Connect with us

bangalore

ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

Published

on

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಹರಿಯಾಣ ಮೂಲದ ಸುಧೀರ್ ಕುಮಾರ್ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೆಂಗಳೂರಲ್ಲಿ ಲೇಡಿ ಫಿಟ್ನೆಸ್, ನ್ಯೂಟ್ರೀಷಿಯನ್ ಇನ್‌ಫ್ಲೂಯೆನ್ಸರ್ ಆಗಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾ ಮೂಲಕ ಆತ ಲೈಂಗಿಕವಾಗಿ ಪ್ರಚೋದಿಸುವಂತೆ ಮೆಸೇಜ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಪೀಡಿಸಲು ಶುರುಮಾಡಿದ್ದ. ಜೊತೆಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸೆ ನೀಡುತ್ತಿದ್ದ. ಅದಾದ ಬಳಿಕ ವಾಟ್ಸಪ್ ನಂಬರ್ ಪಡೆದುಕೊಂಡು, ಪುನಃ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ. ದಿನ ಕಳೆದಂತೆ ಬೆಂಬಿಡದೇ ಯುವತಿಯನ್ನು ಕಾಡಲು ಶುರುಮಾಡಿದ್ದ. ಕೊನೆಗೆ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ. ಬೆಂಗಳೂರಿಗೆ ಬಂದು ಜಿಮ್ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ.

ಇದನ್ನೂ ಓದಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಚಾರ ತಿಳಿಯುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ವಿಭಾಗ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

bangalore

ತಾಯಿಯ ಮೆಟರ್ನಿಟಿ ಫೋಟೋಶೂಟ್‌ ವೇಳೆ ನೀರಿಗೆ ಬಿದ್ದು 3 ವರ್ಷದ ಮಗು ಸಾವು

Published

on

ನೆಲಮಂಗಲ: ಖಾಸಗಿ ರೆಸಾರ್ಟ್‌ ಒಂದರಲ್ಲಿ ತಾಯಿಯ ಮೆಟರ್ನಿಟಿ ಫೋಟೋಶೂಟ್ ನಡೆಯುತ್ತಿದ್ದಾಗ ಮೊದಲನೇ ಮಗು ನೀರಿಗೆ ಬಿದ್ದು ಮೃತಪಟ್ಟಿರುವ ದುರಂತ ಘಟನೆ ನೆಲಮಂಗಲದ ಸಮೀಪದ ಗಿಡ್ಡೇನಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮೀರ್‌(3) ಮೃತಪಟ್ಟ ಕಂದಮ್ಮ.


ಲಕ್ಷ್ಮೀರ್ ಜೆ.ಪಿ. ನಗರ ನಿವಾಸಿ, ಸ್ವಾತಿ ಮತ್ತು ಚರಣ್ ರಾಜ್ ದಂಪತಿಯ ಮಗುವಾಗಿದ್ದು, ಒಂದು ವಾರದ ಹಿಂದೆ ಕೆಲಸದ ನಿಮಿತ್ತ ಚರಣ್ ರಾಜ್ ವಿದೇಶಕ್ಕೆ ತೆರಳಿದ್ದರು. ಪೋಟೋ ಶೂಟ್ ಮಾಡಿಸುವುದಾಗಿ ಗಂಡನ ಬಳಿ ಹೇಳಿ ಸ್ವಾತಿ ಸ್ನೇಹಿತೆಯೊಂದಿಗೆ ಬಂದಿದ್ದರು.

ಎರಡನೇ ಮಗುವಿನ ಸಂತೋಷದಲ್ಲಿದ್ದ ತಾಯಿ ಫೋಟೋಶೂಟ್‌ನಲ್ಲಿ ಬ್ಯುಸಿಯಾಗಿದ್ದ ವೇಳೆ ಅವರ 3 ವರ್ಷದ ಮಗು ಆಟವಾಡುತ್ತಾ ಹತ್ತಿರದಲ್ಲಿದ್ದ ನೀರಿನ ಪೂಲ್‌ಗೆ ಬಿದ್ದಿದೆ. ಮಗು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದೆ. ಮಗುವಿನ ವಿಚಾರದಲ್ಲಿನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ಯುವತಿಯನ್ನು ಕೊಂದು, ಪೆಟ್ಟಿಗೆಯಲ್ಲಿ ತುಂಬಿ ನೀರಿನ ಟ್ಯಾಂಕ್‌ಗೆ ಎಸೆದ ಪ್ರಿಯಕರ!

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Continue Reading

bangalore

ನೆಲಮಂಗಲ ಬಳಿ ಭೀಕರ ಅಪಘಾತ; ಡಿವೈಡರ್‌ಗೆ ದಾಟಿ ಬಸ್ಸಿಗೆ ಗುದ್ದಿದ ಕಾರು; ಐವರ ದುರ್ಮರಣ

Published

on

ಬೆಂಗಳೂರು: ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ ದಾಟಿ, ಎದುರುಗಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನೆಲಮಂಗಲದ ಜಿಂದಾಲ್ ಬಳಿ ನಡೆದಿದೆ.


ತುಮಕೂರು ಕಡೆಯಿಂದ ಬೆಂಗಳೂರಿನತ್ತ ಕಾರಿನಲ್ಲಿ ಐವರು ಬರುತ್ತಿದ್ದಾಗ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿದ್ದಾರೆ. ಇವರಲ್ಲಿ ದೊಡ್ಡಬಳ್ಳಾಪುರದ ಹರ್ಷಿತ್ ಮತ್ತು ನಿಖಿತ್ ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಪತ್ತೆ ಹಚ್ಚಲಾಗುತ್ತಿದೆ.

ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತನೂ ಮೃತಪಟ್ಟಿದ್ದಾನೆ. ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಕಾರು ಗುದ್ದಿದ ಪರಿಣಾಮ ಬಸ್​​ ಮುಂಭಾಗ ಜಖಂ ಆಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: ಹೊಸಕೋಟೆಯ ಹೆದ್ದಾರಿಯಲ್ಲಿ ಸರಣಿ ಅಪಘಾತ; 7 ಮಂದಿ ಸ್ಥಳದಲ್ಲೇ ದುರ್ಮರಣ

ಅತಿಯಾದ ವೇಗವೇ ಅಪಘಾತಕ್ಕೆ ಪ್ರಾಥಮಿಕ ಕಾರಣವೆಂದು ಶಂಕಿಸಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬಗ್ಗೆ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

bangalore

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಜೋಸೈಮನ್ ಇನ್ನಿಲ್ಲ

Published

on

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.


ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆ ನಡೆಯುತ್ತಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಜೋ ಸೈಮನ್ ಸಭೆಯ ಮಧ್ಯೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಮೂಲತಃ ಮಂಡ್ಯದವರಾದ ಜೋಸೈಮನ್ ಚಿತ್ರರಂಗದಲ್ಲಿ ಮೇಕ್ ಅಪ್ ಬಾಯ್ ಆಗಿ ವೃತ್ತಿಜೀವನ ಆರಂಭಿಸಿದರು. ಬಳಿಕ ನಿರ್ದೇಶಕರಾಗಿ ನೂರಕ್ಕೂ ಹೆಚ್ಚು ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಪುಟ್ಟ ಕಂದಮ್ಮ: ದೇಶದ ಅತಿಕಿರಿಯ ಅಂಗಾಂಗ ದಾನಿ ಆಲಿನ್ ಶೆರಿನ್

ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಚಿತ್ರ ಸಾಹಸಸಿಂಹ, ರವಿವರ್ಮ ಸೇರಿದಂತೆ ಸಿಂಹದ ಜೋಡಿ, ಮಹಾ ಪ್ರಚಂಡರು, ಏಜೆಂಟ್ ಅಮ‌ರ್ ನಂತಹ ಸಾಹಸ ಪ್ರಧಾನ ಚಿತ್ರಗಳನ್ನು ಜೋಸೈಮನ್ ನಿರ್ದೇಶಿಸಿದ್ದಾರೆ. ನಿರ್ದೇಶಕನಾಗಿ ಮಾತ್ರವಲ್ಲದೆ, ನಟನಾಗಿ, ಗೀತ ಸಾಹಿತಿಯಾಗಿಯೂ ಜನಪ್ರಿಯರಾಗಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page