Connect with us

LATEST NEWS

WTC 2025: ಫೈನಲ್‌ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ಸೌತ್‌ ಆಫ್ರಿಕಾ ಮತ್ತು ಆಸ್ಟ್ರೇಲಿಯಾ

Published

on

ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್ ಜೂನ್‌ನಲ್ಲಿ ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ಮಹತ್ವದ ಫೈನಲ್ ಪಂದ್ಯಕ್ಕಾಗಿ ಅರ್ಹತೆ ಪಡೆದಿರುವ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಇದೀಗ ತಂಡಗಳನ್ನು ಪ್ರಕಟಿಸಿದೆ.

ಹಾಲಿ ಚಾಂಪಿಯನ್ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ 15 ಆಟಗಾರರ ತಂಡ ಪ್ರಕಟಿಸಿದ್ದರು. ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಬಳಿಕ ಕ್ಯಾಮರೂನ್ ಗ್ರೀನ್ ಫೈನಲ್ ಮೂಲಕ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಸ್ಪಿನ್ನರ್ ಮ್ಯಾಟ್ ಕುಹೈಮನ್ ಕೂಡ ಮತ್ತೆ ತಂಡ ಸೇರಿದ್ದಾರೆ.

ಕಮಿನ್ಸ್ ಮತ್ತು ಹ್ಯಾಜಲ್‌ವುಡ್ ಗಾಯಗಳಿಂದಾಗಿ ಶ್ರೀಲಂಕಾ ಪ್ರವಾಸ ಮತ್ತು ವರ್ಷದ ಆರಂಭದಲ್ಲಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಇಬ್ಬರೂ ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ಮತ್ತೆ ಆಟಕ್ಕೆ ಮರಳಿದ್ದರು. ಇದೀಗ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.

ದಕ್ಷಿಣ ಆಫ್ರಿಕಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆದಿದೆ. ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡಲಿರುವ ದಕ್ಷಿಣ ಆಫ್ರಿಕಾ ಈ ಋತುವಿನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಕ್ರಿಕೆಟ್ ಲೋಕದ ಗಮನ ಸೆಳೆಯುತ್ತಿದೆ. ಇದೀಗ 15 ಆಟಗಾರರ ತಂಡ ಪ್ರಕಟಿಸಿದ್ದು, ತೆಂಬ ಬಮುಮಾ ತಂಡವನ್ನು ಮುನ್ನಡೆಸಲಿದ್ದಾರೆ.

ಡ್ರಗ್ ಕೇಸ್ ನಿಂದ ಆಟದಿಂದ ಹೊರಗಿರುವ ವೇಗಿ ಕಗಿಸೋ ರಬಾಡಾ ಫೈನಲ್ ತಂಡಕ್ಕೆ ಮರಳಿದ್ದಾರೆ. ಗಾಯಗೊಂಡಿದ್ದ ಲುಂಗಿ ಎಂಗಿಡಿ ಕೂಡಾ ತಂಡಕ್ಕೆ ಮರಳಿದ್ದಾರೆ. ಯುವ ವೇಗಿ ಕ್ವೆನಾ ಮಫಾಕಾ ತಂಡದಿಂದ ಹೊರಬಿದ್ದಿದ್ದಾರೆ.

ಇದನ್ನೂ ಓದಿ: ಆರ್‌ಸಿಬಿ ತಂಡಕ್ಕೆ ಮೊದಲ ಮ್ಯಾಚ್; ಇಲ್ಲಿದೆ ನೋಡಿ IPL 2025ರ ಪರಿಷ್ಕೃತ ವೇಳಾಪಟ್ಟಿ

WTC ಫೈನಲ್ ಪಂದ್ಯಕ್ಕೆ ಉಭಯ ತಂಡಗಳು
ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಸ್ಯಾಮ್ ಕೊನ್‌ಸ್ಟಾಸ್, ಮ್ಯಾಟ್ ಕುಹ್ನೆಮನ್, ಮಾರ್ನಸ್ ಲಬುಶೀನ್, ನಾಥನ್ ಲಿಯಾನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಬ್ಯೂ ವೆಬ್‌ಸ್ಟರ್. ಪ್ರವಾಸಿ ಮೀಸಲು: ಬ್ರೆಂಡನ್ ಡಾಗೆಟ್,

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಏಡೆನ್ ಮಾರ್ಕ್ರಾಮ್, ಲುಂಗಿ ಎಂಗಿಡಿ, ಟೋನಿ ಡಿ ಜಾರ್ಜಿ, ಡೇವಿಡ್ ಬೆಡಿಂಗ್‌ಹ್ಯಾಮ್, ಕೇಶವ್ ಮಹಾರಾಜ್, ಟ್ರಿಸ್ಟಾನ್ ಸ್ವಟ್ಸ್, ಕಾರ್ಬಿನ್ ಬಾಷ್, ಸೆನುರಾನ್ ಮುತ್ತುಸಾಮಿ, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ. ಕೈಲ್ ವೆರೆನ್, ಡೇನ್ ಪ್ಯಾಟರ್ಸನ್, ವಿಯಾನ್ ಮುಲ್ಲರ್, ರಿಯಾನ್ ರಿಕಲ್ಟನ್.

DAKSHINA KANNADA

ಎಎನ್ಎಫ್‌ ವಿಸರ್ಜನೆ ಮಾಡಲಾಗಿಲ್ಲ : ಗೃಹ ಸಚಿವ ಪರಮೇಶ್ವರ್

Published

on

ಮಂಗಳೂರು : ಎಎನ್ಎಫ್‌ ವಿಸರ್ಜನೆ ಮಾಡಲಾಗಿಲ್ಲ. ಅದರಲ್ಲಿರುವ ಸಿಬ್ಬಂದಿ ಸಂಖ್ಯೆ ಕಡಿಮೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ, ಜಿ. ಪರಮೇಶ್ವರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕೆಲವು ಕೊ*ಲೆ ಪ್ರಕರಣಗಳಿದಾಗಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು  ಸರಿದಾರಿಗೆ ತಂದು ಶಾಂತಿ ಕಾಪಾಡುವ ಉದ್ದೇಶದಿಂದ ರಚಿಸಲಾಗಿರುವ ವಿಶೇಷ ಕಾರ್ಯಪಡೆಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಇದನ್ನೂ ಓದಿ : ಬಾಂ*ಬ್ ಬೆದರಿಕೆ; ದೆಹಲಿಗೆ ಬರುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

ಸದ್ಯದ ಮಟ್ಟಿಗೆ ನಕ್ಸಲ್‌ ನಿಗ್ರಹ ದಳದ ಅಗತ್ಯತೆ ಇಲ್ಲದಿದ್ದರೂ ಯಾವುದಾದರೂ ಸಂದರ್ಭದಲ್ಲಿ ಅಗತ್ಯ ಬಂದರೆ ಬೇಕಾಗುತ್ತದೆ. ಈಗ  ನಮ್ಮ ರಾಜ್ಯದಲ್ಲಿ ನಕ್ಸಲರು ಇಲ್ಲದಿದ್ದರೂ ಒರಿಸ್ಸಾ, ಅಸ್ಸಾಂ ಮೊದಲಾದ ಕಡೆ ನಕ್ಸಲ್‌ ಚಟುವಟಿಕೆ ಇದೆ. ಅಲ್ಲಿಂದ ಇಲ್ಲಿಗೆ ಬರಲಾರರು ಎನ್ನಲಾಗದು. ಅವರು ಬಂದರೆ ತಯಾರಿರಬೇಕೆಂದು ನಕ್ಸಲ್‌ ನಿಗ್ರಹ ಪಡೆಯ ಸ್ವಲ್ಪ ಭಾಗವನ್ನು ಉಳಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

Continue Reading

LATEST NEWS

ಬಾಂ*ಬ್ ಬೆದರಿಕೆ; ದೆಹಲಿಗೆ ಬರುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್

Published

on

ಮಂಗಳೂರು/ಬ್ಯಾಂಕಾಕ್ : ಥಾಯ್ಲೆಂಡ್‌ನ ಫುಕೆಟ್‌ನಿಂದ ಭಾರತದ ದೆಹಲಿಗೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂ*ಬ್ ಬೆದರಿಕೆ ಬಂದಿದೆ. ಹೀಗಾಗಿ ತುರ್ತು ಲ್ಯಾಂಡ್ ಮಾಡಲಾಗಿದೆ ಎಂದು ವರದಿಯಾಗಿದೆ.

ಸಾಂದರ್ಭಿಕ ಚಿತ್ರ

ಎಐ 379 ತುರ್ತು  ಭೂ ಸ್ಪರ್ಶ ಮಾಡಿದೆ. ಈ ವಿಮಾನದಲ್ಲಿ 156 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 9.30ಕ್ಕೆ ಫುಕೆಟ್ ವಿಮಾನ ನಿಲ್ದಾಣದಿಂದ ಈ ವಿಮಾನ ಟೇಕಾಫ್ ಅಗಿತ್ತು. ಅಂಡಮಾನ್ ಸಮುದ್ರದ ಮೇಲೆ ದೊಡ್ಡದೊಂದು ಸುತ್ತು ಹೊಡೆದು ಬಳಿಕ ದಕ್ಷಿಣ ಥಾಯ್ ದ್ವೀಪಕ್ಕೆ ಮರಳಿದೆ ಎಂದು ತಿಳಿದು ಬಂದಿದೆ. ಈ ವಿಮಾನ ಮಧ್ಯಾಹ್ನ 12.40ಕ್ಕೆ ದೆಹಲಿಗೆ ಬಂದಿಳಿಯಬೇಕಿತ್ತು.

ಇದನ್ನೂ ಓದಿ : ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ಪಂಜಾಬ್‌ನಲ್ಲಿ ತುರ್ತು ಭೂಸ್ಪರ್ಶ

ವಿಮಾನ ತುರ್ತು ಭೂ ಸ್ಪರ್ಶ ಮಾಡುತ್ತಿದ್ದಂತೆ ಪ್ರಯಾಣಿಕರೆಲ್ಲರನ್ನು ಅವರ ಲಗೇಜ್‌ನೊಂದಿಗೆ ಕೆಳಗಿಳಿಸಲಾಯಿತು. ಭದ್ರತಾ ಸಿಬ್ಬಂದಿ ಪ್ರಯಾಣಿಕರು ಮತ್ತು ಸರಕುಗಳನ್ನು ಸ್ಕ್ಯಾನ್ ಮಾಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

Continue Reading

LATEST NEWS

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತೆ ಸಿಬಿಐ ವಶಕ್ಕೆ

Published

on

ಮಂಗಳೂರು/ಬೆಂಗಳೂರು :  ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸುಪ್ರೀಂಕೋರ್ಟ್‌ನಿಂದ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಿದ್ದರು. ಈ ವೇಳೆ ಸಿಬಿಐ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ ಎದು ತಿಳಿದುಬಂದಿದೆ.


ಬಿಜೆಪಿ ಮುಖಂಡ ಯೋಗೀಶ್ ಗೌಡ ಹ*ತ್ಯೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿತ್ತು. ಹಾಗೇ ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಆದೇಶಿಸಿತ್ತು.

ಈ ಹಿನ್ನೆಲೆ ಕೋರ್ಟ್ ಮುಂದೆ ವಿನಯ್ ಕುಲಕರ್ಣಿ ಹಾಜರಾಗಿದ್ದು, ಅವರನ್ನು ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಏನಿದು ಪ್ರಕರಣ?

2016 ರಲ್ಲಿ ಧಾರವಾಡದಲ್ಲಿ ಬಿಜೆಪಿ  ನಾಯಕ ಯೋಗೀಶ್ ಗೌಡ ಹ*ತ್ಯೆ ನಡೆದಿತ್ತು. ಈ ಸಂಬಂಧ ಧಾರವಾಡ ಗ್ರಾಮಾಂತರ ಶಾಸಕ ವಿನಯ್ ಕುಲಕರ್ಣಿ 2020 ರಲ್ಲಿ ಬಂಧಿಸಲ್ಪಟ್ಟಿದ್ದರು. 2021 ರಲ್ಲಿ ಜಾಮೀನು ಪಡೆದು ಹೊರಬಂದಿದ್ದರು.

ಅವರು  ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ, ಜಾಮೀನು ಷರತ್ತುಗಳನ್ನು ಉಲ್ಲಂಘಿಸಲಾಗಿದೆ ಎಂದು ಸುಪ್ರೀಂಕೋರ್ಟ್‌ ಜಾಮೀನನ್ನು ರದ್ದುಗೊಳಿಸಿದೆ.

ಇದನ್ನೂ ಓದಿ : ಸುಟ್ಟು ಭಸ್ಮವಾದ ವಿಮಾನ…ಹಾನಿಯಾಗದ ಸ್ಥಿತಿಯಲ್ಲಿ ಸಿಕ್ಕಿತು ಭಗವದ್ಗೀತೆ ಪುಸ್ತಕ!

ಚುನಾವಣೆ ಗೆದ್ದಿದ್ದ ಕುಲಕರ್ಣಿ!

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು, ಕ್ಷೇತ್ರದ ಹೊರಗಿದ್ದರೂ ಗೆದ್ದು ಅಚ್ಚರಿ ಮೂಡಿಸಿದ್ದರು. 2 ವರ್ಷಗಳ ಕಾಲ ಕ್ಷೇತ್ರದ ಹೊರಗಿದ್ದುಕೊಂಡೇ ಆಡಳಿತ ನಡೆಸಿದ್ದರು. ಇದೀಗ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಮತ್ತೆ ಜೈಲು ಸೇರಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page