Connect with us

LATEST NEWS

WPL ಮೆಗಾ ಹರಾಜು: ಆರ್‌ಸಿಬಿ ಸೇರಿಕೊಂಡಿರುವ 12 ಆಟಗಾರ್ತಿಯರು ಇವರೇ?

Published

on

ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ 2026ರ ಮೆಗಾ ಹರಾಜಿನಲ್ಲಿ 2024ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 16 ಸದಸ್ಯರ ಬಲಿಷ್ಠ ತಂಡ ಕಟ್ಟುವಲ್ಲಿ ಯಶಸ್ವಿಯಾಗಿದೆ.


ನಿನ್ನೆ ನವದೆಹಲಿಯಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2026ರ ಮೆಗಾಹರಾಜಿನಲ್ಲಿ ಒಟ್ಟು 276 ಆಟಗಾರ್ತಿಯರು ಹರಾಜಿನಲ್ಲಿ ಭಾಗವಹಿಸಿದ್ದರು. ಇದರಲ್ಲಿ ಖಾಲಿ ಇದ್ದ 73 ಸ್ಥಾನಗಳಿಗೆ 67 ಆಟಗಾರ್ತಿಯರು ಭರ್ತಿಯಾಗಿದ್ದಾರೆ. ಅದರಲ್ಲೂ 2024ರ ಚಾಂಪಿಯನ್ ಆರ್‌ಸಿಬಿ ತಂಡದ ಮೇಲೆ ಎಲ್ಲರ ದೃಷ್ಟಿ ನೆಟ್ಟಿತ್ತು. ಕಾರಣ ಆರ್‌ಸಿಬಿ ತಂಡ ಹರಾಜಿಗೂ ಮೊದಲೆ ಕೇವಲ ನಾಲ್ವರನ್ನು ತಂಡದಲ್ಲಿ ಉಳಿಸಿಕೊಂಡು ಉಳಿದವರನ್ನು ತಂಡದಿಂದ ಕೈಬಿಟ್ಟಿತ್ತು.

ಕೈಬಿಟ್ಟ ಆಟಗಾರ್ತಿಯರಲ್ಲಿ ಹಲವರು ಸ್ಟಾರ್ ಆಟಗಾರ್ತಿಯರೇ ಸೇರಿದ್ದರು. ಹೀಗಾಗಿ ಹರಾಜಿನಲ್ಲಿ ಆರ್‌ಅಸಿಬಿ ಯಾವ ಆಟಗಾರ್ತಿಯರ ಹಿಂದೆ ಬೀಳಬಹುದು ಎಂಬ ನಿರೀಕ್ಷೆ ಇತ್ತು. ಅದರಂತೆ 6.15 ಕೋಟಿ ರೂಪಾಯಿ ಬಜೆಟ್‌ನೊಂದಿಗೆ ಹರಾಜಿಗೆ ಬಂದಿದ್ದ ಆರ್‌ಸಿಬಿ ಒಟ್ಟು 12 ಆಟಗಾರ್ತಿಯರನ್ನು ಖರೀದಿಸಿದೆ.

ಹರಾಜಿಗೆ ಮುನ್ನ ಆರ್‌ಸಿಬಿ ತಂಡ ಉಳಿಸಿಕೊಂಡಿದ್ದ ಆಟಗಾರ್ತಿಯರು

  • ಸ್ಮೃತಿ ಮಂದಾನ (ಬ್ಯಾಟರ್, 3.5 ಕೋಟಿ)
  • ರಿಚಾ ಘೋಷ್ (ವಿಕೆಟ್ ಕೀಪರ್, 2.75 ಕೋಟಿ)
  • ಎಲ್ಲಿಸ್ ಪೆರ್ರಿ (ಆಲ್‌ರೌಂಡರ್, 2 ಕೋಟಿ)
  • ಶ್ರೇಯಂಕಾ ಪಾಟೀಲ್ (ಬೌಲರ್, 60 ಲಕ್ಷ)

ಹರಾಜಿನಲ್ಲಿ ಖರೀದಿಸಿದ ಆಟಗಾರ್ತಿಯರು

  • ಜಾರ್ಜಿಯಾ ವೋಲ್ (ಬ್ಯಾಟರ್, 60 ಲಕ್ಷ)
  • ನಾಡಿನ್ ಡಿ ಕ್ಲಾರ್ಕ್ (ಆಲ್‌ರೌಂಡರ್, 65 ಲಕ್ಷ)
  • ರಾಧಾ ಯಾದವ್ (ಬೌಲರ್, 65 ಲಕ್ಷ)
  • ಲಾರೆನ್ ಬೆಲ್ (ಬೌಲರ್, 90 ಲಕ್ಷ)
  • ಲಿನ್ಸಿ ಸ್ಮಿತ್ (ಬೌಲರ್, 30 ಲಕ್ಷ)
  • ಪ್ರೇಮಾ ರಾವತ್ (ಆರ್‌ಟಿಎಮ್ 20 ಲಕ್ಷ)
  • ಅರುಂಧತಿ ರೆಡ್ಡಿ (ಆಲ್‌ರೌಂಡರ್, 75 ಲಕ್ಷ)
  • ಪೂಜಾ ವಸ್ತ್ರಕರ್ (ಆಲ್‌ರೌಂಡರ್, 85 ಲಕ್ಷ)
  • ಗ್ರೇಸ್ ಹ್ಯಾರಿಸ್ (ಬ್ಯಾಟರ್,  75 ಲಕ್ಷ)
  • ಗೌತಮಿ ನಾಯಕ್ (ವಿಕೆಟ್ ಕೀಪರ್, 10 ಲಕ್ಷ)
  • ಪ್ರತ್ಯಷಾ ಕುಮಾರ್ (ಬೌಲರ್, 10 ಲಕ್ಷ)
  • ಡಿ. ಹೇಮಲತಾ (ಬ್ಯಾಟರ್, 30 ಲಕ್ಷ)

DAKSHINA KANNADA

ಕಲಾಯಿ ಅಶ್ರಫ್ ಹತ್ಯೆಗೆ ರಿವೇಂಜ್ ಪೋಸ್ಟ್..! 16 ಇನ್ಸ್ಟಾಗ್ರಾಂ ಖಾತೆ ವಿರುದ್ಧ FIR

Published

on

ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶವಾದ ಕರಾವಳಿಯಲ್ಲಿ ಧರ್ಮ ದಂಗಲ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದೆ ಎನ್ನುವಷ್ಟರಲ್ಲಿ ಮತ್ತೆ ಹತ್ಯೆಗೆ ಪ್ರಚೋದನೆ ನೀಡುವ ಉದ್ದೇಶದಲ್ಲಿ ಹಾಕಿರುವಂತಹ ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಭಯ ಹುಟ್ಟಿಸಿದೆ.

2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲ್​​​ಗೆ ಎಚ್ಚರಿಕೆ ನೀಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ರವಾನೆಯಾಗುತ್ತಿದೆ.

Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್​​ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್​​ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ‌ ಎಚ್ಚರಿಕೆ ನೀಡಲಾಗಿದೆ. ಭರತ್ ಕುಮ್ಡೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ಸ್ಟಾಗ್ರಾಮ್​​ ಪೋಸ್ಟ್​ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್​​ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್​​ ಖಾತೆಗಳ ವಿರುದ್ಧ ಎಫ್​ಐಆರ್​ ಮಾಡಿದೆ. ಜೊತೆಗೆ ಆಯಕಟ್ಡಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್​​ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ.

ಈ ಹಿಂದೆಯೂ ಭರತ್ ಕುಮ್ಡೇಲ್​​ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಬ್ಯಾರಿ ರಾಯಲ್ ನವಾಬ್ ,  ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್‌ ಕುಮ್ಡೇಲ್​​​ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ ಎಂದು ಪೋಸ್ಟ್​​ ಮಾಡಲಾಗಿತ್ತು. ಇದೀಗ ಇಂತಹ ಪ್ರಚೋದನಾಕಾರಿ ಪೋಸ್ಟ್ ಹಾಕುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Continue Reading

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

LATEST NEWS

ಪತಿಯನ್ನು ನಂಬಿ ಪ್ರಾ*ಣ ಕಳೆದುಕೊಂಡ ಕಬಡ್ಡಿ ಆಟಗಾರ್ತಿ

Published

on

ಮಂಗಳೂರು/ನಾಗ್ಪುರ : ಪ್ರತಿಭಾವಂತ ಕಬಡ್ಡಿ ಆಟಗಾರ್ತಿಯೊಬ್ಬರು ಮನೆಯಲ್ಲೇ ಕೀಟನಾಶಕ ಸೇವಿಸಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಕಿರಣ್ ಸೂರಜ್ ದಾಧೆ (29) ಆ*ತ್ಮಹ*ತ್ಯೆಗೆ ಶರಣಾದ ಆಟಗಾರ್ತಿ.

ಕಿರಣ್ ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಬಿ.ಎ ಪದವೀಧರೆಯಾದ ಕಿರಣ್, ಸೇನೆ, ಪೊಲೀಸ್, ಹೋಮ್ ಗಾರ್ಡ್ ಮತ್ತು ಇತರ ಸರ್ಕಾರಿ ಉದ್ಯೋಗಗಳಿಗಾಗಿ ನಿರಂತರವಾಗಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಇದೇ ಸಂದರ್ಭ ಸ್ವಪ್ನಿಲ್ ಜಯದೇವ್ ಎಂಬ ಯುವಕನ ಪರಿಚಯವಾಗಿದೆ. ತನ್ನನ್ನು ಮದ್ವೆಯಾದ್ರೆ ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಹೇಳಿದ್ದ. ಅದನ್ನು ನಂಬಿ ಮದುವೆಯಾದ ಬಳಿಕ ಆತನ ನಿಜರೂಪ ಬಯಲಾಗಿದೆ. ಸ್ವಲ್ಪ ಸಮಯದ ಬಳಿಕ ಆತ ನಿರಂತರ ಕಿರುಕು*ಳ ನೀಡಲು ಆರಂಭಿಸಿದ್ದಾನೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರೂ ಈತನ ಕಿರುಕು*ಳ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.

ಇದನ್ನೂ ಓದಿ : ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

ಗಂಡ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆ*ದರಿಸಿ ಮಾನಸಿಕವಾಗಿ ಹಿಂ*ಸೆ ನೀಡುತ್ತಿದ್ದ. ಇದರಿಂದ ಮನನೊಂದು ಕೀಟನಾಶಕ ಸೇವಿಸಿ ಪ್ರತಿಭಾವಂತ ಆಟಗಾರ್ತಿ ಜೀವಾಂ*ತ್ಯಗೊಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page