Connect with us

LATEST NEWS

ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾ*ಚಾರ; ಆರೋಪಿಗಳ ಬಂಧನಕ್ಕೆ 5 ತಂಡ ರಚನೆ : ಎಸಿಪಿ ರಮಣ್ ಗುಪ್ತಾ

Published

on

ಬೆಂಗಳೂರು : ಕೋಲ್ಕತ್ತಾ ಪ್ರಕರಣ ಮಾಸುವ ಮುನ್ನವೇ ಕರ್ನಾಟಕದಲ್ಲೂ ಹೇಯ ಕೃ*ತ್ಯವೊಂದು ವರದಿಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾ*ರ ಎಸಗಲಾಗಿದೆ.

ಶನಿವಾರ(ಆ.17) ರಾತ್ರಿ ಈ ಹೀನ ಕೃತ್ಯ ನಡೆದಿದ್ದು, ಪಬ್ ನಲ್ಲಿ ಪಾರ್ಟಿ ಮುಗಿಸಿ ತೆರಳುತ್ತಿದ್ದ ವೇಳೆ ಯುವತಿ ಮೇಲೆ ಅತ್ಯಾಚಾರವಾಗಿದೆ ಎಂದು ವರದಿಯಾಗಿದೆ. ಹೆಚ್ ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಅಪಘಾತ-ಬೈಕ್-ಅತ್ಯಾಚಾರ :

ಬೆಂಗಳೂರಿನ ಕೋರಮಂಗಲದಲ್ಲಿ ಸ್ನೇಹಿತರ ಜೊತೆ ಯುವತಿ ಗೆಟ್‌ ಟುಗೆದರ್ ಪಾರ್ಟಿಯಲ್ಲಿ ಭಾಗಿಯಾಗಿದ್ದಳು. ರಾತ್ರಿ ಸಮಯದಲ್ಲಿ ಪಾರ್ಟಿ ಮುಗಿಸಿ ಸ್ನೇಹಿತರೊಂದಿಗೆ ಕಾರಿನಲ್ಲಿ ಮನೆಗೆ ಹೊರಟಿದ್ದಳು. ಆದರೆ ರಾತ್ರಿ 1:30ಕ್ಕೆ ಮನೆಗೆ ಹೊರಟಿದ್ದ ವೇಳೆ ಆಕೆ ಸ್ನೇಹಿತರೊಂದಿಗೆ ಬರುತ್ತಿದ್ದ ಕಾರಿಗೆ ಆಟೋ ಟಚ್ ಆಗಿದ್ದು, ಸ್ಥಳದಲ್ಲಿ ಸ್ನೇಹಿತರು ಹಾಗೂ ಆಟೋ ಚಾಲಕನ ನಡುವೆ ಗಲಾಟೆಯಾಗಿದೆ.

ಈ ವೇಳೆ ಆತಂಕಗೊಂಡ ಯುವತಿ ಸ್ಥಳದಿಂದ ಅನಾಮಿಕನೋರ್ವನ ಬೈಕ್ ನಲ್ಲಿ ಡ್ರಾಪ್ ಪಡೆದುಕೊಂಡಿದ್ದಾಳೆ. ಇದೇ ಸಮಯವನ್ನು ಬಳಸಿಕೊಂಡ ಕಾಮುಕ ಆಕೆಯನ್ನು ಬೈಕ್​ನಲ್ಲಿ ನಿರ್ಜನ ಪ್ರದೇಶವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾ*ಚಾರ ಎಸಗಿದ್ದಾನೆ ಎನ್ನಲಾಗಿದೆ.

ಈ ವೇಳೆ ಯುವತಿ ತನ್ನ ಮೊಬೈಲ್ ನಲ್ಲಿ ಎಮರ್ಜೆನ್ಸಿ ನಂಬರ್‌ಗಳಾಗಿ ತಂದೆ, ಸ್ನೇಹಿತೆ ನಂಬರ್ ಸೇವ್ ಮಾಡಿಕೊಂಡಿದ್ದಾಳೆ. ಮೊಬೈಲ್ ಸ್ವಿಚ್ ಆನ್ ಆದಾಗ ಲೋಕೇಷನ್ ಸಮೇತ ಕರೆ ಹೋಗಿದೆ. ಕೂಡಲೇ ಯುವತಿ ತಂದೆ, ಸ್ನೇಹಿತರು ಸ್ಥಳಕ್ಕೆ ಬಂದಾಗ ಅರೆನಗ್ನವಾಗಿ ಶೋಚನೀಯ ಸ್ಥಿತಿಯಲ್ಲಿ ಸಂತ್ರಸ್ತೆ ಪತ್ತೆಯಾಗಿದ್ದಾಳೆ.ಸಂತ್ರಸ್ತ ವಿದ್ಯಾರ್ಥಿನಿ ಖಾಸಗಿ ಕಾಲೇಜಿನಲ್ಲಿ ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿ ಅಭ್ಯಾಸ ಮಾಡುತ್ತಿದ್ದಳು. ಆಸ್ಪತ್ರೆಯಲ್ಲಿ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆ ಸುತ್ತ ತೀವ್ರ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಇದನ್ನೂ ಓದಿ : 2 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಚರಂಡಿಗೆ ಎಸೆದ ಯುವಕ

ಎಸಿಪಿ ಏನಂದ್ರು?

ಘಟನೆ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಎಸಿಪಿ ರಮಣ್ ಗುಪ್ತಾ, ಕಳೆದ ಮಧ್ಯರಾತ್ರಿ 1ರಿಂದ 1.30ರ ಮಧ್ಯ ಸಮಯದಲ್ಲಿ ಗಿ ಪೈಶಾಚಿಕ ಕೃ*ತ್ಯ ಎಸಗಲಾಗಿದೆ. ನಾವು ಅತ್ಯಾಚಾ*ರ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದರು.

ಅನ್ಯರಾಜ್ಯದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ಸ್ನೇಹಿತರ ಜೊತೆ ಕೋರಮಂಗಲದ ಪಬ್ ನಲ್ಲಿ ಪಾರ್ಟಿ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದರು. ಪಾರ್ಟಿ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದ ವಿದ್ಯಾರ್ಥಿನಿ ನಂತರ ಆಟೋದಲ್ಲಿ ಹತ್ತಿ ಹೋಗಿದ್ದು , ಆಟೋ ಚಾಲಕನೇ ಅತ್ಯಾಚಾರ ನಡೆಸಿರುವ ಶಂಕೆಯಿದ್ದು ಸ್ಥಳಕ್ಕೆ ಭೇಟಿ ನೀಡಿ ಯುವತಿಯ ಮನೆಯವರ ಜೊತೆ ಮಾತನಾಡಿ 5 ತಂಡಗಳನ್ನು ರಚಿಸಿ ತನಿಖೆ ಮಾಡುತ್ತಿದ್ದೇವೆ. ಅತಿ ಶೀಘ್ರವೇ ಆರೋಪಿಯನ್ನು ಬಂಧಿಸುವ ವಿಶ್ವಾಸವಿದೆ ಎಂದಿದ್ದಾರೆ.

LATEST NEWS

ಚರಂಡಿಗೆ ಬಿ*ದ್ದು ಬಾಲಕ ಸಾ*ವು

Published

on

ಮಂಗಳೂರು/ಬೀದರ್ : ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕ  ಚರಂಡಿಗೆ ಬಿ*ದ್ದು ಸಾ*ವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಅವಿನಾಶ್ ಮೃ*ತ ಬಾಲಕ. ಮನೆಯ ಮುಂದೆ ಆಡುತ್ತಿದ್ದ ಬಾಲಕ ಕಾಣೆಯಾಗಿದ್ದ. ಹೀಗಾಗಿ  ಕುಟುಂಬಸ್ಥರು ಹುಡುಕಾಡಿದ್ದು, ಬಾಲಕನ ಸುಳಿವು ಸಿಕ್ಕಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾ*ವನ್ನಪ್ಪಿರುವುದು ಗೊತ್ತಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಬಗದಲ್ ಪೊಲೀಸ್ ವ್ಯಾಪ್ತಿಯಲ್ಲಿ ಈ ದುರಂ*ತ ಸಂಭವಿಸಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Continue Reading

hasana

ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

Published

on

ಹಾಸನ: ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣದೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ.


ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕ (29) ಎಂಬುವವರು ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದಕ್ಕೆ ಆಗಮಿಸಿದ್ದರು. ಫೆಬ್ರವರಿ 12 ರಂದು ರಾತ್ರಿ 7-30 ರ ಸುಮಾರಿಗೆ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕ ತಮಗೆ ಯಾರೋ ಪರಿಚಯದವರು ಸಿಕ್ಕಿರುವುದಾಗಿ ತಿಳಿಸಿದ್ದರು. ಆ ಮಾತು ಮುಗಿಯುತ್ತಿದ್ದಂತೆಯೇ ಫೋನ್‌ ಸ್ವಿಚ್‌ ಆಫ್‌ ಆಗಿದೆ.

ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರೂ ಸಹ ಸ್ಪಂದಿಸಿದ ಅರೆಹಳ್ಳಿ ಮತ್ತು ಬೇಲೂರು ಪೊಲೀಸರ ವಿರುದ್ಧ ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಮಹಿಳೆಯ ಬ್ಯಾಗ್, ಚಪ್ಪಲಿ ಹಾಗೂ ಒಳ ಉಡುಪುಗಳು ಪತ್ತೆಯಾಗಿರುವುದು ತೀವ್ರ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಮಹಿಳೆಯು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಚಿನ್ನಾಭರಣಗಳನ್ನು ಧರಿಸಿದ್ದರು ಎಂದು ಹೇಳಲಾಗುತ್ತಿದೆ. ಒಡವೆಗಾಗಿ ದುಷ್ಕರ್ಮಿಗಳು ಮಹಿಳೆಯನ್ನ ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಪೊಲೀಸರು ಈಗ ತನಿಖೆ ಚುರುಕುಗೊಳಿಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಜಯ ವಿಜಯ ಕಂಬಳಕ್ಕೆ ಚಾಲನೆ

Published

on

ಮಂಗಳೂರು :  ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 16 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು(ಫೆ.14) ಬೆಳಗ್ಗೆ ಚಾಲನೆ ದೊರೆತಿದೆ.

ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿ ಮೆನ್ನು ತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥಈ ಕಂಬಳ ನಡೆಯುತ್ತಿದೆ. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್‌ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ನುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಕಟೀಲು ಕ್ಷೇತ್ರದ ಅನಂತಪದ್ಮನಾಭ ಆಸ್ರಣ್ಣ, ಬಿಜೆಪಿ ನಾಯಕ ಮೋನಪ್ಪ ಭಂಡಾರಿ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌, ಪ್ರವೀಣ್‌ಚಂದ್ರ ಆಳ್ವ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page