Connect with us

LATEST NEWS

ರೈಲಿನ ಬಾಗಿಲಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಕಂಬಕ್ಕೆ ಢಿಕ್ಕಿ ಹೊಡೆದು ನದಿಗೆ ಬಿದ್ದು ಯುವಕ ಸಾವು

Published

on

ಬೆಂಗಳೂರು: ಚಲಿಸುತ್ತಿದ್ದ ರೈಲಿನ ಬಾಗಿಲಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಯುವಕನೋರ್ವ ಮೇಲ್ಸೇತುವೆಯಿಂದ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.
ಅಭಿಷೇಕ್ ಮೃತ ಯುವಕ

ಘಟನೆ ಹಿನ್ನೆಲೆ
ಬಾರ್ ಅಂಡ್ ರೆಸ್ಟೋರೆಂಟ್​ನಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್​, ನ. 6 ರಂದು ಸ್ನೇಹಿತರೊಂದಿಗೆ ರೈಲಿನಲ್ಲಿ ತನ್ನ ಮಂಡ್ಯದ ಪಾಂಡವಪುರ ಊರಿಗೆ ಹೋಗುತ್ತಿದ್ದ.

ಮಾರ್ಗದುದ್ದಕ್ಕೂ ಸ್ನೇಹಿತರೊಂದಿಗೆ ಸೆಲ್ಫಿ ಫೋಟೋಗಳನ್ನು ತೆಗೆದಿದ್ದ. ಮಧ್ಯರಾತ್ರಿ ಪಾಂಡವಪುರ ರೈಲ್ವೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ಸ್ನೇಹಿತರೆಲ್ಲರೂ ಇಳಿದಿದ್ದರು‌.

ಆದರೆ ಅಭಿಷೇಕ್ ಮಾತ್ರ ಕಾಣೆಯಾಗಿದ್ದ. ಸತತ ಶೋಧ ನಡೆಸಿದರೂ ಅಭಿಷೇಕ್ ಸುಳಿವು ಸಿಕ್ಕಿರಲಿಲ್ಲ‌. ಅಲ್ಲಿಂದ ಸ್ನೇಹಿತೆರಲ್ಲ ಮನೆಗೂ ಹೋಗಿದ್ದರು. ಎರಡು ದಿನವಾದರೂ ಅಭಿಷೇಕ್ ಬಾರದ ಹಿನ್ನೆಲೆ ಆತಂಕಗೊಂಡ ಮನೆಯವರು ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್​ ಠಾಣೆಯಲ್ಲಿ ನಾಪತ್ತೆ ಕಂಪ್ಲೇಟ್ ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಇನ್​ಸ್ಪೆಕ್ಟರ್ ಪುಟ್ಟಸ್ವಾಮಿ ನೇತೃತ್ವದ ತಂಡ ಪಾಂಡವಪುರಕ್ಕೆ ರೈಲಿನಲ್ಲಿ ಹೋಗಿರುವ ಬಗ್ಗೆ ಸ್ನೇಹಿತರಿಂದ ಮಾಹಿತಿ ಸಂಗ್ರಹಿಸಿ,

ಮಂಡ್ಯ ಪೊಲೀಸರು ಹಾಗೂ ಸ್ಥಳೀಯ ಅಗ್ನಿಶಾಮಕದಳಕ್ಕೂ ಮಾಹಿತಿ ನೀಡಿದ್ದರು. ನಾಲ್ಕು ಐದು ದಿನಗಳ ಕಾಲ ಹುಡುಕಾಟ ನಡೆಸಿದ್ದರೂ ಅಭಿಷೇಕ್ ಬಗ್ಗೆ ಸುಳಿವು ಸಿಕ್ಕಿರಲಿಲ್ಲ.‌
ಬಳಿಕ ಕೊನೆ ರೈಲಿನಲ್ಲಿ ಸೆಲ್ಫಿ ತೆಗೆದುಕೊಂಡಿದ್ದ ಸ್ಥಳದ ಆಧಾರದ‌ ಮೇಲೆ ಕಾವೇರಿ‌ ಉಪನದಿಯಾಗಿ ಲೋಕಪಾವನಿ ನದಿ ರೈಲ್ವೆ ಬ್ರಿಡ್ಜ್ ನಿಂದ ಕಂಬಿಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿರಬಹುದು

ಎಂಬ ಶಂಕೆ‌ ಮೇರೆಗೆ ಅಗ್ನಿಶಾಮಕದಳ ಹಾಗೂ ಸ್ಥಳೀಯ ಮೀನುಗಾರರ ಸಹಾಯದಿಂದ ನದಿಯಲ್ಲಿ ಶೋಧ ನಡೆಸಲಾಗಿದೆ.

ಸತತ ಮೂರು ದಿನಗಳ ಬಳಿಕ ಶ್ರೀರಂಗಪಟ್ಟಣ ಬಳಿಯ ಆರು ಕಿಲೋಮೀಟರ್ ದೂರದ ನದಿ ನೀರಿನಲ್ಲಿ ಅಭಿಷೇಕ್ ಶವ ಪತ್ತೆಯಾಗಿದೆ.

ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಪೋಷಕರಿಗೆ ಒಪ್ಪಿಸಲಾಗಿದೆ ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ.

ರೈಲಿನಲ್ಲಿ ಪ್ರಯಾಣ ಮಾಡುವಾಗ ರೈಲ್ವೆ ಬಾಗಿಲು ಬಳಿ ನಿಲ್ಲಬೇಡಿ. ಸೆಲ್ಫಿ ಗೀಳಿಗೆ ಮುಂದಾಗಿ ರೈಲಿನ ಬಾಗಿಲಿನಲ್ಲಿ ನಿಂತುಕೊಳ್ಳಬೇಡಿ ಎಂದು ಡಿಸಿಪಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

READ IN ENGLISH : https://www.nammakudlaenglish.com/speed-limit-imposed-on-surathkal-nanthur-junction-national-highway/

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

LATEST NEWS

ಭೀ*ಕರ ರಸ್ತೆ ಅಪ*ಘಾತ; ಇಬ್ಬರು ಡ್ಯಾನ್ಸರ್ಸ್​ ಸ್ಥಳದಲ್ಲೇ ಸಾ*ವು

Published

on

ಮಂಗಳೂರು/ನೆಲಮಂಗಲ: ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾ*ವನ್ನಪ್ಪಿರುವ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್‌ನಲ್ಲಿ ನಡೆದಿದೆ.


ಮೃ*ತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್ (22) ಮತ್ತು ಕುರುಬರಹಳ್ಳಿ ನಿವಾಸಿ ಸಹನಾ(21) ಎಂದು ಗುರುತಿಸಲಾಗಿದೆ.

ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್​ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್​​ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್​​ ಒಂದನ್ನು ಮುಗಿಸಿಕೊಂಡು ಕುಣಿಗಲ್​ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಬೈಕ್​ಗೆ ಡಿ*ಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.

READ IN ENGLISH :https://www.nammakudlaenglish.com/horrific-road-accident-two-dancers-die-on-the-spot/

ಇದನ್ನೂ ಓದಿ: ಬೆಳ್ತಂಗಡಿ: ಹಿಟಾಚಿಗೆ ಖಾಸಗಿ ಬಸ್ ಡಿ*ಕ್ಕಿ; ಓರ್ವ ಸಾ*ವು, ಹಲವರಿಗೆ ಗಾಯ

ಅಪ*ಘಾತದ ಬೆನ್ನಲ್ಲೇ ಲಾರಿ ಸಮೇತ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page