ನೋಡಿದರೆ ಆತ ಒಂದು ಕೇಸ್ ಬಿಯರ್​ನಲ್ಲಿ 9 ಬಾಟಲಿ ಖಾಲಿ ಮಾಡಿ, ಸಿಗರೇಟ್ ಸೇದುತ್ತ ಕುಳಿತಿದ್ದ!. ಹೆಂಡತಿಯ ಅಣ್ಣನನ್ನು ನೋಡಿ ನಾನು ಕೂಡ ವಿಷ ಕುಡಿದಿದ್ದೇನೆ ಎಂದ ಆತನನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆತ ಸಾವಿನಿಂದ ಪಾರಾಗಿದ್ದಾನೆ. ಆದರೆ, ಮೃತ ರಂಜಿತಾ ಕುಟುಂಬದವರು ಆತನ ಮಾನಸಿಕ ಕಿರುಕುಳಕ್ಕೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ.

ಅರುಣ್​ಗೆ ಮದುವೆ ಮುಂಚೆಯೇ ಅಂದರೆ ಸುಮಾರು 10 ವರ್ಷಗಳಿಂದಲೂ ಅಕ್ರಮ ಸಂಬಂಧವಿತ್ತು ಎಂದು ಮೃತ ರಂಜಿತಾಳ ಪೋಷಕರು ಆರೋಪಿಸಿದ್ದಾರೆ. ಅರುಣ್ ಹಾಗೂ ಆಕೆಯ ಕಿರುಕುಳದಿಂದಲೇ ಬೇಸತ್ತು ರಂಜಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ರಂಜಿತಾ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರುಣ್ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿರೋ ಮಹಿಳೆ, ರಂಜಿತಾಗೆ ನಾನು ಅರುಣ್​ನನ್ನು ಮದುವೆಯಾಗಿ ಹತ್ತು ವರ್ಷವಾಯ್ತು. ನೀನು ಏಕೆ ಮದುವೆಯಾದೆ? ಎಂದು ಆಕೆಯೂ ಕಿರುಕುಳ ನೀಡುತ್ತಿದ್ದಳು. ಅಷ್ಟೆ ಅಲ್ಲದೆ, ಅರುಣ್ ಅಕ್ರಮ ಸಂಬಂಧವಿಟ್ಟುಕೊಂಡಿದ್ದ ಮಹಿಳೆ ಜೊತೆ ಇದ್ದ ಫೋಟೋ ಹಾಗೂ ವಿಡಿಯೋಗಳಿದ್ದ ಪೆನ್​ಡ್ರೈವ್​ ಕೂಡ ರಂಜಿತಾಗೆ ಸಿಕ್ಕಿ ಎಲ್ಲವನ್ನೂ ನೋಡಿದ್ದಳು. ಈ ಎಲ್ಲಾ ವಿಷಯವನ್ನು ಆಕೆ ಅಪ್ಪನ ಗಮನಕ್ಕೂ ತಂದಿದ್ದಳು.

ಮದುವೆಯಾದ ಮೂರು ವರ್ಷವಾದ ಬಳಿಕ ಕಳೆದ ಭಾನುವಾರ 24 ಗಂಟೆ ಮಾತ್ರ ತವರಿಗೆ ಕಳಿಸಿದ್ದಂತೆ ಅರುಣ್. ಗಂಡ ಹಾಗೂ ಆ ಮಾಯಾಂಗನೆಯಿಂದ ನನ್ನ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ, ಏನೂ ಅರಿಯದ ಎರಡು ತಿಂಗಳ ಮಗು ಅನಾಥವಾಗಿದೆ ಎಂದು ರಂಜಿತಾ ಕುಟುಂಬಸ್ಥರು ಅರುಣ್​ನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರೋ ಬಸವನಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page