Connect with us

DAKSHINA KANNADA

ಉಳ್ಳಾಲದಲ್ಲಿ ಹಿಂದೂ ಯುವಕನ‌ ಕೊಲೆಗೆ ಯತ್ನ – ಅಪಘಾತ ನೆಪದಲ್ಲಿ ಸ್ಥಳೀಯ ಯುವಕರಿಂದ ಅಟ್ಯಾಕ್..!?

Published

on

ಮಂಗಳೂರು : ಅಪಘಾತದ ಕಾರಣವನ್ನೇ ಮುಂದಿಟ್ಟು ಯುವಕರ ತಂಡವೊಂದು ಬೈಕ್ ಸವಾರ ಯುವಕನ ಮೇಲೆ ಮಾರಣಾಂತಿಕ ಹಲ್ಲೆಗೈದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.

ಇಲ್ಲಿನ ಧರ್ಮನಗರ ನಿವಾಸಿ ದಿವಾಕರ್ (34)ಹಲ್ಲೆಗೊಳಗಾದ ಯುವಕನಾಗಿದ್ದಾನೆ. ದಿವಾಕರ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು ಗುರುವಾರ ಬೆಳಗ್ಗೆ 9 ಗಂಟೆಯ ವೇಳೆಗೆ ಉಳ್ಳಾಲದ ಅಬ್ಬಕ್ಕ ಸರ್ಕಲ್ ನ ಎಟಿಎಂ ಸೆಂಟರ್ ಬಳಿ ತನ್ನ ಬೈಕನ್ನು ಧರ್ಮನಗರದ ಕಡೆಗೆ ತಿರುಗಿಸುತ್ತಿದ್ದ ವೇಳೆ ಹಿಂದಿನಿಂದ ಸ್ಕೂಟಿ ಚಲಾಯಿಸಿಕೊಂಡು ಬಂದ ಮುಸ್ಲಿಂ ಯುವತಿಯೊಬ್ಬರು ದಿವಾಕರ್ ಅವರ ಬೈಕಿಗೆಡಿಕ್ಕಿಯಾಗಿದ್ದರು ಎನ್ನಲಾಗಿದೆ.

ಈ ವೇಳೆ ಯುವತಿ ಮತ್ತು ದಿವಾಕರ್ ಅವರ ದ್ವಿಚಕ್ರ ವಾಹನಗಳು ಜಖಂಗೊಂಡಿದ್ದು ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ದಿವಾಕರ್‌ ಪೊಲೀಸ್ ದೂರು ನೀಡುವುದಾಗಿ ಹೇಳಿದ್ದು ಯುವತಿ ತನ್ನ ಸಹೋದರ ಮಾತನಾಡುತ್ತಾನೆಂದು ಹೇಳಿ ನಂಬರ್ ಪಡೆದು ತೆರಳಿದ್ದರು.

ನಿನ್ನೆ ರಾತ್ರಿ ದಿವಾಕರ್ ಅವರಿಗೆ ಯುವತಿಯ ಸೋದರನೆಂದು ಹೇಳಿಕೊಂಡ
ವ್ಯಕ್ತಿ ಕರೆ ಮಾಡಿದ್ದು ಮಾತಾನಾಡಲು ಸಿಗುವಂತೆ ಹೇಳಿದ್ದಾನೆ. ನಿನ್ನೆ ಸಂಜೆ 6 ಗಂಟೆಗೆ ಕರೆ ಮಾಡಿದ ಅದೇ ವ್ಯಕ್ತಿ ಧರ್ಮನಗರದ ರಝಾಕ್ ಎಂಬವರ ಅಂಗಡಿ ಮುಂಭಾಗ ಕರೆಸಿಕೊಂಡಿದ್ದು ಸ್ಕೂಟಿ ಜಖಂಗೊಂಡಿದ್ದರ ಖರ್ಚು 4,500 ರೂ. ನೀಡುವಂತೆ
ಕೇಳಿದ್ದಾನೆ.

ದಿವಾಕರ್ ತನ್ನ ಬೈಕ್ ಕೂಡಜಖಂಗೊಂಡಿದ್ದು ಅದರ ಖರ್ಚನ್ನು ಕೇಳಿದ್ದು ಪೊಲೀಸ್ ದೂರು ನೀಡೋಣ, ಅಲ್ಲೇ ತೀರ್ಪು ಆಗಲಿ ಎಂದು ಹೇಳಿದ್ದಾರೆ.  ಅಷ್ಟಕ್ಕೇ ಕ್ರುದ್ಧನಾದ ಯುವತಿಯ ಸಹೋದರ ಮತ್ತು ಆತನ ಜೊತೆಯಲ್ಲಿದ್ದ ಇಬ್ಬರು
ಯುವಕರು, ದಿವಾಕರ್ ಮೇಲೆ ಕೈಮಾಡಿದ್ದು ಕೈ ಮತ್ತು ತಲೆಗೆ ಕಲ್ಲಿನಿಂದ ಹಲ್ಲೆಗೈದಿದ್ದಾರೆ.

ಅಪಘಾತವೆಸಗಿದ ಯುವತಿಯ ಸ್ಕೂಟರಿನ ಫೋಟೊವನ್ನು ದಿವಾಕರ್ ಕ್ಲಿಕ್ಕಿಸಿದ್ದು ವಾಹನದ ವಿಮೆ ಅವಧಿ ಮುಗಿದಿರುವುದಾಗಿ ಹೇಳಲಾಗುತ್ತಿದೆ.

ಗಾಯಾಳು ದಿವಾಕರ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವೆರೆದಿದೆ.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page