Connect with us

bangalore

ಗಂಡನ ಡಾಬಾಗೆ ಬೆಂಕಿ ಹಚ್ಚಲು ರೌಡಿಗೆ 20 ಸಾವಿರಕ್ಕೆ ಸುಪಾರಿ ಕೊಟ್ಟ ಹೆಂಡ್ತಿ

Published

on

ಬೆಂಗಳೂರು: ಪಾಲುದಾರಿಕೆಯಲ್ಲಿ ಪತಿ ನಡೆಸುತ್ತಿದ್ದ ಡಾಬಾಗೆ ಬೆಂಕಿ ಹಚ್ಚಲು ಪತ್ನಿಯೇ ರೌಡಿಗೆ ಸುಪಾರಿ ನೀಡಿದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ.

ಪತ್ನಿಯನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಯೂ ಟರ್ನ್ ಡಾಬಾ ಮಾಲೀಕ ಅರ್ಪಿತ್ ಪತ್ನಿ ಶೀತಲ್ ಎಂಬಾಕೆಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಕಳೆದ‌ ತಿಂಗಳು 24ರಂದು ರಾತ್ರಿ ದುಷ್ಕರ್ಮಿಗಳು ಬಂದು ಡಾಬಾ‌‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು‌.

ಇದನ್ನು ಪ್ರಶ್ನಿಸಲು ಹೋದ ಡಾಬಾದ ಸಿಬ್ಬಂದಿ ಮನೋಜ್ ಎಂಬಾತನ ಮೇಲೂ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಮನೋಜ್ ಮೃತಪಟ್ಟಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೋಲದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳಾದ ರೌಡಿಶೀಟರ್ ಮನುಕುಮಾರ್ ಮತ್ತು ಆತನ ಸಹಚರರಾದ ಹೇಮಂತ್ ಹಾಗೂ ಮಂಜುನಾಥನನ್ನು ಬಂಧಿಸಿದ್ದರು‌.

ಕೆಲ ತಿಂಗಳ ಹಿಂದೆ ಅರ್ಪಿತ್ ಹಾಗೂ ಶೀತಲ್ ಮದುವೆಯಾಗಿತ್ತು.‌ ಪ್ರಾರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿ ಕಾಲಕ್ರಮೇಣ ಕೌಟುಂಬಿಕ ಕಾರಣಕ್ಕಾಗಿ ಇಬ್ಬರ ನಡುವೆ ವೈಮನಸ್ಸು ಬೆಳೆದಿತ್ತು. ‌

ನಿತ್ಯ ಜಗಳವಾಗುತಿತ್ತು‌. ಈ ಹಿನ್ನೆಲೆ ಹೆಂಡತಿಯನ್ನು ತವರು ಮನೆಗೆ ಬಿಟ್ಟು ಬಂದಿದ್ದ.

ಹಲವು ದಿನಗಳಾದರೂ ಹೆಂಡ್ತಿ ನೋಡಲು ಹೋಗದೆ ಡಾಬಾ ವ್ಯವಹಾರದಲ್ಲಿ‌ ಮಗ್ನನಾಗಿದ್ದ.‌ ಇದರಿಂದ ಅಸಮಾಧಾನಗೊಂಡು ಗಂಡನಿಗೆ ಬುದ್ಧಿ ಕಲಿಸಲು ಹೋದ ಹೆಂಡತಿ ಶೀತಲ್, ತನ್ನ ಸ್ನೇಹಿತ ರೌಡಿಶೀಟರ್ ಮನುಕುಮಾರ್​ಗೆ 20 ಸಾವಿರಕ್ಕೆ ಸುಪಾರಿ ನೀಡಿದ್ದಳು. ಶೀತಲ್ ಡಾಬಾಗೆ ಬೆಂಕಿ ಹಚ್ಚಿದರೆ ಅರ್ಪಿತ್​​ಗೆ ಬುದ್ಧಿ ಬರುತ್ತದೆ ಎಂಬ ಪ್ಲಾನ್ ಮಾಡಿದ್ದಳು. ಪ್ಲಾನ್​​ನಂತೆ ಮನು ಸುಪಾರಿ ತೆಗೆದುಕೊಂಡಿದ್ದ. ಈತನ ಸಹಚರರಿಗೆ ಹಣ ಕೊಟ್ಟು ಬೆಂಕಿ ಹಚ್ಚುವ ಸಂಚು ರೂಪಿಸಿದ್ದ.

Advertisement
Click to comment

Leave a Reply

Your email address will not be published. Required fields are marked *

bangalore

ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

Published

on

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಹರಿಯಾಣ ಮೂಲದ ಸುಧೀರ್ ಕುಮಾರ್ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೆಂಗಳೂರಲ್ಲಿ ಲೇಡಿ ಫಿಟ್ನೆಸ್, ನ್ಯೂಟ್ರೀಷಿಯನ್ ಇನ್‌ಫ್ಲೂಯೆನ್ಸರ್ ಆಗಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾ ಮೂಲಕ ಆತ ಲೈಂಗಿಕವಾಗಿ ಪ್ರಚೋದಿಸುವಂತೆ ಮೆಸೇಜ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಪೀಡಿಸಲು ಶುರುಮಾಡಿದ್ದ. ಜೊತೆಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸೆ ನೀಡುತ್ತಿದ್ದ. ಅದಾದ ಬಳಿಕ ವಾಟ್ಸಪ್ ನಂಬರ್ ಪಡೆದುಕೊಂಡು, ಪುನಃ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ. ದಿನ ಕಳೆದಂತೆ ಬೆಂಬಿಡದೇ ಯುವತಿಯನ್ನು ಕಾಡಲು ಶುರುಮಾಡಿದ್ದ. ಕೊನೆಗೆ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ. ಬೆಂಗಳೂರಿಗೆ ಬಂದು ಜಿಮ್ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ.

ಇದನ್ನೂ ಓದಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಚಾರ ತಿಳಿಯುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ವಿಭಾಗ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

Continue Reading

bangalore

ಮಹಿಳಾ ಒಳ ಉಡುಪುಗಳನ್ನು ಕದಿಯುತ್ತಿದ್ದ ಆರೋಪಿಯ ಬಂಧನ

Published

on

ಬೆಂಗಳೂರು: ಮಹಿಳಾ ಒಳಉಡುಪುಗಳನ್ನು ಕದಿಯುತ್ತಿದ್ದ ಕೇರಳ ಮೂಲದ ಆರೋಪಿ ಅಮಲ್ (23) ಎಂಬಾತನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ.


ಆರೋಪಿ ಮಹಿಳೆಯರ ಒಳಉಡುಪುಗಳನ್ನು ಕದ್ದು, ನಂತರ ಅವುಗಳನ್ನ ಧರಿಸಿಕೊಂಡು ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.  ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಹೆಬ್ಬಗೋಡಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಯ ಮೊಬೈಲ್ ಫೋನ್ ಪರಿಶೀಲನೆ ಮಾಡಿದಾಗ, ಮಹಿಳಾ ಒಳಉಡುಪು ಧರಿಸಿಕೊಂಡಿರುವ ಹಲವು ಫೋಟೋಗಳು ಪತ್ತೆಯಾಗಿವೆ.

ಇದನ್ನೂ ಓದಿ: ಹನೂರು: ಬೆಂಕಿ ಅನಾಹುತ; ವಿದ್ಯುತ್ ತಂತಿ ತಗುಲಿ ಲಾರಿಯಲ್ಲಿದ್ದ ಮೇವು ಸುಟ್ಟು ಭಸ್ಮ

ಇನ್ನು ಆರೋಪಿಯ ಮನೆಯಲ್ಲಿ ಶೋಧ ನಡೆಸಿದ ವೇಳೆ ಮಹಿಳಾ ಒಳಉಡುಪುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದುದೂ ಪತ್ತೆಯಾಗಿದೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Continue Reading

bangalore

ಕಾನೂನು ಕಾಯುವವರೇ ಕಾಮುಕರಾದ್ರೆ..! ಹಿರಿಯ ಪೊಲೀಸ್ ಅಧಿಕಾರಿ ರಾಸಲೀಲೆ ವೀಡಿಯೋ ವೈರಲ್..!

Published

on

ಬೆಂಗಳೂರು: ರಾಜ್ಯದಲ್ಲಿ ಕಾನೂನು ಇಲಾಖೆಯೇ ತಲೆ ತಗ್ಗಿಸುವ ಪ್ರಕರಣವೊಂದು ನಡೆದಿದೆ. ಚಿನ್ನ ಸ್ಮಂಗ್ಲಿಗ್ ಕೇಸ್ ನಲ್ಲಿ ಜೈಲಿನಲ್ಲಿರುವ ನಟಿ ರನ್ಯಾ  ರಾವ್ ತಂದೆ ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್  ತನ್ನ ಕಚೇರಿಯಲ್ಲೇ ಪೊಲೀಸ್ ಡ್ರೆಸ್ ನಲ್ಲೇ ಮಹಿಳೆಯರ ಜೊತೆಗೆ ರಾಸಲೀಲೆ ನಡೆಸಿರುವುದು ಬೆಳಕಿಗೆ ಬಂದಿದೆ. ರಾಮಚಂದ್ರರಾವ್ ಮಹಿಳೆಯರನ್ನು ಅಪ್ಪಿಕೊಂಡು, ತಬ್ಬಿಕೊಂಡು, ಮುತ್ತು ನೀಡುವ ದೃಶ್ಯಗಳ ವಿಡಿಯೋ ರೀಲೀಸ್ ಆಗಿದೆ.

 

 

ಕಚೇರಿಯಲ್ಲಿ ಡ್ಯೂಟಿಯಲ್ಲಿರುವ ಸಂದರ್ಭವೇ ಇವರು ದೂರು ನೀಡಲು ಬರುವ ಬೇರೆ ಬೇರೆ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುವ ದೃಶ್ಯ ಸೀಕ್ರೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಪೊಲೀಸ್ ಇಲಾಖೆಯ ಶಿಸ್ತು, ಘನತೆ, ಗೌರವಕ್ಕೆ ಧಕ್ಕೆ ತರುವ ವಿಷಯ. ಮಹಿಳೆಯರನ್ನು ಬಲವಂತ ಮಾಡಿಲ್ಲದೇ ಇದ್ದರೂ, ಕಚೇರಿಯ ವೇಳೆಯಲ್ಲಿ ಪೊಲೀಸ್ ಡ್ರೆಸ್ ಧರಿಸಿ ರಾಮಚಂದ್ರ ರಾವ್ ರಾಸಲೀಲೆ ನಡೆಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ರಾಮಚಂದ್ರರಾವ್ ಸದ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಆಗಿದ್ದಾರೆ.

 

ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದು ಹೇಳಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page