Connect with us

LATEST NEWS

ತವರು ಮನೆಯಿಂದ ಹಣ ತರದಿದ್ದರೆ ಕೊಲ್ಲುವ ಬೆದರಿಕೆ; ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ಪತ್ನಿಯಿಂದ ಕೇಸ್​..!

Published

on

ಮಧ್ಯಪ್ರದೇಶ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಮೊಮ್ಮಗನ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಈ ಕುರಿತು ಮೊಮ್ಮಗ ದೇವೇಂದ್ರ ಗೆಹ್ಲೋಟ್ ವಿರುದ್ಧ ಪತ್ನಿ ದಿವ್ಯಾ ಗೆಹ್ಲೋಟ್ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲಾ ಎಸ್​ಪಿ ಅಮಿತ್ ಕುಮಾರ್​ಗೆ ಲಿಖಿತ ದೂರು ಸಲ್ಲಿಕೆ ಮಾಡಿದ್ದಾರೆ. ದೇವೇಂದ್ರ ಗೆಹ್ಲೋಟ್, ತಂದೆ ಜಿತೇಂದ್ರ ಗೆಹ್ಲೋಟ್, ಮೈದುನ ವಿಶಾಲ್ ಗೆಹ್ಲೋಟ್, ಅನಿತಾ ಗೆಹ್ಲೋಟ್ (ರಾಜ್ಯಪಾಲರ ಪತ್ನಿ) ವಿರುದ್ಧವೂ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಮದುವೆಗೂ ಮುನ್ನ ಪತಿ ದೇವೇಂದ್ರ ಗೆಹ್ಲೋಟ್​ಗೆ ಅಲ್ಕೋಹಾಲ್, ಡ್ರಗ್ಸ್, ಆಕ್ರಮ ಸಂಬಂಧ ಇತ್ತು. ಇವುಗಳನ್ನು ಮುಚ್ಚಿಟ್ಟು ದೇವೇಂದ್ರ ಗೆಹ್ಲೋಟ್ ಜೊತೆಗೆ ನನ್ನ ಮದುವೆ ಮಾಡಿದ್ದಾರೆ. 2018ರ ಏಪ್ರಿಲ್ 18 ರಂದು ದಿವ್ಯಾ-ದೇವೇಂದ್ರ ಗೆಹ್ಲೋಟ್ ವಿವಾಹವಾಗಿದೆ. ಗಂಡನ ಮನೆಯಲ್ಲಿ ಊಟ ಕೊಟ್ಟಿಲ್ಲ, ಹೊಡೆದು ಹಿಂಸೆ ನೀಡಿದ್ದಾರೆ. 50 ಲಕ್ಷ ರೂಪಾಯಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದಾರೆ. ತವರು ಮನೆಯಿಂದ ಹಣ ತರದಿದ್ದರೆ ಕೊಲ್ಲುವ ಬೆದರಿಕೆ ಹಾಕಿದ್ದಾರೆ. ಅಲ್ಲದೇ ನಾಲ್ಕು ವರ್ಷದ ಮಗಳನ್ನು ನನ್ನಿಂದ ಕಿತ್ತುಕೊಂಡಿದ್ದು, ಆಕೆಯನ್ನು ಪತಿಯ ವಶದಲ್ಲಿ ಇರಿಸಿಕೊಂಡಿದೆ ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ: ವೃದ್ಧ ದಂಪತಿ ಡಿಜಿಟಲ್‌ ಅರೆಸ್ಟ್‌ಗೆ ಯತ್ನ; ಸೈಬರ್‌ ಕಳ್ಳರ ಯತ್ನ ವಿಫಲಗೊಳಿಸಿದ ಬ್ಯಾಂಕ್‌ ಮ್ಯಾನೇಜರ್‌, ಪೊಲೀಸರು

ಈ ಎಲ್ಲ ಘಟನೆ ಉಜ್ಜೈನಿ ಜಿಲ್ಲೆಯಲ್ಲಿ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈಗ ದೂರು ಉಜ್ಜೈನಿ ಜಿಲ್ಲೆಯ ಪೊಲೀಸರಿಗೆ ರತ್ಲಾಂ ಜಿಲ್ಲಾ ಪೊಲೀಸರಿಂದ ವರ್ಗಾವಣೆ ಮಾಡಲಾಗಿದೆ. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ದೇವೇಂದ್ರ ತಂದೆ ಜಿತೇಂದ್ರ ಗೆಹ್ಲೋಟ್, ಯಾರೂ ಬೇಕಾದರೂ ಆರೋಪ ಮಾಡಬಹುದು. ನಾವು ಮಾಧ್ಯಮದ ಮುಂದೆ ಎಲ್ಲ ಸತ್ಯಾಂಶ ಇಡುತ್ತೇವೆ ಎಂದಿದ್ದಾರೆ.

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page