Connect with us

Sports

ಟೀಮ್ ಇಂಡಿಯಾದಿಂದ ಬ್ಯಾನ್ ಆಗ್ತಾರಾ ಮೊಹಮ್ಮದ್ ಶಮಿ!?

Published

on

ಮಂಗಳೂರು/ಮುಂಬೈ : ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಮೊಹಮ್ಮದ್ ಶಮಿ ಎಂದರೆ ಸಾಕು ಎದುರಾಳಿ ಬ್ಯಾಟ್ಸ್ ಮ್ಯಾನ್ ನಡುಗಿಬಿಡುತ್ತಾನೆ. ಅವರು ಬೌಲಿಂಗ್ ನಲ್ಲಿ ಮಾಡುವ ಮೋಡಿ ಎಲ್ಲರಿಗೂ ಚಿರಪರಿಚಿತ. ಆದರೆ 2023ರ ಏಕದಿನ ವಿಶ್ವಕಪ್ ಬಳಿಕ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿ, ಇತ್ತೀಚೆಗೆ ಗಾ*ಯದಿಂದ ಚೇತರಿಸಿಕೊಂಡು ರಣಜಿ ಟೂರ್ನಿಯ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿ, ಮೊದಲ ಪಂದ್ಯದಲ್ಲೇ 7 ವಿಕೆಟ್ ಪಡೆದುಬಂಗಾಳ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಈಗ ಶಮಿ ವಿರುದ್ದ ಗಂಭೀ*ರ ಆರೋಪ ಕೇಳಿಬಂದಿದೆ. ಅದುವೇ ವಯಸ್ಸು ಮರೆಮಾಚಿದ ಆರೋಪ.

ಹೌದು, ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ  ಕೃಷ್ಣ ಮೋಹನ್ ಎಂಬವರು,  ಮೊಹಮ್ಮದ್ ಶಮಿ ತಮ್ಮ  ವಯಸ್ಸು ಮರೆಮಾಚಿದ್ದಾರೆ ಎಂದು ಗಂಭೀ*ರ ಆರೋಪ ಮಾಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಮೊಹಮ್ಮದ್ ಶಮಿ ಅವರ ಡ್ರೈವಿಂಗ್ ಲೈಸನ್ಸ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಈ ಮನವಿಯನ್ನು ಬಿಸಿಸಿಐ ಪುರಸ್ಕರಿಸಿದರೆ, ಶಮಿ ತನಿಖೆಗೆ ಒಳಪಡಲಿದ್ದಾರೆ. ಒಂದು ವೇಳೆ  ಈ ಆರೋಪ ನಿಜವಾದರೆ ಟೀಮ್ ಇಂಡಿಯಾದಿಂದ ಬ್ಯಾನ್ ಆಗುವ ಸಾಧ್ಯತೆ ಕೂಡ ಇದೆ.

ಬಿಸಿಸಿಐ ನಿಯಮ ಏನು ?

ಬಿಸಿಸಿಐ ನಿಯಮದ ಪ್ರಕಾರ, ವಯಸ್ಸನ್ನು ಮರೆಮಾಚುವುದು ಗಂಭೀರ ಅಪರಾಧ. ಈ ಹಿಂದೆಯೂ ಕೂಡ ಸಾಮಾನ್ಯವಾಗಿ ಅಂಡರ್-19 ತಂಡದಲ್ಲಿ ಸ್ಥಾನ ಪಡೆಯಲು ಆಟಗಾರರು ತಮ್ಮ ವಯಸ್ಸನ್ನು ಒಂದು ಅಥವಾ ಎರಡು ವರ್ಷ ಕಡಿಮೆ ಎಂದು ಘೋಷಿಸುತ್ತಾರೆ. ವಯಸ್ಸು ಬದಲಿಸಿ ಈ ಹಿಂದೆಯೂ ಕೂಡ ಹಲವಾರು ಆಟಗಾರರು ಸಿಕ್ಕಿಬಿದ್ದಿದ್ದರು. ಅಂತಹ ಆಟಗಾರರನ್ನು ಬಿಸಿಸಿಐ ಅಮಾನತುಗೊಳಿಸಿತ್ತು.

LATEST NEWS

ವಿಶ್ವಕಪ್ ಗೆದ್ದ ರಿಚಾ ಘೋಷ್‌ಗೆ ಪೊಲೀಸ್ ಹುದ್ದೆ; ನೇಮಕಾತಿ ಪತ್ರ ಹಸ್ತಾಂತರಿಸಿದ ಸಿಎಂ ಮಮತಾ ಬ್ಯಾನರ್ಜಿ

Published

on

ಕೋಲ್ಕತಾ: ಮಹಿಳಾ ವಿಶ್ವಕಪ್‌ನಲ್ಲಿ ವಿಕೆಟ್ ಕೀಪಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಅದ್ಬುತ ಪ್ರದರ್ಶನ ನೀಡಿರುವ ರಿಚಾ ಘೋಷ್‌ಗೆ ಅವರ ರಾಜ್ಯ ಪಶ್ಚಿಮ ಬಂಗಾಳದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಹುದ್ದೆ ನೀಡಿ ಗೌರವಿಸಲಾಗಿದೆ.


ಶನಿವಾರ (ನವೆಂಬರ್ 8) ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಿಚಾ ಘೋಷ್‌ರಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದರು.ಇದೇ ವೇಳೆ ರಿಚಾಗೆ ಬಾಂಗ್ಲಾ ಭೂಷಣ್ ಪ್ರಶಸ್ತಿ ನೀಡಲಾಯಿತು.

ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್‌ನಲ್ಲಿ 34 ರನ್ ಬಾರಿಸಿದ್ದಕ್ಕಾಗಿ ಪ್ರತೀ ರನ್ನಿಗೆ ತಲಾ 1 ಲಕ್ಷ ರೂ.ನಂತೆ ಒಟ್ಟಾರೆ 34 ಲಕ್ಷ ರೂ. ನಗದು ಪುರಸ್ಕಾರ ನೀಡಿತು. ಹೆಚ್ಚುವರಿಯಾಗಿ, ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ಪರವಾಗಿ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದರು.

ಇದನ್ನೂ ಓದಿ: IND vs AUS: ಟಿ20I ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ಅಭಿಷೇಕ್ ಶರ್ಮಾ

ಭಾರತದ ವಿಶ್ವಕಪ್ ಅಭಿಯಾನದುದ್ದಕ್ಕೂ ರಿಚಾ ಘೋಷ್ ಅತ್ಯುತ್ತಮ ಪ್ರದರ್ಶನ ನೀಡಿದ್ದು ಆಡಿರುವ ಎಂಟು ಪಂದ್ಯಗಳಲ್ಲಿ 39.16 ಸರಾಸರಿ ಮತ್ತು 133.52 ಪ್ರೈಕ್ ರೇಟ್‌ನಲ್ಲಿ 235 ರನ್ ಗಳಿಸಿದರು. ದಕ್ಷಿಣ ಆಫ್ರಿಕಾ ವಿರುದ್ಧ 94 ರನ್ ಗಳಿಸುವ ಮೂಲಕ ವೈಜಾಜ್ ಮೈದಾನದಲ್ಲಿದ್ದ ಪ್ರೇಕ್ಷಕರನ್ನು ರಂಜಿಸಿದರು. ನವಿ ಮುಂಬೈನಲ್ಲಿ ನಡೆದ ಪೈನಲ್ ಪಂದ್ಯದಲ್ಲಿಯೂ ನಿರ್ಣಾಯಕ 34 ರನ್ ಬಾರಿಸಿದ್ದರು.

Continue Reading

LATEST NEWS

IND vs AUS: ಟಿ20I ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ಅಭಿಷೇಕ್ ಶರ್ಮಾ

Published

on

ಬ್ರಿಸ್ಬೇನ್: ಭಾರತ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.


ಭಾರತ-ಆಸ್ಟ್ರೇಲಿಯಾ ನಡುವಿನ ಕೊನೆಯ ಟಿ20 ಪಂದ್ಯ ಬ್ರಿಸ್ಬೇನ್‌ನ ಗಾಬ್ಬಾದಲ್ಲಿ ಶನಿವಾರ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್ ಸೋತರು ಭಾರತ ತಂಡವು ಉತ್ತಮ ಆರಂಭ ಪಡೆದುಕೊಂಡಿದೆ. ಅದರಲ್ಲಿಯೂ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಭಾರತದ ಆರಂಭಿಕ ಆಟಗಾರರಾದ ಶುಭಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು. ಸಿಡಿಲು ಮಿಂಚಿನ ಕಾರಣದಿಂದ ಪಂದ್ಯದ ಸ್ಥಗಿತವಾಗುವ ವೇಳೆ ಭಾರತ ತಂಡವು 4.5 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 52 ರನ್ ಮಾಡಿದೆ. ಉಪನಾಯಕ ಗಿಲ್ 16 ಎಸೆತಗಳಲ್ಲಿ ಆರು ಬೌಂಡರಿ ಸಹಾಯದಿಂದ 29 ರನ್ ಮಾಡಿದರೆ, ಅಭಿಷೇಕ್ 13 ಎಸೆತಗಳಲ್ಲಿ 23 ರನ್ ಚಚ್ಚಿದ್ದಾರೆ.

ಇದನ್ನೂ ಓದಿ: ಧವನ್, ರೈನಾಗೆ ಇಡಿ ಶಾಕ್; ಕೋಟಿ ಮೌಲ್ಯದ ಆಸ್ತಿ ಜಪ್ತಿ

ಇದೇ ವೇಳೆ ಅಭಿಷೇಕ್ ಶರ್ಮಾ ದಾಖಲೆಯೊಂದನ್ನ ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 1000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಅಭಿಷೇಕ್ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟಿಮ್ ಡೇವಿಡ್ ಅವರನ್ನು ಹಿಂದಿಕ್ಕಿದ್ದಾರೆ. ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ ಸಾವಿರ ರನ್ ಗಡಿ ದಾಟಿದವರ ಪಟ್ಟಿಯಲ್ಲಿ ಸೂರ್ಯಕುಮಾರ್ ಯಾದವ್‌ರನ್ನು ಮೀರಿಸಿ ಮೊದಲ ಸ್ಥಾನಕ್ಕೇರಿದರು.

ಅಭಿಷೇಕ್ ಶರ್ಮಾ 528 ಎಸೆತಗಳಲ್ಲಿ 1000 ಅಂತರರಾಷ್ಟ್ರೀಯ ಟಿ20 ರನ್ ಪೂರೈಸಿದರು. ಇದೀಗ ಈ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಾರಿರುವ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟಿಮ್ ಡೇವಿಡ್ 569 ಎಸೆತಗಳಲ್ಲಿ 1000 ರನ್ ಪೂರೈಸಿದ್ದರು. ಮೂರನೇ ಸ್ಥಾನದಲ್ಲಿರುವ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ 573 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.

Continue Reading

LATEST NEWS

ಧವನ್, ರೈನಾಗೆ ಇಡಿ ಶಾಕ್; ಕೋಟಿ ಮೌಲ್ಯದ ಆಸ್ತಿ ಜಪ್ತಿ

Published

on

ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ ಹಾಗೂ ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದೆ. ಬರೋಬ್ಬರಿ 11.14 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಂಡಿದೆ.

ಹೌದು, ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳ ಕಾರ್ಯಾ ಚರಣೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಹಾಗೂ ಶಿಖರ್ ಧವನ್ ಅವರಿಗೆ ಸೇರಿದ 11.14 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇ.ಡಿ.) ಜಪ್ತಿ ಮಾಡಿಕೊಂಡಿದೆ ಎಂದು ವರದಿಯಾಗಿದೆ.

ಶಿಖರ್ ಧವನ್ ಹಾಗೂ ಸುರೇಶ್ ರೈನಾ ಇಬ್ಬರೂ ವಿದೇಶಿ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡು ಅಕ್ರಮ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ 1xBet ಅನ್ನು ಪ್ರಚಾರ ಮಾಡಿದ್ದಾರೆ ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ವಿಶ್ವಕಪ್ ಟೂರ್ನಿಯಲ್ಲಿ ಭಾರತದ 2ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿದ್ದರೂ ಪ್ರತೀಕಾ ರಾವಲ್‌ಗೆ ಮೆಡಲ್ ಕೈತಪ್ಪಿದ್ದೇಕೆ?

ಹಾಗೆಯೇ ಇವರಿಬ್ಬರು 1xBet ಮತ್ತು ಅದರ ಅಂಗಸಂಸ್ಥೆಗಳನ್ನು ಉತ್ತೇಜಿಸಲು ವಿದೇಶಿ ಸಂಸ್ಥೆಗಳೊಂದಿಗೆ ಗೊತ್ತಿದ್ದೂ ಜಾಹೀರಾತು ಒಪ್ಪಂದಗಳನ್ನು ಮಾಡಿಕೊಂಡಿರುವುದು ಖಚಿತವಾಗಿದೆ. ಹೀಗಾಗಿ ಇವರಿಬ್ಬರ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page