Connect with us

ನಾಳೆಯಿಂದಲೇ ಮಂಗಳೂರಿನ ಅತೀ ಸ್ಮಾರ್ಟ್ ರಸ್ತೆಯ ಕಾಮಗಾರಿ ಪ್ರಾರಂಭ: ಶಾಸಕ ಕಾಮತ್

Published

on

ನಾಳೆಯಿಂದಲೇ ಮಂಗಳೂರಿನ ಅತೀ ಸ್ಮಾರ್ಟ್ ರಸ್ತೆಯ ಕಾಮಗಾರಿ ಪ್ರಾರಂಭ: ಶಾಸಕ ಕಾಮತ್

ಮಂಗಳೂರು: ಸ್ಮಾರ್ಟ್ ಸಿಟಿ ಅಂಗವಾಗಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಮಂಗಳೂರಿನ ಕದ್ರಿ ಪಾರ್ಕ್ ರಸ್ತೆ ಬಹಳ ವಿನೂತನ ರೀತಿಯಲ್ಲಿ ನಿರ್ಮಾಣಗೊಳ್ಳಲಿದೆ.

12 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ರಸ್ತೆ ಸರಿ ಸುಮಾರು 800 ಮೀಟರ್ ಉದ್ದ ಇರಲಿದ್ದು, ರಸ್ತೆಯಲ್ಲಿ ಇದ್ದಂತಹ ಡ್ರೈನೇಜ್ ಪೈಪ್ ಗಳು,

ನೀರಿನ ಪೈಪ್ ಗಳು, ಮೇಲ್ಭಾಗದಲ್ಲಿರುವ ವಿದ್ಯುತ್ ತಂತಿಗಳು ಇವೆಲ್ಲವನ್ನು ರಸ್ತೆಯ ಒಂದೇ ಕಡೆಯಲ್ಲಿ  ಅಳವಡಿಸಿ ಅಂಡರ್ ಗ್ರೌಂಡ್ ವ್ಯವಸ್ಥೆ ಕಲ್ಪಿಸಲಾಗುವುದು.

ಈ ರಸ್ತೆಯನ್ನು ಈಸ್ಟ್, ವೆಸ್ಟ್ ಮತ್ತು ಮಿಡಲ್ ಜ್ಹೋನ್ ಎಂದು ಮೂರು ವಿಭಾಗ ಮಾಡಲಾಗಿದೆ.

ಈಸ್ಟ್ ಜ್ಹೋನ್ ಅಂದ್ರೆ ಕದ್ರಿ ಪೊಲೀಸ್ ಸ್ಟೇಶನ್ ನಿಂದ ಆಕಾಶವಾಣಿ ತನಕ ಹೋಗಿ ವಾಹನಗಳು ಯೂ ಟರ್ನ್ ಹಾಕಿ ಬರಬೇಕು.

ಅದೇ ರೀತಿ ವೆಸ್ಟ್ ಜ್ಹೋನ್  ಪದವು ಹೈಸ್ಕೂಲ್ ಪ್ರಾರಂಭದಿಂದ ಗೋರಕ್ಷನಾಥ ಹಾಲ್ ತನಕ ಯೂ ಟರ್ನ್ ಹಾಕಿ ವಾಹನಗಳು ಸಾಗಬೇಕು.

ಅದರ ಮಿಡಲ್ ಜ್ಹೋನ್ ನಲ್ಲಿ ಯಾವುದೇ ವಾಹನ ಚಲಿಸುವಂತಿಲ್ಲ.

ಅಲ್ಲಿ ಮಕ್ಕಳಿಗೆ ಆಟ ಆಡುವ ವ್ಯವಸ್ಥೆ ಸೇರಿದಂತೆ, ವಾಕಿಂಗ್ ಟ್ರ್ಯಾಕ್, ಕಾರಂಜಿಗಳು ಹೀಗೆ ಎಲ್ಲರಿಗೂ  ಸಮಯವನ್ನು ಕಳೆಯಲು ವಿಶೇಷ ರೀತಿಯ ಅವಕಾಶ ಮಾಡಿಕೊಡಲಾಗುವುದು.

ಕೆಲವರ ಸಲಹೆಯಂತೆ ಹಲವು ಸೌಲಭ್ಯದೊಂದಿಗೆ ಸೈಕಲ್ ಟ್ರ್ಯಾಕ್ ಕೂಡ ನಿರ್ಮಾಣ ಮಾಡಬೇಕೆಂದು ಶಾಸಕ ಕಾಮತ್ ಅಧಿಕಾರಿಗಳಿಗೆ ಆದೇಶ ನೀಡಿದರು.

ಈ ಪರಿಸರದಲ್ಲಿರುವ ಅಂಗಡಿ ಮುಂಗಟ್ಟು ಇರುವವರಲ್ಲಿ ಈ ಬಗ್ಗೆ ಮಾತನಾಡಿ ಅವರಿಗೂ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.

ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಇಲ್ಲಿರುವ ಯಾವುದೇ ಮರಗಳನ್ನು ಕಡಿಯದೇ ಬಹಳ ವಿನೂತನ ರೀತಿಯಲ್ಲಿ ಅಧಿಕಾರಿಗಳು ಈ ರಸ್ತೆ ನಿರ್ಮಿಸಲಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಮೇಯರ್ ದಿವಾಕರ್, ಉಪಮೇಯರ್ ವೇದಾವತಿ, ನಾಲ್ಕು ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಶರತ್ ಕುಮಾರ್,

ಕಿರಣ್ ಕುಮಾರ್, ಶ್ರೀಮತಿ ಪೂರ್ಣಿಮಾ, ಜಗದೀಶ್ ಶೆಟ್ಟಿ ಉಪಸ್ಥಿತರಿದ್ದು ಆ ಭಾಗದ ಮನಪಾ ಸದಸ್ಯರಾದ ಶಕೀಲಾ ಕಾವ, ಹತ್ತಿರದ ಮನಪಾ ಸದಸ್ಯರಾದ ಮನೋಹರ ಕದ್ರಿ,

ಸುಧೀರ್ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು. ಸ್ಮಾರ್ಟ್ ಸಿಟಿ ಎಂ.ಡಿ ನಜ್ಹೀರ್, ಅಧಿಕಾರಿಗಳಾದ ಲಿಂಗೇಗೌಡ, ರವಿಕುಮಾರ್, ಈ ರಸ್ತೆಯ ಪ್ಲಾನ್ ಮಾಡಿದ ಆರ್ಕಿಟೆಕ್ಟ್ ವೆಂಕಟೇಶ ಪೈ,

ಈ ರಸ್ತೆಯ ಕಾಂಟ್ರಾಕ್ಟರ್ ಗಳಾದ ರಾಮಾ ಕಾಮತ ಸಂಸ್ಥೆಯವರು ಉಪಸ್ಥಿತರಿದ್ದರು.

ನಾಳೆಯಿಂದಲೇ ಕಾಮಗಾರಿ ಪ್ರಾರಂಭವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಶಾಸಕ ಕಾಮತ್ ಕೇಳಿಕೊಂಡಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ

Published

on

ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ ಬಿಪಿ ಅಥವಾ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೃತರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಬೇರ್ಯ ನಿವಾಸಿಯಾಗಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿದ್ದರು. ನಂತರ ಅಸೌಖ್ಯ ಕಾಣಿಸಿಕೊಂಡಿತ್ತು. ವಿದ್ಯಾರ್ಥಿಯೊಬ್ಬರ ಸಹಾಯದಿಂದ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಬಂದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಜು ಅವರು ಇವರು ಕಳೆದ 10 ವರ್ಷಗಳ ಕಾಲ ಕೆ.ಆರ್. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಗೊಂಡು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

Continue Reading

LATEST NEWS

ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು

Published

on

ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ.

ಮಗನೊಂದಿಗೆ ವಾಸವಿದ್ದ ಮೃತ ಲೀಲಾವತಿ ಅವರು ಜಾನುವಾರುಗಳನ್ನು ಓಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಇವರ ಮಗ ಹರೀಶ್ ಲಾರಿ ಚಾಲಕರಾಗಿದ್ದು, ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎಂದು ತಿಳಿದುಬಂದಿದೆ. ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

Continue Reading

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page