Connect with us

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

kerala

ಉತ್ಸವದ ವೇಳೆ ಅರ್ಚಕನನ್ನು ಸೊಂಡಿಲಿನಿಂದ ಎತ್ತಿ ಎಸೆದ ಆನೆ; ಶಾಕಿಂಗ್ ವೀಡಿಯೋ ವೈರಲ್!

Published

on

ತಿರುವನಂತಪುರಂ: ಕೇರಳದ ತ್ರಿಶೂರ್ ಜಿಲ್ಲೆಯ ಅನ್ನಮನದ ಮಹಾದೇವ ದೇವಾಲಯದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗುರುವಾರ ಬೆಳಿಗ್ಗೆ ಸುಮಾರು 9 ಗಂಟೆಗೆ ‘ಶೀವೇಲಿ’ ಮೆರವಣಿಗೆಯ ಸಿದ್ಧತೆ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.


ಮಾವುತ ಅರ್ಚಕರೊಬ್ಬರು ಆನೆಯ ಮೇಲೆ ಹತ್ತಲು ಸಹಾಯ ಮಾಡುತ್ತಿದ್ದರು. ಈ ವೇಳೆ ಆನೆ ಹತ್ತಿರದಲ್ಲಿ ನಿಂತಿದ್ದ ಮತ್ತೊಬ್ಬ ಅರ್ಚಕನನ್ನು ಏಕಾಏಕಿ ಸೊಂಡಿಲಿನಿಂದ ಎತ್ತಿ ಎಸೆದಿದೆ. ಇದರ ಪರಿಣಾಮ 26 ವರ್ಷದ ಅರ್ಚಕ ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಪೊಲೀಸ್ ಮನೆಗೆ ಕನ್ನ ಹಾಕಿ ಕೈಚಳಕ ತೋರಿದ ಕಳ್ಳರು

ಅರ್ಚಕರಿಗೆ ಮುಖಕ್ಕೆ ತೀವ್ರ ಗಾಯಗಳಾಗಿದ್ದು, ಕೈ ಮೂಳೆ ಮುರಿತ ಸಂಭವಿಸಿದೆ. ಪ್ರಸ್ತುತ ಅವರು ಅಂಕಮಾಲಿಯ ಅಪೋಲೋ ಅಡ್ಲಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ ದೇವಾಲಯದ ಆಡಳಿತ ಮಂಡಳಿಯು ಉಳಿದ ಉತ್ಸವದ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

Continue Reading

kerala

ಕುಟುಂಬದೊಂದಿಗೆ ತಿಂಡಿ ತಿನ್ನುತ್ತಿದ್ದಾಗಲೇ ಕುಸಿದು ಬಿದ್ದು 21ರ ತರುಣ ಸಾವು!

Published

on

ಕೊಚ್ಚಿ: ತನ್ನ ಕುಟುಂಬದೊಂದಿಗೆ ತಿಂಡಿ ತಿನ್ನುತ್ತಿದ್ದಾಗಲೇ ಯುವಕನೊಬ್ಬ ಅನಿರೀಕ್ಷಿತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದ ಕೊಚ್ಚಿಯ ಮುನಂಬಂನಲ್ಲಿ ನಡೆದಿದೆ. ಮೃತ ವ್ಯಕ್ತಿ ಕೊಚ್ಚಿ ಮುನಂಬಂ ಕುರುಪ್ಪಸೇರಿಯ ಅಜಿ ಅವರ ಪುತ್ರ ಆಂಟನ್ (21).


ಭಾನುವಾರ ಬೆಳಿಗ್ಗೆ ಚರ್ಚ್‌ಗೆ ಹೋಗಿ ಬಂದ ನಂತರ ಕುಟುಂಬದವರೊಂದಿಗೆ ಕುಳಿತು ತಿಂಡಿ ತಿನ್ನುತ್ತಿದ್ದರು. ಮೊದಲು ಪಫ್ಸ್ ಮತ್ತು ನಂತರ ಉಪ್ಪಿಟ್ಟು ತಿನ್ನುವಾಗ ಇದ್ದಕ್ಕಿದ್ದಂತೆ ಅಸ್ವಸ್ಥತೆ ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಮಗು ಸೇರಿ ನಾಲ್ವರು ದುರ್ಮರಣ

ಆಹಾರ ಶ್ವಾಸನಾಳದಲ್ಲಿ ಸಿಲುಕಿಕೊಂಡಿದ್ದರಿಂದ ಸಾವು ಸಂಭವಿಸಿದೆಯೇ ಅಥವಾ ಹೃದಯಾಘಾತವೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

kerala

ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಆಪ್ತ ಸ್ನೇಹಿತ ನೇಣಿಗೆ ಶರಣು!

Published

on

ಕೇರಳ: ಕೇರಳದ ಸೋಶಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನ ಪಾಪು ಆಲಿಯಾಸ್‌ ರೇಷ್ಮಾ ಆತ್ಮಹತ್ಯೆ ಮಾಡಿಕೊಂಡ ಕೆಲವೇ ದಿನಗಳ ಅಂತರದಲ್ಲಿ ಇದೀಗ ಅವರ ಆಪ್ತ ಸ್ನೇಹಿತ ಆತ್ಮಹತ್ಯೆಗೆ ಶರಣಾಗಿದ್ದಾರೆ.


ಮೃತನನ್ನು ಸಂದೇಶ್‌ ಕೆ.(29) ಎಂದು ಗುರುತಿಸಲಾಗಿದೆ. ಕಾಸರಗೋಡಿನ ಮನ್ನಿಪಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ರೇಷ್ಮಾ ಆಪ್ತ ಸ್ನೇಹಿತ ಸಂದೇಶ್ ಅವರು ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಫೆಬ್ರವರಿ 9 ರಂದು ಚಿನ್ನು ಪಾಪು ಎಂದೇ ಜನಪ್ರಿಯರಾಗಿದ್ದ ರೇಷ್ಮಾ ಕಾಸರಗೋಡಿನ ಬಾಡಿಗೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ರೇಷ್ಮಾ ಅವರ ಸಾವಿನ ತನಿಖೆಯ ಭಾಗವಾಗಿ ಸಂದೇಶ್ ಅವರ ಹೇಳಿಕೆಯನ್ನು ದಾಖಲಿಸಲಾಗಿದ್ದು, ಇದಾದ ಕೆಲವೇ ದಿನಗಳಲ್ಲಿ ಸಂದೇಶ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಪೆಟ್ರೋಲ್ ಬಂಕ್‌ನ ಲೈಟಿಂಗ್ ಕಂಬ ಬಿದ್ದು ಸಮಾಜವಾದಿ ಪಕ್ಷದ ನಾಯಕ ಸಾವು

ಚಿನ್ನು ಪಾಪು ಹಾಗೂ ಸ್ನೇಹಿತ ಸಂದೇಶ್ ಅವರ ಸಾವಿನ ನಡುವೆ ಏನಾದರೂ ಸಂಬಂಧವಿದೆಯೇ ಎನ್ನುವುದರ ಬಗ್ಗೆ ಕಾಸರಗೋಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page